ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಆರೋಗ್ಯ, ಶಿಕ್ಷಣ,ಸಂಶೋಧನೆಯಲ್ಲಿ ಮಹತ್ವದ ಕೊಡುಗೆ ನೀಡಿದೆ: ರಾಜ್ಯಪಾಲರು


ಬೆಂಗಳೂರು
(Bengaluru) ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು (Rajiv Gandhi University of Health Sciences) ಕಳೆದ ಮೂರು ದಶಕಗಳಲ್ಲಿ ಆರೋಗ್ಯ ಶಿಕ್ಷಣ, ಸಂಶೋಧನೆ, ನಾವೀನ್ಯತೆ ಹಾಗೂ ಸಾರ್ವಜನಿಕ ಆರೋಗ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಕರ್ನಾಟಕ ಹಾಗೂ ದೇಶದ ಆರೋಗ್ಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಕರ್ನಾಟಕ ರಾಜ್ಯಪಾಲ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Gehlot) ಅವರು ಹೇಳಿದರು.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ, ಮಾದಕ ರಹಿತ ಭಾರತ ಸಮ್ಮೇಳನ ಹಾಗೂ ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಉಪಸ್ಥಿತಿಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಉಪಸ್ಥಿತಿಯು ವಿಶ್ವವಿದ್ಯಾಲಯ ಕುಟುಂಬಕ್ಕೆ ಹಾಗೂ ಕರ್ನಾಟಕ ರಾಜ್ಯಕ್ಕೆ ವಿಶೇಷ ಗೌರವ ತಂದಿದೆ ಎಂದು ರಾಜ್ಯಪಾಲರು ಹೇಳಿದರು.

“1996ರಲ್ಲಿ ಸ್ಥಾಪಿತವಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಇಂದು ದೇಶದ ಅತಿದೊಡ್ಡ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿ ಬೆಳೆದಿದ್ದು, ಸುಮಾರು 1,450ಕ್ಕೂ ಹೆಚ್ಚು ಕಾಲೇಜುಗಳನ್ನು ಸಂಯೋಜಿಸಿಕೊಂಡಿದೆ. ಇದುವರೆಗೆ 8 ಲಕ್ಷಕ್ಕೂ ಹೆಚ್ಚು ಆರೋಗ್ಯ ವೃತ್ತಿಪರರನ್ನು ದೇಶಕ್ಕೆ ನೀಡಿರುವುದು ವಿಶ್ವವಿದ್ಯಾಲಯದ ಗಮನಾರ್ಹ ಸಾಧನೆಯಾಗಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಆಶಯಗಳಿಗೆ ಅನುಗುಣವಾಗಿ ವಿಶ್ವವಿದ್ಯಾಲಯವು ಬಹುಶಿಸ್ತೀಯ ಶಿಕ್ಷಣ, ಭಾರತೀಯ ಜ್ಞಾನ ಪರಂಪರೆ, ಸಂಶೋಧನೆ, ಡಿಜಿಟಲ್ ಶಿಕ್ಷಣ, ಕೃತಕ ಬುದ್ಧಿಮತ್ತೆಯ ಬಳಕೆ, ಕೌಶಲ್ಯಾಭಿವೃದ್ಧಿ, ನಾವೀನ್ಯತೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿರುವುದು ಶ್ಲಾಘನೀಯ ಎಂದು ಅವರು ತಿಳಿಸಿದರು.

ಈ ವರ್ಷದ ಸಂಸ್ಥಾಪನಾ ದಿನವನ್ನು ಮಾದಕ ರಹಿತ ಭಾರತ ಸಮ್ಮೇಳನ ಹಾಗೂ ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯೊಂದಿಗೆ ಸಂಯೋಜಿಸಿ ಆಚರಿಸಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ರಾಜ್ಯಪಾಲರು ಹೇಳಿದರು.
ಭಾರತವು ಯುವಶಕ್ತಿಯ ರಾಷ್ಟ್ರವಾಗಿದ್ದು, ದೇಶದ ಅಭಿವೃದ್ಧಿಗೆ ಯುವಜನರ ಶಕ್ತಿಯೇ ಪ್ರಮುಖ ಆಧಾರವಾಗಿದೆ. ಆದ್ದರಿಂದ ಯುವಜನರನ್ನು ಆರೋಗ್ಯವಂತರಾಗಿ, ಜಾಗೃತರಾಗಿ ಹಾಗೂ ಮಾದಕ ವ್ಯಸನದಿಂದ ಮುಕ್ತರಾಗಿ ಬೆಳೆಸುವುದು ಸಮಾಜದ ಎಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ. ಮಾದಕ ವ್ಯಸನವು ವೈಯಕ್ತಿಕ ಸಮಸ್ಯೆ ಮಾತ್ರವಲ್ಲದೆ ಸಾಮಾಜಿಕ, ಆರ್ಥಿಕ ಹಾಗೂ ಆರೋಗ್ಯ ಕ್ಷೇತ್ರಗಳಿಗೂ ಸವಾಲಾಗಿದೆ. ಈ ಪಿಡುಗಿನ ನಿರ್ಮೂಲನೆಗೆ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಪೋಷಕರು, ಸ್ವಯಂಸೇವಾ ಸಂಘಟನೆಗಳು ಹಾಗೂ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಅವರು ಕರೆ ನೀಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ “ಮಾದಕ ದ್ರವ್ಯ ಮುಕ್ತ ಭಾರತ” ಸಂಕಲ್ಪವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ನಾಗರಿಕರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕುಟುಂಬ ಹಾಗೂ ಸಮಾಜದಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಆರೋಗ್ಯಕರ ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.

ಯುವಜನರನ್ನು ಮಾದಕ ವ್ಯಸನದಿಂದ ದೂರವಿಡಲು ರಾಜ್ಯ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಸ್ವಯಂಸೇವಾ ಸಂಘಟನೆಗಳು ಹಾಗೂ ಸಮಾಜದ ವಿವಿಧ ವಲಯಗಳು ಕೈಗೊಂಡಿರುವ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ಈ ಕುರಿತು ಕಾರ್ಯಕ್ರಮವನ್ನು ಆಯೋಜಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ದಿಶಾಬೋಧ್ ಪ್ರತಿಷ್ಠಾನ ಹಾಗೂ ಮಾದಕ ವಸ್ತು ನಿಯಂತ್ರಣ ಬ್ಯೂರೋವನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಸಿಎಂ ಡಿ. ಕೆ. ಶಿವಕುಮಾರ್, ಸಚಿವರುಗಳಾದ ಡಾ. ಶರಣಪ್ರಕಾಶ್ ಆರ್. ಪಾಟೀಲ,  ಯು.ಟಿ. ಖಾದರ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles