ಗಾಂಧಿ ಭವನದಲ್ಲಿ ಜು.1ಕ್ಕೆ ಪತ್ರಿಕಾ ದಿನಾಚರಣೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟನೆ
ಬೆಂಗಳೂರು: ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಸಂಯುಕ್ತ ಆಶ್ರಯದಲ್ಲಿ ಜು.1 ರಂದು ಪತ್ರಿಕಾ ದಿನಾಚರಣೆಯನ್ನು(Press Day Celebratrion) ಗಾಂಧಿ ಭವನದಲ್ಲಿ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಕಾಡೆಮಿಯ ವಾರ್ಷಿಕ ವರದಿ(Yearly Report) ಬಿಡುಗಡೆಯನ್ನು ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ನೆರವೇರಿಸಲಿದ್ದಾರೆ.
ಸಂಸದ ಪಿ.ಸಿ. ಮೋಹನ್ ಹಾಗೂ ತೆಲಂಗಾಣ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಕೆ.ಶ್ರೀನಿವಾಸ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಪತ್ರಿಕಾ ದಿನಾಚರಣೆಯ ಅಂಗವಾಗಿ ಡಿಜಿಟಲ್ ಯುಗದಲ್ಲಿ ನಿಜ ಪತ್ರಕರ್ತರು ಯಾರು? ಎಂಬ ವಿಷಯದ ಕುರಿತು ವಿಶೇಷ ವಿಚಾರ ಸಂಕಿರಣ ಆಯೋಜಿಸಲಾಗಿದೆ. ’ವಾರ್ತಾ ಭಾರತಿ’ಯ ಹಿರಿಯ ಪತ್ರಕರ್ತರಾದ ಅಬ್ದುಸ್ಸಲಾಂ ಪುತ್ತಿಗೆ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ. ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಪ್ರಾಸ್ತಾವಿಕವಾಗಿ ಮಾತನಾಡುವರು.ಕಾರ್ಯಕ್ರಮದಲ್ಲಿ ವಾರ್ತಾ ಇಲಾಖೆಯ ಆಯುಕ್ತರಾದ ಎಂ.ಎನ್.ಅನುಚೇತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷರಾದ ಡಾ. ಆರ್. ಪೂರ್ಣಿಮಾ ಉಪಸ್ಥಿತರಿರಲಿದ್ದಾರೆ

