ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

ಮೈಸೂರು: ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಬಹಳ ಆತುರಾತುರವಾಗಿ ಬಿಡದಿ ಟೌನ್‍ಶಿಪ್ ವಿಚಾರದಲ್ಲಿ ರೈತರ ಮೇಲೆ ದಬ್ಬಾಳಿಕೆ ಮಾಡುವಂಥ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(B.Y. Vijayendra) ಅವರು ಆಕ್ಷೇಪಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ನಾನು, ನಮ್ಮ ವಿಪಕ್ಷ ನಾಯಕರು ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ. ಒಂದು ಕಡೆ ಸರಕಾರವು ಶೇ 80ರಷ್ಟು ರೈತರು ಬಿಡದಿ ಟೌನ್‍ಶಿಪ್‍ಗೆ ಅನುಮತಿ ಕೊಟ್ಟಿದ್ದಾರೆಂದು ಹೇಳುತ್ತಿದೆ. ಆದರೆ, ವಾಸ್ತವಿಕವಾಗಿ ಶೇ 70-80 ರೈತರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೃಷಿ ಚಟುವಟಿಕೆಗೆ ಪೂರಕವಾದ ಜಮೀನನ್ನು ಕಸಿದುಕೊಳ್ಳಲು ಹೊರಟಿದ್ದಾರೆ ಎಂದು ಆರೋಪಿಸಿದರು. ರೈತರು ಸಹಜವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಮುಖ್ಯಮಂತ್ರಿಗಳು ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಬೇಕು. ಒಕ್ಕಲೆಬ್ಬಿಸುವ ಕೆಲಸಕ್ಕೆ ಕೈಹಾಕಬಾರದು ಎಂದು ಒತ್ತಾಯಿಸಿದರು.
ಇದರ ಕುರಿತು ಸದನದಲ್ಲಿ ನಿಶ್ಚಿತವಾಗಿ ಚರ್ಚೆ ಆಗಲಿದೆ. ಸರಕಾರ ತಾನು ಮಾಡಿದ್ದೇ ಸರಿ ಎಂಬ ಧೋರಣೆ ಅನುಸರಿಸುತ್ತಿದೆ. ಇದರ ಕುರಿತು ಸಮಗ್ರ ಚರ್ಚೆ ಮಾಡಲಿದ್ದೇವೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಒಂದೆಡೆ ಎಸ್‍ಐಆರ್ ನಡೆಯುತ್ತಿದೆ. ಇನ್ನೊಂದು ಕಡೆ ಗೃಹಲಕ್ಷ್ಮಿ ಹಗರಣದ ಕುರಿತು ಹೋರಾಟ ಕೈಗೆತ್ತಿಕೊಳ್ಳಲು ಮುಂದಾಗಿದ್ದೇವೆ. ರೈತರ ಪರ ಹೋರಾಟ ರೂಪಿಸುತ್ತಿದ್ದೇವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
ಅಡ್ಡ ಮತದಾನದ ಗೊಂದಲ ಎಲ್ಲ ಮುಕ್ತಾಯವಾಗಿವೆ. ಅದು ಮುಗಿದ ಅಧ್ಯಾಯ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸದಾನಂದಗೌಡರೇ ಹೇಳಿದ್ದಾರೆ…
ಡಿ.ವಿ.ಸದಾನಂದ ಗೌಡರ ಆಡಿಯೊ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ಆಡಿಯೊದಲ್ಲಿರುವುದು ನನ್ನ ಧ್ವನಿ ಅಲ್ಲ ಎಂದು ಸ್ವತಃ ಸದಾನಂದ ಗೌಡರೇ ಹೇಳಿಕೆ ನೀಡಿದ್ದಾರೆ. ಎಲ್ಲವನ್ನು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.
ಪಕ್ಷದಲ್ಲಿನ ಕೆಲವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ ಅವರು, ವಿಶ್ವನಾಥ್ ಅವರೊಂದಿಗೆ ಸಹ ಮಾತನಾಡಿದ್ದಾರೆ. ಇಂತಹ ಎಲ್ಲ ಬಿಕ್ಕಟ್ಟುಗಳ ನಡುವೆ ಕಾರ್ಯಕರ್ತರಿಗೆ ಧೈರ್ಯ ತುಂಬಿ ಸಂಘಟನೆಯ ಕೆಲಸ ಮಾಡುತ್ತಿರುತ್ತೇವೆ ಎಂದು ಹೇಳಿದರು.

Hot this week

ಹುಳಿಯಾರು ವಿದ್ಯಾವಾರಿಧಿ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಹುಳಿಯಾರು ವಿದ್ಯಾವಾರಿಧಿ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ  ಹುಳಿಯಾರು: ಹುಳಿಯಾರಿನ ಬಳ್ಳೆಕಟ್ಟೆಯಲ್ಲಿರುವ ವಿದ್ಯಾವಾರಿಧಿ...

ಹುಳಿಯಾರು ಜ್ಞಾನ ಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಹುಳಿಯಾರು ಜ್ಞಾನ ಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ  ಹುಳಿಯಾರು: ಹುಳಿಯಾರಿನ...

ಕಣ್ಣಿನ ಪೊರೆ ದೊಡ್ಡ ಕಾಯಿಲೆಯಲ್ಲ ಸಾಕ್ಷ್ಯ ಆಸ್ಪತ್ರೆಯ ಮುಖ್ಯಸ್ಥರಾದ ಪವನ್ ಕುಲಕರ್ಣಿ

ಕಣ್ಣಿನ ಪೊರೆ ದೊಡ್ಡ ಕಾಯಿಲೆಯಲ್ಲ ಸಾಕ್ಷ್ಯ ಆಸ್ಪತ್ರೆಯ ಮುಖ್ಯಸ್ಥರಾದ ಪವನ್ ಕುಲಕರ್ಣಿಹುಳಿಯಾರು:...

ರಾಷ್ಟ್ರೀಯ ವೈದ್ಯರ ದಿನಾಚರಣೆ ಮತ್ತು ಸಾಧಕ ಪಾಲಿಕೆ ವೈದ್ಯರುಗಳಿಗೆ ಧನ್ವಂತರಿ ಪ್ರಶಸ್ತಿ ಪ್ರಧಾನ

ಬೆಂಗಳೂರು: ಜಿಬಿಎ ನೌಕರರ ಭವನ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಅಧಿಕಾರಿ...

Topics

ಉತ್ತರ ವಿಭಾಗದಲ್ಲಿ ವಿಶೇಷ ಕಾರ್ಯಾಚರಣೆ: 10 ದ್ವಿಚಕ್ರ ವಾಹನಗಳ ವಶ

ಬೆಂಗಳೂರು ನಗರ (Bengaluru North) ಉತ್ತರ ವಿಭಾಗದ 13 ಪೊಲೀಸ್ (Police...

ನಿತ್ಯ ಪಂಚಾಂಗ 02.07.2026 ಗುರುವಾರ THURSDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 02.07.2026 ಗುರುವಾರ THURESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ರಾಷ್ಟ್ರಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 01 :ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿರುವ...

Related Articles