ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ(Implementation) ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ.

ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್(Guarantee of Employment) ಸೇರಿದಂತೆ ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನೆ; ಕೇಂದ್ರದಿಂದ ಸಹಕಾರದ ಭರವಸೆ

ಬೆಂಗಳೂರು, ಜುಲೈ 6 : ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ(Central Government) ಪ್ರಮುಖ ಗ್ರಾಮೀಣಾಭಿವೃದ್ಧಿ ಯೋಜನೆಗಳ(Rural Development Scheme) ಅನುಷ್ಠಾನವು ಸುಗಮವಾಗಿ ಸಾಗುತ್ತಿದ್ದು, ಯೋಜನೆಗಳ ಪರಿಣಾಮಕಾರಿ ಜಾರಿಗಾಗಿ ರಾಜ್ಯ ಸರ್ಕಾರದೊಂದಿಗೆ ನಿರಂತರ ಸಹಕಾರ ಮುಂದುವರಿಸಲಾಗುವುದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ (MoRD) ಉನ್ನತ ಮಟ್ಟದ ಅಧಿಕಾರಿಗಳ ತಂಡ ತಿಳಿಸಿದೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಉಪ ಮಹಾನಿರ್ದೇಶಕರು (DDG) ಹಾಗೂ ಸಂಖ್ಯಾಶಾಸ್ತ್ರ ಸಲಹೆಗಾರರಾದ ಅಲ್ತಾಫ್ ಹುಸೇನ್ ಹಾಜಿ(Altaf Hussain Haji) ನೇತೃತ್ವದ ತಂಡ ರಾಜ್ಯಕ್ಕೆ ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ದಿವ್ಯ ಪ್ರಭು ಅವರೊಂದಿಗೆ ಸಭೆ ನಡೆಸಿ, ‘ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ (VB-GRAMG)’ ಯೋಜನೆಯ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿತು. ತಂಡದಲ್ಲಿ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಅಧೀನ ಕಾರ್ಯದರ್ಶಿಗಳಾದ ಅನಿಲ್ ಕುಮಾರ್ ಕೆ.ಸಿ(Anil Kumar K C) ಹಾಗೂ ಗ್ರಾಮೀಣ ವಸತಿ ವಿಭಾಗದ ಸಹಾಯಕ ನಿರ್ದೇಶಕರಾದ ಬಲ್‍ದೇವ್ ಕುಮಾರ್ ವರ್ಮಾ(Baldev Kumar Varma) ಉಪಸ್ಥಿತರಿದ್ದರು.

ರಾಜ್ಯದಲ್ಲಿ ಯೋಜನೆಯ ಅನುಷ್ಠಾನ ನಿಗದಿತ ವೇಳಾಪಟ್ಟಿಯಂತೆ ಪ್ರಗತಿಯಲ್ಲಿದ್ದು, ಯಾವುದೇ ಪ್ರಮುಖ ಅಡಚಣೆಗಳಿಲ್ಲ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಯೋಜನೆಯ ಅನುಷ್ಠಾನವನ್ನು ಇನ್ನಷ್ಟು ಸುಗಮಗೊಳಿಸಲು ಕೆಲವು ಆಡಳಿತಾತ್ಮಕ ಹಾಗೂ ಕ್ರಿಯಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಲಾಯಿತು.

ಬಳಿಕ ಪ್ರಧಾನ ಮಂತ್ರಿ ಆವಾಸ್ ಯೋಜನೆ–ಗ್ರಾಮೀಣ (PMAY-G), ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (PMGSY), ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM) ಹಾಗೂ ರಾಷ್ಟ್ರೀಯ ಸಾಮಾಜಿಕ ಸಹಾಯ ಕಾರ್ಯಕ್ರಮ (NSAP) ಸೇರಿದಂತೆ ವಿವಿಧ ಕೇಂದ್ರ ಪುರಸ್ಕøತ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಯೋಜನೆಗಳ ಪ್ರಗತಿ, ಕೇಂದ್ರ–ರಾಜ್ಯ ಸಮನ್ವಯ, ಅನುಷ್ಠಾನದ ವೇಗ, ಮೇಲ್ವಿಚಾರಣಾ ವ್ಯವಸ್ಥೆ ಹಾಗೂ ಫಲಾನುಭವಿಗಳಿಗೆ ಸಮಯೋಚಿತವಾಗಿ ಯೋಜನೆಗಳ ಲಾಭ ತಲುಪಿಸುವ ಕುರಿತು ಸವಿಸ್ತಾರ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಚಿವಾಲಯದ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ತಾಂತ್ರಿಕ ನೆರವು, ಮೇಲ್ವಿಚಾರಣೆ ಹಾಗೂ ಸಾಮಥ್ರ್ಯ ವೃದ್ಧಿ ಕಾರ್ಯಕ್ರಮಗಳಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು.

ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಇಲಾಖೆಗಳ ನಡುವಿನ ಸಮನ್ವಯ, ನಿರಂತರ ಮೇಲ್ವಿಚಾರಣೆ ಮತ್ತು ದತ್ತಾಂಶ ಆಧಾರಿತ ಆಡಳಿತ ವ್ಯವಸ್ಥೆ ಅತ್ಯಂತ ಅಗತ್ಯವೆಂದು ಅಧಿಕಾರಿಗಳು ಅಭಿಪ್ರಾಯಪಟ್ಟರು.

ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಉದ್ಯೋಗಾವಕಾಶಗಳ ವೃದ್ಧಿ, ಮಹಿಳಾ ಸ್ವಸಹಾಯ ಸಂಘಗಳ ಸಬಲೀಕರಣ ಹಾಗೂ ‘ವಿಕಸಿತ ಭಾರತ–2047′ ಗುರಿ ಸಾಧನೆಯಲ್ಲಿ ಕರ್ನಾಟಕದ ಪಾತ್ರವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

Hot this week

ಕೆಪಿಎಸ್‍ಸಿ(KPSC): ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ(Notified) ಜಲಸಂಪನ್ಮೂಲ(Water Resources) ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್...

ಡಿಪ್ಲೊಮಾ (ಕೃಷಿ) ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ರೇಷ್ಮೆ...

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ?(K R cirlce) ವಿಶ್ವೇಶ್ವರಯ್ಯ...

Topics

ಕೆಪಿಎಸ್‍ಸಿ(KPSC): ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ(Notified) ಜಲಸಂಪನ್ಮೂಲ(Water Resources) ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್...

ಡಿಪ್ಲೊಮಾ (ಕೃಷಿ) ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ರೇಷ್ಮೆ...

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ?(K R cirlce) ವಿಶ್ವೇಶ್ವರಯ್ಯ...

ಲಲಿತಕಲಾ ಅಕಾಡೆಮಿಯಿಂದ ಚಿತ್ರಕಲಾ ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧೆ

ಬೆಂಗಳೂರು, ಜುಲೈ 06 : ಕರ್ನಾಟಕ ಲಲಿತಕಲಾ ಅಕಾಡೆಮಿಯು(Lalithakala Adacemy) ಪ್ರಪ್ರಥಮ...

ಎಸ್‍ಐಆರ್: ರಾಜ್ಯ ಸರಕಾರದ ಷಡ್ಯಂತ್ರ- ಪ್ರಲ್ಹಾದ್ ಜೋಶಿ

ಬೆಂಗಳೂರು: ಎಸ್‍ಐಆರ್‍ದಲ್ಲಿ ರಾಜ್ಯ ಸರಕಾರವು ಬಹಳಷ್ಟು ಷಡ್ಯಂತ್ರ ರಚಿಸುತ್ತಿದೆ ಎಂದು ಕೇಂದ್ರ...

Related Articles