ಹಸಿರು ಬೆಂಗಳೂರಿನ ಸಂಕಲ್ಪ: 12ರಂದು ಬೃಹತ್ “ಕ್ಲೈಮೇಟ್ ಆಕ್ಷನ್ ವಾಕ್ & ರನ್ 2026”

ಬೆಂಗಳೂರು: ಜಾಗತಿಕ ಹವಾಮಾನ ಬದಲಾವಣೆಯ ಸವಾಲುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ ಸಿಲಿಕಾನ್ ಸಿಟಿಯಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ “ಕ್ಲೈಮೇಟ್ ಆಕ್ಷನ್ ವಾಕ್ & ರನ್ 2026″(Climate Auction walk and Run( ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಹಸಿರೋತ್ಸವ ಫೋರಂ, ಸುರಕ್ಷಾ ಎನ್ವಿರೋ ಸೊಲ್ಯೂಷನ್ಸ್ ಹಾಗೂ ಕರ್ನಾಟಕ ಜೆಸ್ಯೂಟ್ ಪ್ರಾಂತ್ಯ ಪರಿಸರ ಆಯೋಗದ ಜಂಟಿ ಆಶ್ರಯದಲ್ಲಿ ಈ ವಿಶೇಷ ಜನಾಂದೋಲನವು ಜುಲೈ 12ರ ಭಾನುವಾರ ಬೆಳಿಗ್ಗೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 5:30 ಗಂಟೆಗೆ ಭಾಗವಹಿಸುವವರ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, 6:30 ಗಂಟೆಗೆ ಓಟಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತದೆ. ಈ ಹಸಿರು ಅಭಿಯಾನದಲ್ಲಿ ಪರಿಸರ ಪ್ರೇಮಿಗಳು, ವೃತ್ತಿಪರ ಓಟಗಾರರು, ವಿದ್ಯಾರ್ಥಿಗಳು, ಕಾರ್ಪೊರೇಟ್ ವಲಯದ ಪ್ರತಿನಿಧಿಗಳು ಹಾಗೂ ಸ್ವಯಂಸೇವಕರು ಸೇರಿದಂತೆ ಸುಮಾರು 1,500ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ಈ ಕಾರ್ಯಕ್ರಮದ ವಿಶೇಷತೆಯ ಕುರಿತು ಮಾಹಿತಿ ಹಂಚಿಕೊಂಡ ಹಸಿರೋತ್ಸವ ಫೋರಂನ ಸಹ-ಸಂಸ್ಥಾಪಕಿ ಹಾಗೂ ನಿರ್ದೇಶಕಿ ಆರತಿ ಆರ್. ಅವರು, ಈ ಓಟವನ್ನು ಸಂಪೂರ್ಣವಾಗಿ ಪ್ರಕೃತಿ ಪೂರಕವಾಗಿ ರೂಪಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಏಕಬಳಕೆ ಪ್ಲಾಸ್ಟಿಕ್ಗೆ ಸಂಪೂರ್ಣವಾಗಿ ವಿದಾಯ ಹೇಳಲಾಗಿದ್ದು, ಅದಕ್ಕೆ ಪರ್ಯಾಯವಾಗಿ ಅತ್ಯಂತ ವಿಶಿಷ್ಟವಾದ, ಮೊಳಕೆಯೊಡೆಯುವ ‘ಬೀಜದ ಕಾಗದದಿಂದ’ (Seed Paper) ತಯಾರಿಸಿದ ರೇಸ್ ಬಿಬ್ಗಳು ಹಾಗೂ ಕೈಪಟ್ಟಿಗಳನ್ನು ಬಳಸಲಾಗುತ್ತಿದೆ. ಇದರೊಂದಿಗೆ ಇಡೀ ಕಾರ್ಯಕ್ರಮದ ನಿರ್ವಹಣೆಯಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನೇ ಅನುಸರಿಸಲಾಗುತ್ತಿದ್ದು, ಅತ್ಯಂತ ದೊಡ್ಡ ಪ್ರಮಾಣದ ಸಾರ್ವಜನಿಕ ಕಾರ್ಯಕ್ರಮಗಳನ್ನು ಸಹ ಪರಿಸರದ ಜವಾಬ್ದಾರಿಯನ್ನು ಕಾಪಾಡುತ್ತಲೇ ಅತ್ಯಂತ ಯಶಸ್ವಿಯಾಗಿ ಆಯೋಜಿಸಬಹುದು ಎಂಬುದನ್ನು ಇಡೀ ಸಮಾಜಕ್ಕೆ ತೋರಿಸಿಕೊಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.

ಪ್ರಸ್ತುತ ದಿನಗಳಲ್ಲಿ ಹವಾಮಾನ ಬದಲಾವಣೆಯ ತೀವ್ರತೆಯನ್ನು ತಗ್ಗಿಸುವುದು, ಪ್ಲಾಸ್ಟಿಕ್ ಮಾಲಿನ್ಯವನ್ನು ಮುಕ್ತಗೊಳಿಸುವುದು ಹಾಗೂ ನಾಗರಿಕರು ತಮ್ಮ ದೈನಂದಿನ ಬದುಕಿನಲ್ಲಿ ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುವುದೇ ಈ ಅಭಿಯಾನದ ಅತಿ ಮುಖ್ಯ ಗುರಿಯಾಗಿದೆ ಎಂದರು. ಈ ಹಿನ್ನೆಲೆಯಲ್ಲಿ ‘ಕ್ಲೈಮೇಟ್ ಆಕ್ಷನ್ ವಾಕ್ & ರನ್ 2026’ ಕೇವಲ ಒಂದು ಕ್ರೀಡಾಕೂಟವಾಗಿ ಉಳಿಯದೆ, ಹಸಿರು ಬೆಂಗಳೂರಿನ ಮರುಸೃಷ್ಟಿಗಾಗಿ ಪ್ರತಿಯೊಬ್ಬ ನಾಗರಿಕನೂ ಇಡಲಿರುವ ಸಣ್ಣ ಆದರೆ ಅತ್ಯಂತ ಅರ್ಥಪೂರ್ಣ ಹೆಜ್ಜೆಯಾಗಿದೆ. ಇದು ಪರಿಸರ ಸಂರಕ್ಷಣೆಗಾಗಿ ಇಡೀ ಸಮುದಾಯವನ್ನು ಒಗ್ಗೂಡಿಸುವ ಒಂದು ಜನಾಂದೋಲನವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

Hot this week

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

Topics

ನಿತ್ಯ ಪಂಚಾಂಗ 13-07-2026 ಸೋಮವಾರ MONDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ13.07.2026 ಸೋಮವಾರMONDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ಉತ್ತರಾಯಣ. AYANA: UTTARAYANA. ಋತು:...

ಎಸ್.ಜಾನಕಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ...

ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು...

Related Articles