ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(D.K.Shivakumar) ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರಿನ ಜನ ಪ್ರತಿನಿಧಿಗಳು ಹಾಗೂ ಹಿರಿಯ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮೈಸೂರು ದಸರಾ -2026 ಆಚರಣೆ ಬಗ್ಗೆ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್, ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಡಾ.ಹೆಚ್.ಸಿ.ಮಹದೇವಪ್ಪ, ಜಿ.ಟಿ.ದೇವೇಗೌಡ, ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


