ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ದಾಖಲಾತಿಗಾಗಿ ನಡೆಸಲಾಗುವ ‘ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ-2027’ ಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‍ಲೈನ್ ಅರ್ಜಿ ಸಲ್ಲಿಸಲು 31 ಜುಲೈ ಕೊನೆಯ ದಿನಾಂಕವಾಗಿದೆ. ಪ್ರವೇಶ ಪರೀಕ್ಷೆ  2026 ನವೆಂಬರ್ 28  ರಂದು ನಡೆಯಲಿದೆ.

2026-27ನೇ ಪ್ರಸಕ್ತ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಕಡ್ಡಾಯ ನಿವಾಸಿಯಾಗಿರಬೇಕು.

ಬೆಂಗಳೂರು ನಗರ ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ ಲಭ್ಯವಿರುವ ಒಟ್ಟು ಸೀಟುಗಳಲ್ಲಿ 50% ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ 50% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್‍ಸೈಟ್ www.navodaya.gov.in  ಗೆ ಭೇಟಿ ನೀಡಬಹುದು. ಕಚೇರಿಯ ದೂರವಾಣಿ ಸಂಖ್ಯೆಗಳಾದ 9844478098, 7624831601, 080-29900456 ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Jawahar Navodaya Vidyalaya Selection Test-2027 to Class VI

Bengaluru, July 13 (Karnataka Information)  :

Jawahar Navodaya Vidyalaya (JNV), Bangalore Urban District, has officially released the admission notification for Class VI for the academic year 2027-28. Eligible students residing and studying in the Bangalore Urban district can now apply online for the Jawahar Navodaya Vidyalaya Selection Test (JNVST-2027).

The last date for submitting online application forms is July 31, 2026.  The selection test is scheduled to be held on Saturday, November 28, 2026. Admission is open for Class VI for the upcoming academic session.
As per the official notification, seats for the Bangalore Urban District will be equally divided, allocating 50% to Urban students and 50% to Rural students. To be eligible for the JNVST-2027 examination, candidates must.

Be currently studying in Class V (during the 2026-27 academic year) in a recognized school within the Bangalore Urban district. Be a bona fide resident of the Bangalore Urban District.

Interested parents and students can fill out the application forms online through the official Navodaya Samiti portal. Official Website: www.navodaya.gov.in.

Contact Numbers: 9844478098, 7624831601, or 080-29900456.

Hot this week

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ನಿತ್ಯ ಪಂಚಾಂಗ 13-07-2026 ಸೋಮವಾರ MONDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ13.07.2026 ಸೋಮವಾರMONDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ಉತ್ತರಾಯಣ. AYANA: UTTARAYANA. ಋತು:...

Topics

ಎಸ್.ಜಾನಕಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ...

ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು...

ಘನನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬoಧನ

ಬೆಂಗಳೂರು : ಘನ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊoಡಿದ್ದ ಆರೋಪಿಗಳನ್ನು...

Related Articles