ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ ನೀಡಲಾಗುವ ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳು ತಮ್ಮ ಪ್ರಾಣದ ಅಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ 6 ವರ್ಷಗಳಿಂದ 18 ವರ್ಷಗಳೊಳಗಿನ ಬಾಲಕರಿಗೆ ಹೊಯ್ಸಳ ಪ್ರಶಸ್ತಿಯನ್ನು ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಸಾಹಸವು 01 ಆಗಸ್ಟ್ 2025 ರಿಂದ 31 ಜುಲೈ 2026ರ ಅವಧಿಗೆ ಅನ್ವಯವಾಗುವ ಈ ಪ್ರಶಸ್ತಿಯೊಂದಿಗೆ ರೂ. 10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.
ಇದೇ ವೇಳೆ, ಮಹಿಳಾ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ. 25,000 ನಗದು ಬಹುಮಾನ ಹಾಗೂ ಸಂಸ್ಥೆಗಳಿಗೆ ರೂ. 1,00,000 ನಗದು ಬಹುಮಾನದೊಂದಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಮಕ್ಕಳ ದಿನಾಚರಣೆ–2026ರ ಅಂಗವಾಗಿ ನೀಡಲಾಗುವ ಈ ಪ್ರಶಸ್ತಿಗಳಿಗೆ ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಗೆ 20 ಆಗಸ್ಟ್ 2026 ರೊಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
