AI ಕ್ರಾಂತಿಗೆ ವಿಶ್ವವಿದ್ಯಾಲಯ ಸಿದ್ಧ: ಡಾ. ಭಗವಾನ್ ಬಿ.ಸಿ. – ವೈದ್ಯಕೀಯ ಶಿಕ್ಷಣದಲ್ಲಿ AI ಕ್ರಾಂತಿ ಅನಿವಾರ್ಯ: ಪ್ರೊ. ಶೆಲ್ಬಿ ಕಟ್ಟಿ

ಬೆಂಗಳೂರು, ಜುಲೈ 25, 2026: ಕರ್ನಾಟಕದಲ್ಲಿ ಪ್ರತಿವರ್ಷ ಸುಮಾರು 14,900 ವೈದ್ಯರು (Doctors) ಪದವಿ ಪಡೆದರೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ಮುಂದುವರಿದಿರುವುದು ನಮ್ಮ ಮುಂದಿನ ಗಂಭೀರ ಸವಾಲಾಗಿದೆ. ಕೃತಕ ಬುದ್ಧಿಮತ್ತೆ (AI), ಟೆಲಿಮೆಡಿಸಿನ್ ಹಾಗೂ ಡಿಜಿಟಲ್ ಆರೋಗ್ಯ (Digital Health service) ಸೇವೆಗಳಂತಹ ತಂತ್ರಜ್ಞಾನ ಆಧಾರಿತ ಪರಿಹಾರಗಳು ಇಂದಿನ ಅಗತ್ಯಗಳಾಗಿವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ (Sharanaprakash R Patil) ಹೇಳಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಶನಿವಾರ ಆಯೋಜಿಸಿದ್ದ ‘ವೈದ್ಯಕೀಯ ಶಿಕ್ಷಣದ ಭವಿಷ್ಯಕ್ಕಾಗಿ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ’ ವಿಷಯದ ವಿಶೇಷ ಶೈಕ್ಷಣಿಕ ಸಂವಾದ-ಸಭೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಅಗತ್ಯಗಳಿಗೆ ಹೊಂದುವಂತೆ ರಾಜ್ಯಕ್ಕೆ ವಿಶೇಷವಾದ ಕೃತಕ ಬುದ್ಧಿಮತ್ತೆ ಮಾದರಿಯನ್ನು ಅಭಿವೃದ್ಧಿಪಡಿಸಬೇಕಿದೆ. ವೈದ್ಯಕೀಯ ಶಿಕ್ಷಣದಲ್ಲಿ AI ಅಳವಡಿಕೆಗೆ ಸ್ಪಷ್ಟ ಹಾಗೂ ಸಮಗ್ರ ಕಾರ್ಯತಂತ್ರ ರೂಪಿಸುವುದು ಕಾಲದ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಕೃತಕ ಬುದ್ಧಿಮತ್ತೆಯನ್ನು ಸಮರ್ಪಕವಾಗಿ ಅಳವಡಿಸಿಕೊಂಡರೆ ವೈದ್ಯಕೀಯ ಶಿಕ್ಷಣದಲ್ಲಿ ಉತ್ಪಾದಕತೆ ಹೆಚ್ಚುವುದರ ಜೊತೆಗೆ ಬೋಧನೆ, ಕಲಿಕೆ, ಸಂಶೋಧನೆ ಹಾಗೂ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಸುಧಾರಿಸಬಹುದು. ಭವಿಷ್ಯದ ವೈದ್ಯಕೀಯ ವೃತ್ತಿಪರರು ತಂತ್ರಜ್ಞಾನ ಆಧಾರಿತ ಆರೋಗ್ಯ ವ್ಯವಸ್ಥೆಯಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಲು AI ಪರಿಕರಗಳ ಬಳಕೆಯಲ್ಲಿ ಪರಿಣತಿ ಹೊಂದುವುದು ಕೂಡ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಗೊಳಿಸಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ವಿಜ್ಞಾನ ಶಿಕ್ಷಣದಲ್ಲಿ AI ಅಳವಡಿಕೆಗೆ ಬದ್ಧ: ಕುಲಪತಿ ಡಾ. ಬಿ.ಸಿ. ಭಗವಾನ್

ಕುಲಪತಿ ಡಾ. ಬಿ.ಸಿ. ಭಗವಾನ್ ಮಾತನಾಡಿ, ವೈದ್ಯಕೀಯ ಶಿಕ್ಷಣದಲ್ಲಿ ಸಾಮರ್ಥವಾಗಿ ಮತ್ತು ಪರಿಣಾಮಕಾರಿಯಾಗಿ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳುವ ಮೂಲಕ AI ಕ್ರಾಂತಿಗೆ ವಿಶ್ವವಿದ್ಯಾಲಯ ಬದ್ಧವಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಲ್ಲಿ ಈಗಾಗಲೇ AI ಅಳವಡಿಸಿಕೊಳ್ಳಲಾಗಿದ್ದು, ಅದರ ಆರಂಭಿಕ ಫಲಿತಾಂಶಗಳು ಆಶಾದಾಯಕವಾಗಿವೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು, ಸಂಶೋಧನೆ, ಕ್ಲಿನಿಕಲ್ ತರಬೇತಿ, ಮೌಲ್ಯಮಾಪನ ಮತ್ತು ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯ ಎಲ್ಲ ಹಂತಗಳಲ್ಲಿಯೂ AI ಅನ್ನು ಸಮಗ್ರವಾಗಿ ಅಳವಡಿಸಲಾಗುವುದು ಎಂದು ತಿಳಿಸಿದರು.

ನವೋದ್ಯಮ ಹಾಗೂ ಜಾಗತಿಕ ಸಹಭಾಗಿತ್ವದ ಮೂಲಕ ಆರೋಗ್ಯ ವಿಜ್ಞಾನ ಶಿಕ್ಷಣದಲ್ಲಿ ಗುಣಾತ್ಮಕ ಪರಿವರ್ತನೆ ತಂದು, ಕಾರ್ಯಕ್ಷಮತೆ ಹಾಗೂ ರೋಗಿಕೇಂದ್ರಿತ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲಾಗುವುದು ಎಂದು ಹೇಳಿದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles