ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮವು ಲೋಕಭನದ ಗಾಜಿನ ಮನೆಯಲ್ಲಿ ಇಂದು ನೆರವೇರಿತು. ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು 19 ಶಾಸಕರಿಗೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ನೂತನ ಸಚಿವರುಗಳಾಗಿ, ಪಿ. ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ. ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ. ಝಡ್. ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಎಸ್. ಎಸ್. ಮಲ್ಲಿಕಾರ್ಜುನ್, ಡಾ. ಅಜಯ್ ಸಿಂಗ್, ಎನ್. ಚಲುವರಾಯ ಸ್ವಾಮಿ, ಕೆ. ಎಂ. ಶಿವಲಿಂಗೇಗೌಡ, ಹೆಚ್. ಸಿ. ಬಾಲಕೃಷ್ಣ, ಬಸವರಾಜ್ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಮತ್ತು ಲಕ್ಷ್ಮಣ ಸವದಿ ಅವರು ಗೌಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು.

ಪಿ. ಎಂ. ನರೇಂದ್ರಸ್ವಾಮಿ – ಡಾ.ಬಾಬಾ ಸಾಹೇಬ್ ಅಂಬೇಡ್ಕರ್, ಗಂಗಾದರ ಅಜ್ಜಯ್ಯ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಶಿವರಾಜ್ ತಂಗಡಗಿ – ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಶ್ರದ್ಧಾಪೂರಕವಾಗಿ ಪ್ರತಿಜ್ಞೆ ಮಾಡಿದರು.
ರುದ್ರಪ್ಪ ಲಮಾಣಿ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕೆ. ಎಸ್. ಬಸವಂತಪ್ಪ – ಬಸವೇಶ್ವರ ರ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಿ. ನಾಗೇಂದ್ರ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಟಿ. ರಘುಮೂರ್ತಿ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಿ. ಝಡ್. ಜಮೀರ್ ಅಹಮದ್ ಖಾನ್ – ಅಲ್ಲಾ ಹಾಗೂ ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಿಜ್ವಾನ್ ಅರ್ಷದ್ – ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣ ವಚನ ಸ್ವೀಕರಿಸಿದರು.
ಸಂತೋಷ್ ಲಾಡ್ – ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣ ವಚನ ಸ್ವೀಕರಿಸಿದರು.
ಮಧು ಬಂಗಾರಪ್ಪ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪುಟ್ಟರಂಗಶೆಟ್ಟಿ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಎಸ್. ಎಸ್. ಮಲ್ಲಿಕಾರ್ಜುನ್ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಡಾ. ಅಜಯ್ ಸಿಂಗ್ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಎನ್. ಚಲುವರಾಯ ಸ್ವಾಮಿ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕೆ. ಎಂ. ಶಿವಲಿಂಗೇಗೌಡ – ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿದರು.
ಹೆಚ್. ಸಿ. ಬಾಲಕೃಷ್ಣ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಸವರಾಜ್ ರಾಯರೆಡ್ಡಿ – ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣ ವಚನ ಸ್ವೀಕರಿಸಿದರು.
ವಿಜಯಾನಂದ ಕಾಶಪ್ಪನವರ್ – ದೇವರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು.
ಲಕ್ಷ್ಮಣ ಸವದಿ – ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

