ಭವಿಷ್ಯದ ಎಲೆಕ್ಟ್ರಿಕ್ ವಾಹನ ತಂತ್ರಜ್ಞಾನಕ್ಕೆ ಹೊಸ ಮುನ್ನಡೆ: ಸರ್ ಎಂ ವಿಐಟಿ ಕಾಲೇಜಿನಲ್ಲಿ EV-CoE ಕೇಂದ್ರ

ಬೆಂಗಳೂರು: ಸರ್ ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (Sir M. Visvesvaraya Institute of Technology)ಯ ವಿದ್ಯುತ್ ಮತ್ತು ವಿದ್ಯುನ್ಮಾನ ಇಂಜಿನಿಯರಿಂಗ್ ವಿಭಾಗದಲ್ಲಿ ಎಲೆಕ್ಟ್ರಿಕ್ ವಾಹನ ತಂತ್ರಜ್ಞಾನ ಉತ್ಕೃಷ್ಟತಾ ಕೇಂದ್ರ (EV-CoE) ಅನ್ನು 17 ಆಗಸ್ಟ್ 2026ರಂದು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.
ಕಾಲೇಜಿನ ಶ್ರೀ ಕೃಷ್ಣದೇವರಾಯ ಶಿಕ್ಷಣ ದತ್ತಿಯ ಸಂಸ್ಥಾಪಕ ಟ್ರಸ್ಟಿ ಹಾಗೂ ಶೈಕ್ಷಣಿಕ ಸಮಿತಿಯ ಅಧ್ಯಕ್ಷರು ಆದ ಶ್ರೀ ಕೆ.ವಿ ಶೇಖರ್ ರಾಜು ಅವರ ಮಾರ್ಗದರ್ಶನದಲ್ಲಿ ಹಾಗೂ ಪ್ರಾಂಶುಪಾಲರಾದ ಡಾ. ಎಂ. ಎನ್. ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ಸ್ಥಾಪಿಸಲಾದ ಈ ಕೇಂದ್ರವು, ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ, ಪ್ರಾಯೋಗಿಕ ಅನುಭವ ಹಾಗೂ ಕೈಗಾರಿಕಾ ಕೌಶಲ್ಯಗಳನ್ನು ಒದಗಿಸುವ ಪ್ರಮುಖ ವೇದಿಕೆಯಾಗಲಿದೆ.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಎಚ್. ಎಲ್. ಸುರೇಶ್ ಉಪಸ್ಥಿತರಿದ್ದರು. ಕೈಗಾರಿಕಾ ಕ್ಷೇತ್ರದ ಪ್ರತಿನಿಧಿಯಾದ ಶ್ರೀ ನವೀನ್ ಸಿ. ಎಸ್. ಅವರು ಭಾಗವಹಿಸಿ, ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಪ್ರಸ್ತುತ ಬೆಳವಣಿಗೆಗಳು, ಕೈಗಾರಿಕಾ ಅಗತ್ಯಗಳು ಹಾಗೂ ಭವಿಷ್ಯದ ಉದ್ಯೋಗಾವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಪ್ರಾಂಶುಪಾಲರಾದ ಡಾ. ಎಂ.ಎನ್ ತಿಪ್ಪೇಸ್ವಾಮಿಯವರು ಮಾತನಾಡಿ ಎಲೆಕ್ಟ್ರಿಕ್ ವಾಹನ ತಂತ್ರಜ್ಞಾನ ಉತ್ಕೃಷ್ಟತಾ ಕೇಂದ್ರದ ಮೂಲಕ ವಿದ್ಯಾರ್ಥಿಗಳಿಗೆ ಬ್ಯಾಟರಿ ತಂತ್ರಜ್ಞಾನ, ಬ್ಯಾಟರಿ ಮ್ಯಾನೇಜ್‌ಮೆಂಟ್ ಸಿಸ್ಟಮ್ (BMS), ಎಲೆಕ್ಟ್ರಿಕ್ ಮೋಟಾರ್‌ಗಳು, ಪವರ್ ಎಲೆಕ್ಟ್ರಾನಿಕ್ಸ್, EV ಚಾರ್ಜಿಂಗ್ ತಂತ್ರಜ್ಞಾನ, ನಿಯಂತ್ರಣ ವ್ಯವಸ್ಥೆಗಳು ಹಾಗೂ EV ಡಯಾಗ್ನೋಸ್ಟಿಕ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪ್ರಾಯೋಗಿಕ ತರಬೇತಿ ದೊರೆಯಲಿದೆ ಎಂದು ತಿಳಿಸಿದರು.ಶ್ರೀ ಕೃಷ್ಣದೇವರಾಯ ಶಿಕ್ಷಣ ದತ್ತಿಯ ಸಂಸ್ಥಾಪಕ ಟ್ರಸ್ಟಿ ಕೆ.ವಿ ಶೇಖರ್ ರಾಜುರವರು ಈ ಕೇಂದ್ರವು ಸಂಶೋಧನೆ, ನವೋದ್ಯಮ, ವಿದ್ಯಾರ್ಥಿ ಯೋಜನೆಗಳು, ಕೌಶಲ್ಯಾಭಿವೃದ್ಧಿ, ಕೈಗಾರಿಕಾ ಸಹಯೋಗ ಮತ್ತು ಉದ್ಯಮಶೀಲತೆಗೆ ಉತ್ತೇಜನ ನೀಡಲಿದೆ. ಹಸಿರು ತಂತ್ರಜ್ಞಾನ ಮತ್ತು ಸುಸ್ಥಿರ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗೆ ಕೊಡುಗೆ ನೀಡುವುದರೊಂದಿಗೆ, ಭವಿಷ್ಯದ ಎಲೆಕ್ಟ್ರಿಕ್ ಮೊಬಿಲಿಟಿ ಕ್ಷೇತ್ರಕ್ಕೆ ಅಗತ್ಯವಿರುವ ಉದ್ಯೋಗಪರ ಹಾಗೂ ಕೈಗಾರಿಕಾ ಕೌಶಲ್ಯ ಹೊಂದಿದ ತಾಂತ್ರಿಕ ಮಾನವ ಸಂಪನ್ಮೂಲವನ್ನು ರೂಪಿಸುವಲ್ಲಿ ಈ ಕೇಂದ್ರವು ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles