ಸರ್ಕಾರದ ತಪ್ಪು, ಸೋರಿಕೆ ಸರಿಪಡಿಸಿಕೊಳ್ಳಲು ಸಲಹೆ ನೀಡಿ; ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ” ಎಂದು ಮುಖ್ಯಮಂತ್ರಿ (CM DK Shivakumar) ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು.  ಬೆಂಗಳೂರಿನ ಅರಮನೆ ಮೈದಾನದಲ್ಲಿ (Palace Grounds) ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ (Chartered Accountants) ಆಫ್ ಇಂಡಿಯಾ ಶುಕ್ರವಾರ ಆಯೋಜಿಸಿದ್ದ “ಸಂವಾದ ಸಮ್ಮೇಳನ”(Dialogue Conference) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ತೆರೆದ ಪುಸ್ತಕ. ಹೊಸ ವಿಚಾರ, ಪರಿಹಾರಕ್ಕೆ ನಾವು ಮುಕ್ತರಾಗಿದ್ದೇವೆ. ನಮ್ಮ ತಪ್ಪುಗಳು, ಸಂಪನ್ಮೂಲ ಸೋರಿಕೆ ತಡೆಗಟ್ಟಲು ನಿಮ್ಮ ಸಲಹೆಗಳನ್ನು ನೀಡಿ. ನಿಂಬೆಗಿಂತ ಶ್ರೇಷ್ಠವಾದ ಹುಳಿ, ದುಂಬಿಗಿಂತ ಶ್ರೇಷ್ಠವಾದ ಕಪ್ಪು, ಶಿವನಿಗಿಂತ ದೊಡ್ಡ ದೇವರು, ನಂಬಿಕೆಗಿಂತ ದೊಡ್ಡ ಗುಣ ಮತ್ತೊಂದಿಲ್ಲ ಎಂದು ಸರ್ವಜ್ಞ ಹೇಳಿದ್ದಾರೆ. ನೀವು ನಂಬಿಕೆಯ ರಕ್ಷಕರು. ನಂಬಿಕೆ ಎಂಬುದು ನಿಮ್ಮ ರಕ್ತದಲ್ಲೇ ಬಂದಿದ್ದು, ನೀವು ಅದನ್ನು ಉಳಿಸಿಕೊಳ್ಳಬೇಕು. ನೀವು ಹೇಳಿದ್ದನ್ನು ನಾವು ನಂಬುತ್ತೇವೆ. ನೀವು ನಮ್ಮ ಬದುಕು, ಆಸ್ತಿ ರಕ್ಷಿಸಿ ಆದಾಯಕ್ಕೆ ಮಾರ್ಗದರ್ಶನ ನೀಡಬೇಕು. ನಮ್ಮ ತಪ್ಪುಗಳನ್ನು ನಿವಾರಣೆ ಮಾಡುವ ಸಾಮಾರ್ಥ್ಯ ನಿಮಗಿದೆ. ನೀವು ದೇಶ ಕಟ್ಟುತ್ತಿದ್ದು, ನಿಮ್ಮ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ” ಎಂದು ಹೇಳಿದರು.

ಪ್ರಾಮಾಣಿಕ ತೆರಿಗೆ ಪಾವತಿದಾರರಿಗೆ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡಿ ಕುಗ್ಗಿಸುತ್ತಾರೆ. ಯಾರು ಕಳ್ಳತನ ಮಾಡುತ್ತಾರೆ ಅವರಿಗೆ ಪ್ರಶ್ನೆ ಮಾಡುವುದಿಲ್ಲ. ಈ ದೇಶದಲ್ಲಿ 12 ಲಕ್ಷ ಉದ್ಯಮಿಗಳು ಈ ದೇಶವನ್ನು ತ್ಯಜಿಸಿದ್ದಾರೆ. ಐಟಿ, ಇಡಿ, ಸಿಬಿಐ ಸಹವಾಸ ಸಾಕು ಎಂದು ಹೋಗುತ್ತಿದ್ದಾರೆ. ತೊಂದರೆ ಕೊಡುವುದೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕೆಲಸ. ಕೆಲವು ವರ್ಷಗಳ ಹಿಂದೆ ಗುಜರಾತ್ ಗೆ ಹೋಗಿದ್ದಾಗ ಅಲ್ಲಿ ಶೇಕಡ 70% ನಗದಿನಲ್ಲೇ ನಡೆಯುತ್ತಿದೆ. ಕೇವಲ 30% ಮಾತ್ರ ವೈಟ್ ಅಲ್ಲಿ ನಡೆಯುತ್ತಿದೆ. ನಮ್ಮ ಕರ್ನಾಟಕದಲ್ಲಿ 90% ವೈಟ್ ಮೂಲಕ ವ್ಯವಹಾರಗಳು ನಡೆಯುತ್ತಿವೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಾವು ಶಿಸ್ತುಬದ್ಧರಾಗಿದ್ದೇವೆ ಎಂದರು.

ಕರ್ನಾಟಕ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದ್ದು, ನಿಮ್ಮ ಮಾರ್ಗದರ್ಶನವಿಲ್ಲದೇ ಅವರು ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ದಕ್ಷಿಣ ಭಾರತ ಇಡಿ ದೇಶದ ಪ್ರಗತಿಯ ಇಂಧನವಾಗಿದೆ. ದಕ್ಷಿಣ ಭಾರತವಿಲ್ಲದೆ ಭಾರತದ ಪ್ರಗತಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಮುಂದೆ ವಾದ ಮಂಡಿಸಿದೆವು. ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಬೆಂಗಳೂರಿನಲ್ಲಿ 2 ಲಕ್ಷ ವಿದೇಶಿ ಪಾಸ್ ಪೋರ್ಟ್ ದಾರರು ಕಾರ್ಯನಿರ್ವಹಿಸುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುವ ಬಂಡವಾಳ ಹೂಡಿಕೆದಾರರಿಗೆ ನೀವು ಉತ್ತಮ ಸಲಹೆ ನೀಡುತ್ತಿದ್ದೀರಿ. ಹೊಸ ಹೂಡಿಕೆ, ಉದ್ಯಮ, ಉದ್ಯೋಗ ಸೃಷ್ಟಿ, ಅನ್ವೇಷಣೆ, ರಫ್ತಿಗೆಗೆ ಕರ್ನಾಟಕ ಅತ್ಯುತ್ತಮ ಕೇಂದ್ರವಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ಒಪ್ಪಿಕೊಂಡಾಗ ಅಧಿವೇಶನ ನಡೆಯುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ಆದರೆ ಈಗ ಅಧಿವೇಶನ ನಡೆಯುತ್ತಿದೆ. ವಿರೋಧ ಪಕ್ಷದ ಸ್ನೇಹಿತರಿಗೆ ನನ್ನನ್ನು ಹಾಗೂ ನಮ್ಮ ಸರ್ಕಾರವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ಆಲೋಚನೆಗಳು ಸ್ಪಷ್ಟವಾಗಿದ್ದು, ನಮ್ಮ ಸರ್ಕಾರ ಜನಸಾಮಾನ್ಯರ ವಿಚಾರದಲ್ಲಿ ಕೈಗೊಳ್ಳುತ್ತಿರುವ ನೀತಿಗಳಿಂದಾಗಿ ಅವರಿಗೆ ನನ್ನ ವಿರುದ್ಧ ಹೋರಾಟ ಮಾಡಲು ಯಾವುದೇ ಅವಕಾಶಗಳಿಲ್ಲ. ಅಸೂಯೆಗೆ ಮದ್ದಿಲ್ಲ. ಹೀಗಾಗಿ ಅವರು ನಮಗೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.

ದಕ್ಷಿಣ ಭಾರತದಿಂದ ದೇಶದ ಪ್ರಗತಿ

ನಿನ್ನೆ ಚೆನ್ನೈನಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ನಮ್ಮ ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ದೇಶದ ಪ್ರಗತಿಗೆ ಸಹಕಾರಿಯಾಗಿದೆ. ನಾವು ಹಚ್ಚುವ ಜ್ಯೋತಿ ಹೇಗೆ ಕೆಳಗಿನಿಂದ ಮೇಲಕ್ಕೆ ಬೆಳಗುತ್ತದೆಯೋ ಅದೇ ರೀತಿ ದೇಶದ ಪ್ರಗತಿ ಕೂಡ ದಕ್ಷಿಣ ಭಾರತದಿಂದ ಬೆಳಗುತ್ತಿದೆ. ದೀಪ ಹಚ್ಚಿದಾಗ ಅದರ ಬೆಳಕು ಎಲ್ಲರಿಗೂ ಕಾಣುತ್ತದೆ. ಆದರೆ ಅದರಲ್ಲಿರುವ ಬತ್ತಿ ಹಾಗೂ ಎಣ್ಣೆ ಯಾರಿಗೂ ಕಾಣುವುದಿಲ್ಲ. ನಮಗೆ ನ್ಯಾಯುತ ಪಾಲು ಬೇಕು. ನಾವು ನೀಡುತ್ತಿರುವ ಕೊಡುಗೆ ಹಾಗೂ ಪಡೆಯುತ್ತಿರುವ ಅನುದಾನದಲ್ಲಿರುವ ವ್ಯತ್ಯಾಸದ ಬಗ್ಗೆ ವಿಚಾರ ಮಂಡಿಸಲಾಗಿದೆ. ನಾವು ಹಚ್ಚು ಜ್ಯೋತಿ ಅಷ್ಟು ಸುಲಭವಾಗಿ ಆರುವುದಿಲ್ಲ. ರಾಜ್ಯದ ಜನರ ಬದುಕಿನಲ್ಲಿ ಬೆಳಕು ತರುತ್ತದೆ ಎಂದು ತಿಳಿಸಿದರು.

ಕರ್ನಾಟಕ ದೇಶದಲ್ಲೇ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿಸುತ್ತಿರುವ ರಾಜ್ಯ. ಭಾರತದ ಸಾಫ್ಟ್‌ವೇರ್ ರಪ್ತಿನಲ್ಲಿ ಕರ್ನಾಟಕದ ಕೊಡುಗೆ ಶೇ.42ರಷ್ಟಿದೆ. ಇಲ್ಲಿರುವ ಪ್ರತಿಭೆಗಳನ್ನು ನೋಡಿ ವಿಶ್ವದ ಪ್ರಮುಖ 500 ಕಂಪನಿಗಳು ನಮ್ಮಲ್ಲಿ ಕಾರ್ಯನಿರ್ವಹಿಸುತ್ತಿವೆ. ಐಟಿ ಬಿಟಿ ಸೇರಿದಂತೆ ತಂತ್ರಜ್ಞಾನ, ಏರೋಸ್ಪೇಸ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಾಳತ್ವ ವಹಿಸುತ್ತಿದೆ ಎಂದು ತಿಳಿಸಿದರು.

ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ನಿಮ್ಮ ಮಾರ್ಗದರ್ಶನವಿಲ್ಲದೆ ರಾಜ್ಯ ಈ ಪ್ರಗತಿ ಸಾಧಿಸುತ್ತಿರಲಿಲ್ಲ. ದೇಶದ ಆರ್ಥಿಕತೆ ಉತ್ತಮವಾಗಿ ನಡೆಯುತ್ತಿರುವುದರ ಹಿಂದೆ ನಿಮ್ಮ ಮಾರ್ಗದರ್ಶನವಿದೆ. ದುಡ್ಡು, ಬ್ಲಡ್ ಎರಡೂ ಹರಿಯುತ್ತಿರಬೇಕು. ಬ್ಲಡ್ ಒಂದೇ ಕಡೆ ಇದ್ದರೆ ಆರೋಗ್ಯ ಹದಗೆಡುತ್ತದೆ, ಹಣ ಒಂದೇ ಕಡೆ ಸೇರಿಕೊಂಡರೆ ಆದಾಯ ತೆರಿಗೆ, ಜಿಎಸ್ ಟಿ, ಕಳ್ಳರು ಬರುತ್ತಾರೆ ಎಂದು ಸಾಯಿಬಾಬಾ ಅವರು ಒಮ್ಮೆ ಹೇಳಿದ್ದರು ಎಂದು ಸ್ಮರಿಸಿದರು.

ನಿಮ್ಮವರು ಸಂಸ್ಥೆ(ICAI)ಗೆ ಜಾಗದ ಅಗತ್ಯತೆ ಬಗ್ಗೆ ವಿಚಾರ ಪ್ರಸ್ತಾಪ ಮಾಡಿದ್ದೀರಿ. ಅಧಿವೇಶನ ಮುಗಿದ ಬಳಿಕ ಮುಂದಿನವಾರ ಬಂದು ನನ್ನನ್ನು ಭೇಟಿ ಮಾಡಿ. ನಿಮ್ಮ ಬೇಡಿಕೆ ರಾಜ್ಯ ಹಾಗೂ ಹೊಸ ಪೀಳಿಗೆ ಪರವಾಗಿದೆ. ಸಂಪನ್ಮೂಲ ಕ್ರೂಢೀಕರಣದ ಬಗ್ಗೆ ನಮ್ಮ ಸರ್ಕಾರಕ್ಕೂ ನೀವು ಸಲಹೆ ನೀಡಿ. ನಮ್ಮ ಸರ್ಕಾರ 52 ಸಾವಿರ ಕೋಟಿಯನ್ನು ಪ್ರತಿ ವರ್ಷ ಗ್ಯಾರಂಟಿ ಯೋಜನೆಗೆ ವೆಚ್ಚವಾಗುತ್ತಿದೆ. 20 ಸಾವಿರ ಕೋಟಿ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಬೇರೆ ಬೇರೆ ಪಿಂಚಣಿ ನೀಡುತ್ತಿದ್ದೇವೆ. ವ್ಯಾಪಾರ ಉದ್ಯಮಕ್ಕೆ ತೊಂದರೆ ಆಗದಂತೆ ಯಾವ ರೀತಿ ಸರ್ಕಾರದ ಆದಾಯ ಹೆಚ್ಚಳ ಮಾಡಬಹುದು ಎಂದು ತಿಳಿಸಿ. ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ದಿದ್ದೇವೆ. ನಮ್ಮ ಮಾದರಿಯನ್ನು ಪ್ರಧಾನಮಂತ್ರಿಗಳು ಟೀಕಿಸಿದರೂ ನಂತರ ಬೇರೆ ರಾಜ್ಯಗಳಲ್ಲಿ ಅದನ್ನೇ ಪಾಲಿಸಿದ್ದಾರೆ ಎಂದರು.

ಸಿಎಸ್ಆರ್ ನಿಧಿ ಸದ್ಬಳಕೆ ಬಗ್ಗೆ ಉದ್ಯಮಿಗಳಿಗೆ ಮಾರ್ಗದರ್ಶನ ನೀಡಿ :

ನಮ್ಮ ರಾಜ್ಯದಲ್ಲಿ ಸೇವಾ ಕ್ಷೇತ್ರದಲ್ಲಿ ಈಶಾನ್ಯ ರಾಜ್ಯಗಳಿಂದ, ಕಟ್ಟಡ ನಿರ್ಮಾಣ ಕ್ಷೇತ್ರಗಳಲ್ಲಿ ಉತ್ತರ ಭಾರತದ ರಾಜ್ಯಗಳಿಂದ ಕಾರ್ಮಿಕರು ಬರುತ್ತಿದ್ದಾರೆ. ಆಂಧ್ರಪ್ರದೇಶ ವ್ಯಾಪಾರಿಗಳು ಬರುತ್ತಿದ್ದಾರೆ. ನೀವು ಅವರಿಗೆ ಮಾರ್ಗದರ್ಶನ ನೀಡಿ ಹೆಚ್ಚು ಗಳಿಸುವಂತೆ ಮಾಡಿ, ಸರ್ಕಾರಕ್ಕೆ ತೆರಿಗೆ ಪಾವತಿಸುವಂತೆ ಮಾಡಿ. ನೀವೆಲ್ಲರೂ ಸಿಎಸ್ಆರ್ ನಿಧಿ ವಿಚಾರದಲ್ಲಿ ನೀವು ಉದ್ಯಮಗಳಿಗೆ ಮಾರ್ಗದರ್ಶನ ನೀಡಬೇಕು. ನಮ್ಮ ಸರ್ಕಾರ ಸಿಎಸ್ಆರ್ ನಿಧಿಯನ್ನು ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಇದಕ್ಕಾಗಿ ನಾವು ಶಿಕ್ಷಣ ನೀತಿ ರೂಪಿಸಲಾಗುತ್ತಿದೆ ಎಂದು ಸಲಹೆ ನೀಡಿದರು.

ಜನ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಬೇಕು. 25 ವರ್ಷಗಳ ಹಿಂದೆ 70 ಲಕ್ಷ ಇದ್ದ ಬೆಂಗಳೂರು ಜನಸಂಖ್ಯೆ ಇಂದು 1.40 ಕೋಟಿಗೆ ಏರಿಕೆಯಾಗಿದೆ. 1.35 ಕೋಟಿ ವಾಹನಗಳಿವೆ. ಸಂಚಾರ ದಟ್ಟಣೆ ನಿವಾರಣೆಗೆ ನಾನು ಟನಲ್ ರಸ್ತೆ ಮಾಡಲು ಮುಂದಾದರೆ ವಿರೋಧ ಪಕ್ಷದವರು ಇದಕ್ಕೆ ವಿರೋಧಿಸುತ್ತಿದ್ದಾರೆ ಅವರಿಗೆ ಮತ ಹಾಕಬೇಕು ಎನ್ನುತ್ತೀರಿ. ಇಲ್ಲಿ ಸಾಮಾನ್ಯ ಪ್ರಜ್ಞೆ ಬೇಕು. ದೇಶದಲ್ಲಿ ವಿದ್ಯಾವಂತರಿಲ್ಲದಿದ್ದರೂ ಪ್ರಜ್ಞಾವಂತರು ಇರಬೇಕು. ಅವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ. ರಸ್ತೆ ಅಗಲೀಕರಣ ಮಾಡಲು ಕಟ್ಟಡಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳುತ್ತಿರುವಾಗ, ನೀವು ಗೆಲ್ಲಿಸಿರುವವನು ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು ಟನಲ್ ಬೇಡ ಎನ್ನುತ್ತಿದ್ದಾನೆ. ಅವರ ಕೇಂದ್ರ ನಾಯಕರಿಗೆ ನೀವು ಇಂತಹವರನ್ನು ಆಯ್ಕೆ ಮಾಡುತ್ತೀರಿ ಎಂದು ಹೇಳಿದ್ದೇನೆ ಎಂದರು.

“PMLA ಕಾಯ್ದೆ, ಬ್ಲಾಕ್ ಮನಿಯಂತಹ ಹೊಸ ಕಾನೂನುಗಳ ಮೂಲಕ ಜನಸಾಮಾನ್ಯರಿಗೆ ಹೇಗೆ ಕಿರುಕುಳ ನೀಡಲಾಗುತ್ತಿದೆ ಎಂದು ತಿಳಿದಿದೆ. ನಿಮ್ಮಲ್ಲಿ ನೈತಿಕ ಮೌಲ್ಯಗಳು ಹೆಚ್ಚಾಗಿವೆ. ಅದಕ್ಕಾಗಿ ನಿಮಗೆ ಅಭಿನಂದಿಸುವೆ. ನಾವು ಇಲ್ಲಿಗೆ ಬಂದಿರುವುದು ನಿಮ್ಮ ಚಪ್ಪಾಳೆ ಹೂವಿನ ಹಾರಕ್ಕಾಗಿ ಅಲ್ಲ. ನಾವು ನಿಮ್ಮ ಜತೆಗಿರುತ್ತೇವೆ, ನೀವು ನಮ್ಮ ಜೊತೆಯಾಗಿರಿ ಎಂದು ಹೇಳಲು ಬಂದಿದ್ದೇನೆ. ನಿಮ್ಮಲ್ಲೂ ಈ ಬದ್ಧತೆ ಇರಲಿ. ನಿಮ್ಮೆಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಮಾರ್ಗದರ್ಶನದಲ್ಲಿ ಮತ್ತಷ್ಟು ಜನ ಸಿರಿವಂತರಾಗಲಿ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ, ಭಾರತೀಯ ಚಾರ್ಟರ್ ಅಕೌಂಟೆಂಟ್ಸ್ ಅಸೋಸಿಯೇಷನ್ (ICAI) ಬೆಂಗಳೂರು ವಿಭಾಗದ ಅಧ್ಯಕ್ಷೆ ಕವಿತಾ ಪರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Hot this week

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಸರ್ಕಾರ

ಲಿಂಗಸುಗೂರು (ರಾಯಚೂರು ಜಿಲ್ಲೆ): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಡಿ ಕೆ...

Topics

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಸರ್ಕಾರ

ಲಿಂಗಸುಗೂರು (ರಾಯಚೂರು ಜಿಲ್ಲೆ): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಡಿ ಕೆ...

ರೈತರ ಸಂಕಷ್ಟದ ಜ್ಞಾನೋದಯ ಆದಂತಿಲ್ಲ-ವಿಜಯೇಂದ್ರ

ಮಸ್ಕಿ (ರಾಯಚೂರು ಜಿಲ್ಲೆ): ನಾಗೇಂದ್ರ(Nagendra) ಅವರೇನೋ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರಬಹುದು....

ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋ(Kanteerava Studio) ಸ್ಥಾಪನೆಯ ರೂವಾರಿ ತಿಪಟೂರಿನ ಟಿ.ಎಸ್...

Related Articles