ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ: ವಿವಿಧ ಕಲಾಕ್ಷೇತ್ರಗಳ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2026-27ನೇ ಸಾಲಿನ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ, ಮತ್ತು ಗಮಕ ಕ್ಷೇತ್ರಗಳ ವಿವಿಧ ಕಲಾ ವಿಭಾಗಗಳಲ್ಲಿ ಅಭ್ಯಾಸ ಮಾಡುತ್ತಿರುವ ಪ್ರತಿಭಾವಂತ ಯುವಕ-ಯುವತಿಯರಿಗೆ ಶಿಷ್ಯವೇತನಕ್ಕಾಗಿ  ಅರ್ಹ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸ ಬಯಸುವ ಆಸಕ್ತ ಕಲಾವಿದರು 16 ರಿಂದ 24 ವರ್ಷ ವಯೋಮಾನದ ಒಳಗಿರಬೇಕು.
ಅರ್ಜಿಗಳನ್ನು, ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದು ಅಥವಾ
ಅಕಾಡೆಮಿಯ ಅಧಿಕೃತ ವೆಬ್‌ಸೈಟ್ sangeetanrutyaacademy.karnataka.gov.in ಅಥವಾ ಫೇಸ್‌ಬುಕ್ ಪುಟ (facebook.com/karnatakasangeetanrutyaacademy) ಮೂಲಕ ಮಾಹಿತಿ ಪಡೆದು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪಠ್ಯಕ್ರಮ ಚಿತ್ರೀಕರಿಸಿದ ಪೆನ್ ಡ್ರೈವ್ ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಅಂಚೆ ಮೂಲಕ ಅಥವಾ ಖುದ್ದಾಗಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು – 560 002. ವಿಳಾಸಕ್ಕೆ 2026ನೇ ಸೆಪ್ಟೆಂಬರ್ 15 ರ ಒಳಗಾಗಿ ಸಲ್ಲಿಸುವುದು.
ಈ ಬಾರಿಯ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರತ್ಯಕ್ಷ ಸಂದರ್ಶನದ ಬದಲಾಗಿ, ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿ ನೀಡಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ತಮ್ಮ ಕಲಾ ಪ್ರದರ್ಶನವನ್ನು ಮೊಬೈಲ್/ವೀಡಿಯೋ ಮೂಲಕ ಚಿತ್ರೀಕರಿಸಿ, ಅದನ್ನು ಪೆನ್ ಡ್ರೈವ್ (Pen Drive) ನಲ್ಲಿ ಅಳವಡಿಸಿ ಅರ್ಜಿಯೊಂದಿಗೆ ಸಲ್ಲಿಸಬೇಕಾಗಿರುತ್ತದೆ. ಬಂದಿರುವ ಪೆನ್ ಡ್ರೈವ್‌ಗಳನ್ನು ತಜ್ಞ ತೀರ್ಪುಗಾರರು ಪರಿಶೀಲಿಸಿ ಶಿಷ್ಯವೇತನಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಎನ್. ನರೇಂದ್ರಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22215072 ಅಥವಾ ಇ-ಮೇಲ್ karnatakasangeeta@gmail.com ಸಂಪರ್ಕಿಸಬಹುದಾಗಿದೆ.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles