ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ (Karnataka) ಮೂಲದ ಪ್ರವಾಸಿಗರು (Visitors) ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.

ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.

ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಅನ್ನು ಸಹ ಒದಗಿಸಿದೆ.

 ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು seockarnataka@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು  ಪ್ರಕಟಣೆಯಲ್ಲಿ ತಿಳಿಸಿದೆ.

Hot this week

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 27 (ಕರ್ನಾಟಕ ವಾರ್ತೆ): ಅಲ್ಪಸಂಖ‍್ಯಾಂತರ ಅಭಿವೃದ್ದಿ...

Topics

ನಿತ್ಯ ಪಂಚಾಂಗ 28.08.2026 FRIDAY ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 28.08.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ:ದಕ್ಷಿಣಾಯನ AYANA: DAKSHINAYANA. ಋತು:...

ಸಹೋದರ – ಸಹೋದರಿಯ ಉತ್ತಮ ಸಂಬಂಧ ನಿರ್ಮಾಣ ಮಾಡುವ ರಕ್ಷಾ ಬಂಧನ

ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ನಿರ್ಮಾಣ ಮಾಡುವ ರಕ್ಷಾ ಬಂಧನ "ರಕ್ಷಾಬಂಧನದ...

ಕರ್ನಾಟಕ ರಾಜ್ಯ ಬರಹಗಾರರ ಸಂಘ: ಮೈಸೂರಿನಲ್ಲಿ ರಂಗ ಕಲರವ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ), ಹೂವಿನಹಡಗಲಿ (Hoovina Hadagali) ವತಿಯಿಂದ...

Related Articles