ಯುವಜನ ಸಂಘಗಳು ಬದಲಾವಣೆಯ ಶಕ್ತಿಯಾಗಿ ರೂಪುಗೊಳ್ಳಲಿ: ಡಾ.ತಿಪ್ಪೇಸ್ವಾಮಿ

(SIRA) Tumkur – ಯುವಜನ ಸಂಘಗಳು ಕೇವಲ ಕ್ರೀಡೆ, ಮನರಂಜನೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸೀಮಿತವಾಗದೆ, ತಮ್ಮ ಗ್ರಾಮಗಳ ಅಭಿವೃದ್ಧಿ ಮತ್ತು ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಬದಲಾವಣೆಯ ಶಕ್ತಿಯಾಗಿ ರೂಪುಗೊಳ್ಳಬೇಕು ಎಂದು ರಾಜ್ಯ ಯುವನೀತಿ ತಜ್ಞರ ಸಮಿತಿ ಸದಸ್ಯ (2023)  ಡಾ.ತಿಪ್ಪೇಸ್ವಾಮಿ ಕೆ.ಟಿ. (Dr. Thippeswamy) ಹೇಳಿದರು.

ನವ್ಯದೀಶ (Navyadeesha) ಸಂಸ್ಥೆ ವತಿಯಿಂದ ಸಿರಾ ತಾಲ್ಲೂಕಿನ ಕಳ್ಳಂಬೆಳ್ಳ ಗ್ರಾಮದಲ್ಲಿ ಆಯೋಜಿಸಿದ್ದ ಯುವಜನ ಸಂಘಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಯುವಜನ ಸಂಘಗಳ ಕಾರ್ಯಾಚರಣೆ, ಸಮುದಾಯ ಅಭಿವೃದ್ಧಿಯಲ್ಲಿ ಸಂಘಗಳ ಪಾತ್ರ ಹಾಗೂ ಯುವ ನಾಯಕತ್ವದ ಕುರಿತು ಅಧಿವೇಶನ ನಡೆಸಿದರು.

ಯುವಜನರು ತಮ್ಮ ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಹೊರಗಿನಿಂದ ಯಾರಾದರೂ ಬಂದು ಪರಿಹರಿಸುತ್ತಾರೆ ಎಂಬ ಮನೋಭಾವದಿಂದ ಹೊರಬಂದು, ಸಮಸ್ಯೆಗಳನ್ನು ಗುರುತಿಸಿ, ಅವುಗಳ ಕಾರಣಗಳನ್ನು ಅರ್ಥಮಾಡಿಕೊಂಡು, ಪರಿಹಾರಕ್ಕಾಗಿ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಯುವಜನ ಸಂಘಗಳು ಗ್ರಾಮ ಮಟ್ಟದಲ್ಲಿ ಯುವಕರನ್ನು ಒಗ್ಗೂಡಿಸುವ ಹಾಗೂ ನಾಯಕತ್ವ ಬೆಳೆಸುವ ಪ್ರಮುಖ ವೇದಿಕೆಗಳಾಗಬೇಕು ಎಂದು ಅವರು ತಿಳಿಸಿದರು.

ಗ್ರಾಮಗಳಲ್ಲಿನ ಶಿಕ್ಷಣ, ಆರೋಗ್ಯ, ಸ್ವಚ್ಛತೆ, ಪರಿಸರ ಸಂರಕ್ಷಣೆ, ಸಾರ್ವಜನಿಕ ಸೌಲಭ್ಯಗಳು, ಮಕ್ಕಳ ಹಾಗೂ ಯುವಜನರ ಸಮಸ್ಯೆಗಳು ಸೇರಿದಂತೆ ವಿವಿಧ ವಿಚಾರಗಳಲ್ಲಿ ಯುವಜನ ಸಂಘಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸ್ಥಳೀಯ ಆಡಳಿತ ವ್ಯವಸ್ಥೆಯೊಂದಿಗೆ ಸಮನ್ವಯ ಸಾಧಿಸಿ, ಸಮುದಾಯದ ಅಗತ್ಯಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವಲ್ಲಿ ಯುವಜನರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಯುವ ನಾಯಕತ್ವ ಎಂದರೆ ಕೇವಲ ಸಂಘದ ಪದಾಧಿಕಾರಿಯಾಗುವುದಲ್ಲ. ಇತರರನ್ನು ಪ್ರೇರೇಪಿಸುವುದು, ತಂಡವಾಗಿ ಕೆಲಸ ಮಾಡುವುದು, ಜವಾಬ್ದಾರಿ ತೆಗೆದುಕೊಳ್ಳುವುದು ಹಾಗೂ ಸಮುದಾಯದ ಹಿತಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದಾಗಿದೆ ಎಂದು ಅವರು ವಿವರಿಸಿದರು.

ಕಾರ್ಯಾಗಾರದಲ್ಲಿ ಸಿರಾ ತಾಲ್ಲೂಕಿನ 12 ಗ್ರಾಮಗಳ ವಿವಿಧ ಯುವಜನ ಸಂಘಗಳ ಪದಾಧಿಕಾರಿಗಳು ಭಾಗವಹಿಸಿ, ಸಂಘಗಳ ಪರಿಣಾಮಕಾರಿ ಕಾರ್ಯಾಚರಣೆ ಹಾಗೂ ಮುಂದಿನ ಚಟುವಟಿಕೆಗಳ ಕುರಿತು ಚರ್ಚಿಸಿದರು.

ಕಾರ್ಯಕ್ರಮದಲ್ಲಿ ನವ್ಯದೀಶ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಮೇಘರಾಮ್ ದಾಸ್, ಶ್ರೀಮತಿ ಅಶ್ವಿನಿ, ಶ್ರೀ ಮಂಜುನಾಥ್ ಹಾಗೂ ಶ್ರೀ ಜನಾರ್ಧನ್ ಉಪಸ್ಥಿತರಿದ್ದರು.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles