ಬೆಂಗಳೂರಿನ ಘನತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಸೆ. 02 ರಂದು ಶಾಸಕರ ಉಪ ಸಮಿತಿ ಹಾಗೂ CAG ತಂಡ ಜಂಟಿ ಭೇಟಿ

ಬೆಂಗಳೂರು : ಬೆಂಗಳೂರು(Bangalore) ನಗರ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ವ್ಯವಸ್ಥೆಯನ್ನು ಪರಿಶೀಲಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಾನ ಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಉಪ ಸಮಿತಿ ಹಾಗೂ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (CAG) ಉನ್ನತ ಮಟ್ಟದ ತಂಡವು ಜಂಟಿಯಾಗಿ ಸ್ಥಳ ಪರಿವೀಕ್ಷಣೆ (Field Inspection) ಕೈಗೊಳ್ಳಲಿದೆ.

ಸದರಿ ಜಂಟಿ ತಂಡವು 2026 ನೇ ಸೆಪ್ಟೆಂಬರ್ 02 ರಂದು ಬೆಳಿಗ್ಗೆ 11.30 ಗಂಟೆಗೆ ವಿಕಾಸಸೌಧದ ಉತ್ತರ ದ್ವಾರದಲ್ಲಿರುವ ಗಾಂಧಿ ಪ್ರತಿಮೆ ಬಳಿಯಿಂದ ಪ್ರಯಾಣ ಬೆಳೆಸಲಿದ್ದು,  ಬೆಂಗಳೂರು ನಗರದ ಜಿ.ಬಿ.ಎ (GBA) ವ್ಯಾಪ್ತಿಯಲ್ಲಿ ಬರುವ ವಿವಿಧ ಪ್ರಮುಖ ಘನತ್ಯಾಜ್ಯ ಸಂರಕ್ಷಣಾ ಹಾಗೂ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ, ತ್ಯಾಜ್ಯ ಸಂಸ್ಕರಣೆಯ ಪ್ರಸ್ತುತ ಸ್ಥಿತಿಗತಿ ಮತ್ತು ನಿರ್ವಹಣಾ ವಿಧಾನಗಳನ್ನು ವಿಸ್ತೃತವಾಗಿ ಪರಿಶೀಲಿಸಲಿದೆ‌ ಎಂದು ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಾಖೆಯ ಜಂಟಿ ನಿರ್ದೇಶಕರಾದ ಪಿ.ಸೀನ ಅವರು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಾಖೆಯ ಜಂಟಿ ನಿರ್ದೇಶಕರಾದ ಪಿ.ಸೀನ, ಮೊಬೈಲ್ ದೂರವಾಣಿ ಸಂಖ್ಯೆ 099459 41789 ಅಥವಾ ಕಚೇರಿ ದೂರವಾಣಿ ಸಂಖ್ಯೆ 080 22251469 ನ್ನು ‌ಸಂಪರ್ಕಿಸಬಹುದು.

Hot this week

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಸರ್ಕಾರ

ಲಿಂಗಸುಗೂರು (ರಾಯಚೂರು ಜಿಲ್ಲೆ): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಡಿ ಕೆ...

Topics

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಸರ್ಕಾರ

ಲಿಂಗಸುಗೂರು (ರಾಯಚೂರು ಜಿಲ್ಲೆ): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಡಿ ಕೆ...

ರೈತರ ಸಂಕಷ್ಟದ ಜ್ಞಾನೋದಯ ಆದಂತಿಲ್ಲ-ವಿಜಯೇಂದ್ರ

ಮಸ್ಕಿ (ರಾಯಚೂರು ಜಿಲ್ಲೆ): ನಾಗೇಂದ್ರ(Nagendra) ಅವರೇನೋ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರಬಹುದು....

ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋ(Kanteerava Studio) ಸ್ಥಾಪನೆಯ ರೂವಾರಿ ತಿಪಟೂರಿನ ಟಿ.ಎಸ್...

Related Articles