ಕೃಷ್ಣನ ವೇಷದಲ್ಲಿ ಮಿಂಚಿದ ಪುಟಾಣಿ ಕೃಷ್ಣರು: ಸ್ಕಾಲ್ವಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಅದ್ಧೂರಿ ಕೃಷ್ಣೋತ್ಸವ

ಬೆಂಗಳೂರು: ಭಾರತೀಯ ಸಂಸ್ಕೃತಿ, (Culture) ಪರಂಪರೆ ಮತ್ತು ಮಕ್ಕಳ (Childrens) ಪ್ರತಿಭೆಯ ಅನನ್ಯ ಸಂಗಮವಾಗಿ ಜೆ.ಪಿ.ನಗರದ (JP Nagar) ಸ್ಕಾಲ್ವಿ (Skalvi International School) ಇಂಟರ್‌ನ್ಯಾಷನಲ್ ಶಾಲೆಯಲ್ಲಿ ‘ಕೃಷ್ಣೋತ್ಸವ 2026 – ಕಾನ್ಹಾ ಕೆ ರಂಗ್, ಸ್ಕಾಲ್ವಿ ಕೆ ಸಂಗ್!’ (Krishnotsava) ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು. ಸಾವಿರಾರು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಸಂಭ್ರಮದಿಂದ ಪಾಲ್ಗೊಂಡರು.

ಕಳೆದ 8 ವರ್ಷಗಳಿಂದ ಸ್ಕಾಲ್ವಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಕೃಷ್ಣೋತ್ಸವವನ್ನು ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಶ್ರೀಕೃಷ್ಣನ ಬಾಲಲೀಲೆಗಳು, ಕೃಷ್ಣತತ್ವ, ಭಗವದ್ಗೀತೆಯ ಸಂದೇಶ ಹಾಗೂ ಭಾರತೀಯ ಸಂಸ್ಕೃತಿಯ ಮಹತ್ವವನ್ನು ಮಕ್ಕಳಿಗೆ ಪರಿಚಯಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

ವಿದ್ಯಾರ್ಥಿಗಳು ಶ್ರೀಕೃಷ್ಣ, ರಾಧೆ ಹಾಗೂ ಗೋಪಿಕೆಯರ ವೇಷಭೂಷಣ ಧರಿಸಿ ನೃತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಎಲ್ಲರ ಗಮನ ಸೆಳೆದರು. ಕೃಷ್ಣನ ಬಾಲಲೀಲೆ ಮತ್ತು ರಾಧಾ–ಕೃಷ್ಣರ ಭಕ್ತಿಯನ್ನು ಮಕ್ಕಳ ಮನಮೋಹಕ ಪ್ರದರ್ಶನದ ಮೂಲಕ ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಪೋಷಕರ ವಿಶೇಷ ಸಹಭಾಗಿತ್ವ, ಆಟಗಳು, ನೃತ್ಯ ಮತ್ತು ಸಂಗೀತ, ಗ್ರ್ಯಾಂಡ್ ದಹಿ ಹಂಡಿ ಹಾಗೂ DJ ಸಂಭ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆದವು. ಪೋಷಕರು ಮತ್ತು ಮಕ್ಕಳು ಒಟ್ಟಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ಕಾಲ್ವಿ ಇಂಟರ್‌ನ್ಯಾಷನಲ್ ಶಾಲೆಯ ಅಧ್ಯಕ್ಷ ಸತೀಶ್ ಕಾಕಲ್, “ಕೃಷ್ಣೋತ್ಸವ ಕೇವಲ ಒಂದು ಹಬ್ಬದ ಆಚರಣೆಯಲ್ಲ. ಮಕ್ಕಳಿಗೆ ಶ್ರೀಕೃಷ್ಣನ ಜೀವನ, ಅವರ ಬಾಲಲೀಲೆಗಳು ಹಾಗೂ ಕೃಷ್ಣತತ್ವವನ್ನು ಅರ್ಥಮಾಡಿಸುವುದು ನಮ್ಮ ಉದ್ದೇಶ. ಕೃಷ್ಣನು ನಮಗೆ ಪ್ರೀತಿ, ಸ್ನೇಹ, ಧೈರ್ಯ, ಕರ್ತವ್ಯ ಮತ್ತು ಧರ್ಮದ ಮಹತ್ವವನ್ನು ಕಲಿಸುತ್ತಾನೆ. ಆಧುನಿಕ ಶಿಕ್ಷಣದ ಜೊತೆಗೆ ಮಕ್ಕಳಿಗೆ ನಮ್ಮ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಪರಿಚಯಿಸುವುದು ಅತ್ಯಂತ ಅಗತ್ಯ. ಸಾವಿರಾರು ಮಕ್ಕಳು ಒಟ್ಟಾಗಿ ಈ ಸಂಭ್ರಮದಲ್ಲಿ ಭಾಗವಹಿಸುತ್ತಿರುವುದು ನಮಗೆ ಹೆಮ್ಮೆಯ ಸಂಗತಿ,” ಎಂದರು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಡಾ. ಸುಂದರ್ ರಾಜು, ಪ್ರಾಂಶುಪಾಲೆ ಸುಂಕುರಾತ್ರಿ ಉಷಾ , ಹೆಚ್. ಪಿ. ಮಂಜಪ್ಪ, ಶಿಕ್ಷಣ ತಜ್ಞರು,, ರಾಧಿಕ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕೃಷ್ಣ–ರಾಧೆಯ ವೇಷಭೂಷಣ, ನೃತ್ಯ, ಸಂಗೀತ ಮತ್ತು ದಹಿ ಹಂಡಿ ಸಂಭ್ರಮದೊಂದಿಗೆ ಕೃಷ್ಣೋತ್ಸವವು ಯಶಸ್ವಿಯಾಗಿ ನೆರವೇರಿತು.va

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles