ಸೂರಿಲ್ಲದವರಿಗೆ ಸೂರು ಒದಗಿಸಬೇಕು ಎಂಬುದು ನನ್ನ ಆಶಯ: ಡಾ. ಜಿ.ಪರಮೇಶ್ವರ

ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಸಲುವಾಗಿ ಪ್ರಜಾಸೇವಾ ಇಲಾಖೆಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ ಎಂದು (DCM) ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ (Dr. G. Parameshwar)  ಅವರು ಹೇಳಿದರು. ಪ್ರಜಾ ಸೇವಾ ಇಲಾಖೆ (Praja Seva) ಹಾಗೂ ತುಮಕೂರು ಜಿಲ್ಲಾಡಳಿತದ ವತಿಯಿಂದ ಗುಬ್ಬಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ‘ಪ್ರಜಾ ಸೇವಾ ಅಭಿಯಾನ ಜನಸಭೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ಇಡೀ ದೇಶದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಅದೇ ದಿನ ಪ್ರಜಾಸೇವಾ ಅಭಿಯಾನ ಆಚರಿಸಬೇಕು ಎಂದು ಮುಖ್ಯಮಂತ್ರಿ ಅವರು ಕರೆ ಕೊಟ್ಟಿದ್ದರು. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ನೂತನ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದಾರೆ ಎಂದರು.

ಯಾವುದೇ ಇಲಾಖೆಯ ಸಮಸ್ಯೆಗಳನ್ನು ನೇರವಾಗಿ ಪ್ರಜಾಸೇವೆ ಇಲಾಖೆಯಡಿ ದಾಖಲಿಸಿದರೆ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಸಕಾಲದಲ್ಲಿ ಪರಿಹರಿಸಿಕೊಡುವ ಕೆಲಸ ಮಾಡಿಕೊಡಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮ ಇಂದಿನ ದಿನಕ್ಕೆ ಮಾತ್ರ ಸೀಮಿತವಾಗಿಲ್ಲ. ಪ್ರತಿ ತಿಂಗಳು ಮೊದಲನೆ ಮತ್ತು ಮೂರನೇ ಶನಿವಾರದಂದು ಪ್ರತಿ ತಾಲ್ಲೂಕಿನಲ್ಲಿ ಅಭಿಯಾನ ನಡೆಸಲಾಗುತ್ತದೆ. ನಂತರ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಅಭಿಯಾನ ಸಭೆ ನಡೆಸಲಾಗುವುದು. ಇದು ನಿರಂತರವಾಗಿ ನಡೆಯಲಿದ್ದು, ಇಂದು ಅರ್ಜಿ ನೀಡಲು ಸಾಧ್ಯವಾಗದವರು ಮೂರನೇ ಶನಿವಾರ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರಿಂದ ಬರುವ ಅರ್ಜಿಗಳಿಗೆ ಪ್ರಾಮುಖ್ಯತೆ ಕೊಟ್ಟು, ಸರ್ಕಾರ ಜನರ ಸಮಸ್ಯೆಗಳನ್ನು ಬಗೆಹರಿಸಿಕೊಡುವ ಕೆಲಸ ಮಾಡಲಿದೆ ಎಂದರು.

ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಹಳಷ್ಟು ಟೀಕೆಗಳು ಕೇಳಿಬಂದವು. ಯಾರಿಗೆ ಸಹಾಯ ಹಸ್ತದ ನಿರೀಕ್ಷೆಯಿತ್ತು, ಸರ್ಕಾರದಿಂದ ಸಹಾಯ ಬೇಕಾಗಿತ್ತು ಅಂತವರಿಗೆ ಗ್ಯಾರಂಟಿ ಯೋಜನೆಗಳು ಹೆಚ್ಚು ಅನುಕೂಲವಾಗಿವೆ. ಕೂಲಿ ಮಾಡುವವರಿಗೆ, ಬಡವರ ಜೀವನಕ್ಕೆ ಸಹಾಯವಾಗುತ್ತಿದೆ. ಕೂಲಿ ಮಾಡುವ ಹೆಣ್ಣು ಮಗಳಿಗೆ ಎರಡು ಸಾವಿರ ರೂ. ದೊಡ್ಡದು. ಆಕೆಗೆ ಎರಡು ಸಾವಿರ ರೂಪಾಯಿ ಎರಡು ಲಕ್ಷದ ಮೌಲ್ಯಕ್ಕೆ ಸಮ.

ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಾಗ ‘ಅಜ್ಜಿಯೊಬ್ಬರಿಗೆ ಎರಡು ಸಾವಿರ ರೂ. ಬರುತ್ತದೆಯೇ ಎಂದು ವಿಚಾರಿಸಿದೆ. ಆಗ ಅವರು ಈ ಹಣ ನನಗೆ ಔಷಧ ತೆಗೆದುಕೊಳ್ಳಲು ಸಹಾಯವಾಗುತ್ತಿದ್ದು, ನಾನು ಬದುಕಿರುವುದೇ ಈ ಎರಡು ಸಾವಿರ ರೂ. ಹಣದಿಂದ’ ಎಂಬ ಮಾತನ್ನು ಹೇಳಿದರು. ಇದನ್ನು ಕೇಳಿದ ನನಗೆ ನಮ್ಮ ಕಾರ್ಯಕ್ರಮ ಸಾರ್ಥಕವಾಗಿದೆ ಎಂಬ ಭಾವನೆ ಮೂಡಿತು ಎಂದರು.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles