ಜಾನಕಿ ಸ್ಮೃತಿ: ದೋಹಾದಲ್ಲಿ ಗಾನ ಕೋಗಿಲೆ ಎಸ್. ಜಾನಕಿಯವರಿಗೆ ಗಾನ ನಮನ

ದೋಹಾ (ಕತಾರ್): ಪೀಳಿಗೆಗಳನ್ನು ಮಂತ್ರಮುಗ್ಧಗೊಳಿಸಿದ, ಪ್ರತಿಯೊಬ್ಬರ ಹೃದಯಗಳಲ್ಲಿ ಸದಾ ಜೀವಂತವಾಗಿರುವ ಭಾರತದ ಗಾನ ಕೋಗಿಲೆ, ಗಾನ ಗಂಧರ್ವೆ ಶ್ರೀಮತಿ ಎಸ್. ಜಾನಕಿ (Smt.S.Janaki) ಅವರ ಸವಿನೆನಪಿಗಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ಕತಾರ್(kathar), ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಅಶೋಕ ಸಭಾಂಗಣದಲ್ಲಿ ‘ಜಾನಕಿ ಸ್ಮೃತಿ’(Janaki Smruti) ಎಂಬ ಅದ್ದೂರಿ ಸಂಗೀತ ಸಂಜೆಯನ್ನು ಆಯೋಜಿಸಿತ್ತು.

‏ಈ ವಿಶೇಷ ಕಾರ್ಯಕ್ರಮದಲ್ಲಿ ಕತಾರ್‌ನ ಪ್ರಮುಖ ಕನ್ನಡ ಸಂಘಟನೆಯಾದ ಕರ್ನಾಟಕ ಸಂಘ ಕತಾರ್ ಅತ್ಯಂತ ಸಕ್ರಿಯವಾಗಿ ಭಾಗವಹಿಸಿ ಗಮನ ಸೆಳೆಯಿತು. ಭಾರತದ ನಾನಾ ಭಾಷೆಗಳಲ್ಲಿ ಗಾನಸುಧೆ ಹರಿಸಿದ್ದ ಎಸ್. ಜಾನಕಿ ಅವರ ಅಮರ ಗೀತೆಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಜನಪ್ರಿಯ ಹಾಡುಗಳನ್ನು ಗಾಯಕರು ಪ್ರಸ್ತುತಪಡಿಸಿದರು.

‏ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕರ್ನಾಟಕ ಸಂಘ ಕತಾರ್‌ನ ಸದಸ್ಯರು ಮತ್ತು ಪ್ರತಿಭಾವಂತ ಗಾಯಕರು ಎಸ್. ಜಾನಕಿ ಅವರು ಹಾಡಿದ ಸದಾಹಸಿರು ಕನ್ನಡ ಗೀತೆಗಳ ಮಧುರ ಗಾಯನದ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಸಭಾಂಗಣದಲ್ಲಿದ್ದ ಸಂಗೀತ ಪ್ರೇಮಿಗಳು ಕನ್ನಡಿಗರ ಈ ಗಾನ ವೈಭವಕ್ಕೆ ಕರತಾಡನದ ಮೂಲಕ ಅಭಿನಂದನೆ ಸಲ್ಲಿಸಿದರು.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಐಸಿಸಿ ಅಧ್ಯಕ್ಷರಾದ ಶ್ರೀ ಎ.ಪಿ. ಮಣಿಕಂಠನ್ ಅವರು, ಭಾರತೀಯ ಚಿತ್ರರಂಗಕ್ಕೆ ಮತ್ತು ಸಂಗೀತ ಕ್ಷೇತ್ರಕ್ಕೆ ಎಸ್. ಜಾನಕಿ ಅವರು ನೀಡಿರುವ ಅಪಾರ ಕೊಡುಗೆಯನ್ನು ಸ್ಮರಿಸಿದರು. ಅವರ ಅದ್ಭುತ ಧ್ವನಿ ಸೌಂದರ್ಯ ಹಾಗೂ ಗಾಯನ ಶೈಲಿ ದೇಶದ ಲಕ್ಷಾಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಶಾಶ್ವತವಾಗಿ ಉಳಿದಿದೆ ಎಂದು ಬಣ್ಣಿಸಿದರು.

‏ಈ ಸ್ಮರಣೀಯ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು, ಸಂಘದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಹಾಗೂ ಕತಾರ್‌ನ ಭಾರತೀಯ ಸಮುದಾಯದ ಪ್ರಮುಖ ಗಣ್ಯರು ಭಾಗವಹಿಸಿ ಗಾನ ಕೋಗಿಲೆಯ ಸವಿನೆನಪಿನ ಸುಮುಧುರ ಸಂಗೀತ ಸಂಜೆಗೆ ಸಾಕ್ಷಿಯಾದರು.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles