ಮನೆಸೇವಕನಿಂದ ಚಿನ್ನಾಭರಣ, ನಗದು ಕಳವು, ಕಛೇರಿಯಲ್ಲಿ ನಗದು ಕಳವು 

145 ಗ್ರಾಂ ಚಿನ್ನಾಭರಣಗಳು, 19 ಗ್ರಾಂ ಬೆಳ್ಳಿಯ ವಸ್ತುಗಳು, ₹ 26.15 ಲಕ್ಷ ನಗದು,
12 ದ್ವಿಚಕ್ರ ವಾಹನಗಳು ಹಾಗೂ 01 ಕಾರು ವಶ. ಒಟ್ಟು ಮೌಲ್ಯ ₹ 59.91 ಲಕ್ಷ

ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಮನೆಸೇವಕನಿಂದ ಚಿನ್ನಾಭರಣ, ನಗದು ಕಳವು, ಓರ್ವ ವ್ಯಕ್ತಿಯ ಬಂಧನ, 145 ಗ್ರಾಂ ಚಿನ್ನಾಭರಣ, 19 ಗ್ರಾಂ ಬೆಳ್ಳಿಯ ವಸ್ತುಗಳು, 01 ಕಾರು ಹಾಗೂ 01 ದ್ವಿಚಕ್ರ ವಾಹನ ವಶ, ಒಟ್ಟು ಮೌಲ್ಯ ₹ 24.96 ಲಕ್ಷ.

ಬನಶಂಕರಿ ಪೊಲೀಸ್ ಠಾಣಾ ಸರಹದ್ದಿನ 7ನೇ ಹಂತದ 4ನೇ ಕ್ರಾಸ್‌ನಲ್ಲಿ ವಾಸವಿರುವ ಪರ‍್ಯಾದುದಾರರು ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ಈಗ್ಗೆ ಮೂರು ತಿಂಗಳಿನಿ0ದ ಮನೆಗೆಲಸ ಮಾಡಿಕೊಂಡಿದ್ದ ವ್ಯಕ್ತಿಯು ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿರುವ ಬಗ್ಗೆ ಮನೆಗೆಲಸದವನ ಮೇಲೆ ಅನುಮಾನ ಇರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಸೇವಕನಿಂದ ಕಳವು ಪ್ರಕರಣ ದಾಖಲಾಗಿರುತ್ತದೆ.
ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯನ್ನು ಠಾಣೆಗೆ ಕರೆಸಿ, ವಿಚಾರಣೆಗೊಳಪಡಿಸಲಾಗಿ, ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಅದೇದಿನ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 06 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಕಳವು ಮಾಡಿದ ಚಿನ್ನಾಭರಣಗಳನ್ನು ಬನಶಂಕರಿಯ ಕೆ.ಆರ್. ರಸ್ತೆಯಲ್ಲಿರುವ ಜ್ಯುವೆಲರಿ ಅಂಗಡಿಯಲ್ಲಿ ಅಡಮಾನವಿಟ್ಟು ಬಂದ ಹಣದಲ್ಲಿ 01 ಕಾರು, 01 ದ್ವಿಚಕ್ರ ವಾಹನ ಖರೀದಿಸಿರುವುದಾಗಿ ತಿಳಿಸಿರುತ್ತಾನೆ. ಆತನು ನೀಡಿದ ಮಾಹಿತಿ ಮೇರೆಗೆ ಕೆ.ಆರ್. ರಸ್ತೆಯಲ್ಲಿರುವ ಜ್ಯುವೆಲರಿ ಅಂಗಡಿಯಿAದ 130.5 ಗ್ರಾಂ ಚಿನ್ನಾಭರಣ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿಟ್ಟಿದ್ದ 14.5 ಗ್ರಾಂ ಚಿನ್ನಾಭರಣ 19 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ 01 ಕಾರು, 01 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಒಟ್ಟಾರೆ 145 ಗ್ರಾಂ ಚಿನ್ನಾಭರಣ 19 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ 01 ಕಾರು, 01 ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ ₹ 24,96,000
****

ಕೆಲಸ ಮಾಡುತ್ತಿದ್ದ ಕಛೇರಿಯಲ್ಲಿಯೇ ನಗದನ್ನು ಕಳವು ಮಾಡಿದ್ದ ಕೆಲಸಗಾರನ ಬಂಧನ, ನಗದು ₹ 26.15 ಲಕ್ಷ ವಶ.

ಬನಶಂಕರಿ ಪೊಲೀಸ್ ಠಾಣಾ ಸರಹದ್ದಿನ 2ನೇ ಹಂತದ ಶ್ರೀರಾಮ ರಸ್ತೆಯಲ್ಲಿ ವಾಸವಿರುವ ಪರ‍್ಯಾದುದಾರರು ದಿನಾಂಕ:14/08/2026 ರಂದು ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪರ‍್ಯಾದುದಾರರು ಕೋರಮಂಗಲದಲ್ಲಿ ಮನಿ ಎಕ್ಸ್ಚೆಂಜ್ ಆಫೀಸ್ ಇಟ್ಟುಕೊಂಡು ವ್ಯವಹಾರ ಮಾಡಿಕೊಂಡಿರುತ್ತಾರೆ. ಈಗ್ಗೆ ಸುಮಾರು 04 ವರ್ಷಗಳಿಂದ ಪರ‍್ಯಾದುದಾರರ ಕಛೇರಿಯಲ್ಲಿ ಕೆಲಸಮಾಡಿಕೊಂಡಿದ್ದ ವ್ಯಕ್ತಿಯು ಕಛೇರಿಗೆ ಸಂಬAಧಪಟ್ಟ ಕೆಲಸಗಳನ್ನು ಹಾಗೂ ಮನೆಯಿಂದ ಕಛೇರಿಗೆ, ಕಛೇರಿಯಿಂದ ಮನೆಗೆ ಹಣ ತೆಗೆದುಕೊಂಡು ಹೋಗುವುದು ಹಾಗೂ ಬ್ಯಾಂಕಿನ ಕೆಲಸಗಳನ್ನು ಮಾಡಿಕೊಂಡಿರುತ್ತಾನೆ. ಮತ್ತೊಬ್ಬ ಮಗನಿಗೆ ₹ 26,80,000/-ನಗದನ್ನು ತಲುಪಿಸುವಂತೆ ನೀಡಿದ್ದು, ಆತನು ಹಣವನ್ನು ಪರ‍್ಯಾದುದಾರರ ಮಗನಿಗೆ ತಲುಪಿಸದೆ ಹಣದೊಂದಿಗೆ ಪರಾರಿಯಾಗಿರುತ್ತಾನೆಂದು ತಿಳಿಸಿರುತ್ತಾರೆ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ತಿಲಕ್‌ನಗರದ ಆತನ ವಾಸದ ಮನೆಯಿಂದ ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ನಗದನ್ನು ತೆಗೆದುಕೊಂಡು ಹೋಗಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ. ಅದೇ ದಿನ ಆತನ ವಾಸದ ಮನೆಯಿಂದ ₹ 26,15,000/-(ಇಪ್ಪತ್ತಾರು ಲಕ್ಷದ ಹದಿನೈದು ಸಾವಿರ ರೂಪಾಯಿ)ಯನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರ ಬಂಧನ, 11 ದ್ವಿಚಕ್ರ ವಾಹನಗಳ ವಶ, ಮೌಲ್ಯ ₹ 8.80 ಲಕ್ಷ.

ಬನಶಂಕರಿ ಪೊಲೀಸ್ ಠಾಣಾ ಸರಹದ್ದಿನ 2ನೇ ಹಂತದಲ್ಲಿ ವಾಸವಿರುವ ಪರ‍್ಯಾದುದಾರರು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ರಾತ್ರಿ ಮನೆಯ ಕಾಂಪೌ0ಡಿನಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ್ದು, ವಾಹನವನ್ನು ಯಾರೋ ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ,  ಭವಾನಿ ನಗರದ ಬಳಿ ಪ್ರಕರಣದಲ್ಲಿ ಕಳುವಾಗಿದ್ದ 01 ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಮತ್ತೋರ್ವ ಸಹಚರನೊಂದಿಗೆ ಸೇರಿಕೊಂಡು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರಿನ ವಿವಿಧ ಠಾಣಾ ಸರಹದ್ದುಗಳಲ್ಲಿಯೂ ಸಹ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಅದೇದಿನ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 05 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದು ವಿಚಾರಣೆಗೊಳಪಡಿಸಲಾಗಿ ಮತ್ತೋರ್ವ ಸಹಚರನ ಬಗ್ಗೆ ಮಾಹಿತಿಯನ್ನು ನೀಡಿರುತ್ತಾನೆ.
ಆರೋಪಿಯು ನೀಡಿದ ಮಾಹಿತಿ ಮೇರೆಗೆ ಮತ್ತೋರ್ವ ಸಹಚರನನ್ನು ಕೋಗಿಲು ಕ್ರಾಸ್ ಬಳಿ ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಇಬ್ಬರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ ಬನಶಂಕರಿ 2ನೇ ಹಂತದ ಹೋಟೆಲ್‌ವೊಂದರ ಬಳಿ ಹಾಗೂ ಕದಿರೇನಹಳ್ಳಿ ಆಟದ ಮೈದಾನದ ಬಳಿ ನಿಲ್ಲಿಸಿರುವುದಾಗಿ ತಿಳಿಸಿದ್ದು, ಒಟ್ಟು 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುತ್ತದೆ. ಆರೋಪಿಗಳಿಬ್ಬರ ವಶÀದಿಂದ ಒಟ್ಟು 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ ₹ 8,80,000

ಆರೋಪಿಗಳಿಬ್ಬರ ಬಂಧನದಿ0ದ ಬನಶಂಕರಿ ಪೊಲೀಸ್ ಠಾಣೆಯ 06 ಹಾಗೂ ಚಿಕ್ಕಜಾಲ, ಮಾದನಾಯಕನಹಳ್ಳಿ, ಬ್ಯಾಡರಹಳ್ಳಿ, ಹೆಚ್.ಎಸ್.ಆರ್ ಲೇಔಟ್, ಮೈಕೋಲೇಔಟ್ ಪೊಲೀಸ್ ಠಾಣೆಗಳ ತಲಾ 01 ದ್ವಿಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ, ಒಟ್ಟು 11 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಆರೋಪಿಗಳಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಬಂಧನಕ್ಕೆ ಒಳಪಡಿಸಲಾಗಿರುತ್ತದೆ.
ಈ ಮೂರು ಕಾರ್ಯಾಚರಣೆಗಳನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ:ಕೆ ವಂಶಿಕೃಷ್ಣ, ಐಪಿಎಸ್, ಮಾರ್ಗದರ್ಶನದಲ್ಲಿ, ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ.ಕೆ.ಸಿ.ಲಕ್ಷಿö್ಮನಾರಾಯಣ ನೆತೃತ್ವದಲ್ಲಿ, ಬನಶಂಕರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅರ್ಜುನ್.ಸಿ.ಆರ್ ಹಾಗೂ ಸಿಬ್ಬಂದಿಗಳ ತಂಡ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles