ವೀರ್ ದಾಸ್ ಕಾಮಿಡಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳ ತೀವ್ರ ವಿರೋಧ !

ಬೆಂಗಳೂರು: ನಗರದ ಗುಡ್ ಶೆಫರ್ಡ್ ಆಡಿಟೋರಿಯಂನಲ್ಲಿ (Good Shepherd Auditorium) ಸೆಪ್ಟೆಂಬರ್ 11 ಮತ್ತು 12 ರಂದು ಆಯೋಜಿಸಲಾಗಿರುವ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಇಂದು ಅಶೋಕನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಶ್ರೀ.ಮೋಹನ(Sree.Mohana), ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ನಾರಾಯಣ ಗೌಡ(Sree. Narayana Gowda) ಸೇರಿದಂತೆ ಪ್ರಮುಖ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಮುಖ ಆಕ್ಷೇಪಗಳು
1.ವಿಕೃತ ಇತಿಹಾಸ ಮತ್ತು ಅವಹೇಳನ: ವೀರ್ ದಾಸ್ ಅವರು ಈ ಹಿಂದೆ ತಮ್ಮ “I Come From Two Indias” ಅಂತಹ ಕಾರ್ಯಕ್ರಮಗಳ ಮೂಲಕ ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತ ದೇಶ, ಭಾರತೀಯ ಸಮಾಜ ಮತ್ತು ಮಹಿಳೆಯರ ಕುರಿತು ಅತ್ಯಂತ ಕೆಟ್ಟದಾಗಿ ಚಿತ್ರಿಸಿ ದೇಶದ ಗೌರವಕ್ಕೆ ಧಕ್ಕೆ ತಂದಿದ್ದಾರೆ.
2.ಧಾರ್ಮಿಕ ಭಾವನೆಗಳಿಗೆ ಅಪಚಾರ: ಹಾಸ್ಯದ ಹೆಸರಿನಲ್ಲಿ ಹಿಂದೂ ದೇವತೆಗಳನ್ನು ಹಾಗೂ ಧಾರ್ಮಿಕ ನಂಬಿಕೆಗಳನ್ನು ಹೀಯಾಳಿಸುವುದು ಇವರ ಚಾಳಿಯಾಗಿದೆ. ಇಂತಹ ಪ್ರಚೋದನಾತ್ಮಕ ಹೇಳಿಕೆಗಳಿಂದ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುವ ಸಾಧ್ಯತೆ ಇದೆ.
 3. ಹಿಂದಿನ ಕಪ್ಪು ಚುಕ್ಕೆಗಳು: 2021ರಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ಇವರು ನೀಡಿದ ಹೇಳಿಕೆಗಳ ವಿರುದ್ಧ ಈಗಾಗಲೇ ದೆಹಲಿ ಮತ್ತು ಮುಂಬೈನಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಕಳೆದ 2022ರಲ್ಲಿ ಬೆಂಗಳೂರಿನಲ್ಲಿ ಇವರು ಆಯೋಜಿಸಿದ್ದ ಕಾರ್ಯಕ್ರಮವೂ ತೀವ್ರ ವಿರೋಧದ ಹಿನ್ನೆಲೆಯಲ್ಲಿ ರದ್ದಾಗಿತ್ತು ಎಂಬುದನ್ನು ಸಮಿತಿ ನೆನಪಿಸಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶದ ಅಖಂಡತೆ ಮತ್ತು ಧರ್ಮವನ್ನು ಅವಮಾನಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಕಾನೂನಿನ ಮಿತಿ ಮೀರಿ ವರ್ತಿಸುವ ಇಂತಹ ವ್ಯಕ್ತಿಗಳಿಗೆ ಸಾರ್ವಜನಿಕ ವೇದಿಕೆ ನೀಡುವುದು ಅಪಾಯಕಾರಿ. ಪೊಲೀಸರು ಕೂಡಲೇ ಕಾರ್ಯಕ್ರಮದ ಅನುಮತಿಯನ್ನು ಮರುಪರಿಶೀಲಿಸಬೇಕು ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಎಚ್ಚರಿಸಿದೆ.
ಒಂದು ವೇಳೆ ಕಾರ್ಯಕ್ರಮದಲ್ಲಿ ಯಾವುದೇ ಧರ್ಮ, ದೇವತೆ ಅಥವಾ ರಾಷ್ಟ್ರೀಯ ಚಿಹ್ನೆಗಳಿಗೆ ಅವಮಾನವಾದರೆ ಅದರ ಸಂಪೂರ್ಣ ಜವಾಬ್ದಾರಿಯನ್ನು ಆಯೋಜಕರು ಮತ್ತು ಸಂಬಂಧಪಟ್ಟ ಇಲಾಖೆಗಳೇ ಹೊರಬೇಕಾಗುತ್ತದೆ ಸಮಿತಿ ಒತ್ತಾಯಿಸಿದೆ.

Hot this week

ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಹಾತ್ಮ ಗಾಂಧೀಜಿಯವರು(Mahatma Gandhiji) ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು...

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

Topics

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು...

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Related Articles