ಬೆಂಗಳೂರು: 2026ನೇ ಸಾಲಿನ ಪದ್ಮ ಪ್ರಶಸ್ತಿ (Padma Award) ಪುರಸ್ಕೃತರನ್ನು ಗೌರವಾನ್ವಿತ ರಾಜ್ಯಪಾಲ (Governor) ಥಾವರ್ ಚಂದ್ ಗೆಹ್ಲೋಟ್(Tawar Chand Gehlot)ಅವರು ಲೋಕಭವನದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ವೈದ್ಯಕೀಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗೆ ಭಾಜನರಾಗಿರುವ ಗಣ್ಯರನ್ನು ಅಭಿನಂದಿಸಿದ ರಾಜ್ಯಪಾಲರು, ವಿವಿಧ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಅಪಾರ ಸೇವೆ ಮತ್ತು ಸಾಧನೆಗಳು ಸಮಾಜಕ್ಕೆ ಹಾಗೂ ಮುಂದಿನ ಪೀಳಿಗೆಗೆ ಸದಾ ಪ್ರೇರಣೆಯಾಗಿವೆ ಎಂದು ಹೇಳಿದರು.
2026ನೇ ಸಾಲಿನಲ್ಲಿ ಕರ್ನಾಟಕದಿಂದ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತರಾದ ಶತಾವಧಾನಿ ಡಾ.ಆರ್.ಗಣೇಶ್ ಹಾಗೂ ಪದ್ಮಶ್ರೀ ಪುರಸ್ಕೃತರುಗಳಾದ ಶ್ರೀ ಅಂಕೇಗೌಡ ಎಂ., ಡಾ. ಎಸ್.ಜಿ. ಸುಶೀಲಮ್ಮ, ಡಾ. ಪ್ರಭಾಕರ್ ಕೋರೆ, ಶ್ರೀ ಶಶಿ ಶೇಖರ್ ವೆಂಪತಿ, ಡಾ. ಶುಭಾ ವೆಂಕಟೇಶ ಅಯ್ಯಂಗಾರ್, ಡಾ. ಸುರೇಶ್
ಹನಗವಾಡಿ ಹಾಗೂ ದಿವಂಗತ ಶ್ರೀ ಟಿ.ಟಿ. ಜಗನ್ನಾಥನ್ ಅವರ ಪರವಾಗಿ ಪತ್ನಿ ಲತಾ ಜಗನ್ನಾಥ್ ಅವರುಗಳನ್ನು ಗೌರವಾನ್ವಿತ ರಾಜ್ಯಪಾಲರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಜಿ.ಎಸ್. ಪಾಟೀಲ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಸಲೀಂ ಅಹಮದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮೈಸೂರು ಮೃಗಾಲಯದ “ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ”: ಕು.ವೈಶಾಲಿ ವಿನಯ್ ಕುಲಕರ್ಣಿ

