ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆಯು ಆಯೋಜಿಸಿರುವ “ಕಲಾ ಸಂಗಮ”(Kala Sangama) ಕಾರ್ಯಕ್ರಮದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು 2026ನೇ ಸೆಪ್ಟೆಂಬರ್ 25 ರಿಂದ 27ರವರೆಗೆ “ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026”ನ್ನು(Kala Sangama Kannada Book Fair – 2026) ರವೀಂದ್ರ ಕಲಾಕ್ಷೇತ್ರ ಆವರಣ, ಜೆ.ಸಿ. ರಸ್ತೆ, ಬೆಂಗಳೂರು ಇಲ್ಲಿ ಹಮ್ಮಿಕೊಂಡಿದೆ.
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000-00ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಸಲ್ಲಿಸುವುದು.
ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಕಚೇರಿ ಅಥವಾ ಪ್ರಾಧಿಕಾರದ ವೆಬ್ ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:22.09.2026ರಂದು ಸಂಜೆ 5.00ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಇವರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಸಲ್ಲಿಸುವುದು. ಸೀಮಿತ ಮಳಿಗೆಗಳು ಲಭ್ಯವಿರುವುದರಿಂದ ಮೊದಲು ಪ್ರಾಧಿಕಾರದಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂರವಾಣಿ ಸಂಖ್ಯೆ 080-22484516 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
