20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ ಕ್ವಿಜ್ ಹಾಗು ಲಕಿ ಡಿಪ್ (Quiz – Lucky Dip_ ನಲ್ಲಿ ವಿಜೇತರಾದ 20 ಮಂದಿಗೆ ನೀಡಿದ್ದ ಭರವಸೆಯಂತೆ ಪವಿತ್ರ ಕಾಶಿ–ಪ್ರಯಾಗಕ್ಕೆ (Kashi Tour) ಉಚಿತ ವಿಮಾನಯಾತ್ರೆ (Flights) ಕಲ್ಪಿಸಲಾಗಿದ್ದು, ವಿಜೇತ 20 ಮಂದಿಗೆ ವಿಮಾನ ಟಿಕೆಟ್‌ಗಳನ್ನು ವಿತರಿಸಿ, ಪವಿತ್ರ ಯಾತ್ರೆಗೆ ಶುಭ ಹಾರೈಸಿ ಬೀಳ್ಕೊಡಲಾಯಿತು. ಇದೇ ವರ್ಷದ ಫೆಬ್ರವರಿ 15ರಂದು ವಿಜಯನಗರದಲ್ಲಿ ಅಹೋರಾತ್ರಿ ನಡೆದ ಅದ್ಧೂರಿ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ವಿಜಯನಗರ ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳ ಸಾರ್ವಜನಿಕರಿಗಾಗಿ ವಿಶೇಷ ರಸಪ್ರೆಶ್ನೆ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಾದ 20 ಮಂದಿಗೆ ಕಾಶಿ–ಪ್ರಯಾಗ್‌ ನಂತಹ ಪವಿತ್ರ ಕ್ಷೇತ್ರಗಳಿಗೆ ಉಚಿತ ವಿಮಾನಯಾತ್ರೆ ಕಲ್ಪಿಸುವುದಾಗಿ ಭರವಸೆ ನೀಡಲಾಗಿತ್ತು. 
 
 ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅವರು ಇಂದು 20 ಮಂದಿ ರಸಪ್ರಶ್ನೆ ವಿಜೇತರಿಗೆ ವಿಮಾನ ಟಿಕೆಟ್‌ಗಳನ್ನು ವಿತರಿಸಿದರು. ವಿಜೇತರು ಕಾಶಿ–ಪ್ರಯಾಗಕ್ಕೆ ತೆರಳಿ ಪವಿತ್ರ ಕ್ಷೇತ್ರಗಳ ದರ್ಶನ ಪಡೆಯುವಂತೆ ಹಾರೈಸಿದರು. ವಿಶೇಷ ಯಾತ್ರೆಗೆ ವಿಜಯನಗರದ ಯುವ ನಾಯಕರಾದ ಪ್ರದೀಪ್ ಕೃಷ್ಣ ಅವರು ಸಂಪೂರ್ಣ ಮಾರ್ಗದರ್ಶನ ನೀಡುತ್ತಿದ್ದು, ಪ್ರಯಾಣದ ಆರಂಭದಿಂದ ಅಂತ್ಯದವರೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಉಚಿತವಾಗಿ ಕಲ್ಪಿಸಿದ್ದಾರೆ. ವಿಮಾನ ಟಿಕೆಟ್, ಪ್ರಯಾಣ, ವಸತಿ, ಊಟ ಸೇರಿದಂತೆ ಯಾತ್ರೆಗೆ ಸಂಬಂಧಿಸಿದ ಎಲ್ಲಾ ಖರ್ಚು, ವೆಚ್ಚವನ್ನು ಎಂ. ಕೃಷ್ಣಪ್ಪ ಅವರು ಭರಿಸುತ್ತಿದ್ದಾರೆ. ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ರಸಪ್ರಶ್ನೆ ವಿಜೇತರು ಸಂತಸ ವ್ಯಕ್ತಪಡಿಸಿ, ತಮಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ಶಾಸಕರಾದ ಎಂ. ಕೃಷ್ಣಪ್ಪ ಹಾಗೂ ಯಾತ್ರೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವ ಪ್ರದೀಪ್ ಕೃಷ್ಣ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಕೃಷ್ಣ, ನೀಲಕಂಠಪ್ಪ, ಕಲಾವಿದರಾದ ಮಿಮಿಕ್ರಿ ಗೋಪಿ, ಮಿಮಿಕ್ರಿ ದಯಾನಂದ, ಹಾಸ್ಯ ಸಾಹಿತಿ ಎಂ.ಎಸ್. ನರಸಿಂಮಮೂರ್ತಿ, ಎಂ. ಉದಯ್ ಹಾಗೂ ಪ್ರಜಾವಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಬೆಂಗಳೂರು ಜಾಣಜಾಣೆಯರ ಸಂಸ್ಥೆಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಎಂ. ಉದಯ್, “ನುಡಿದಂತೆ ನಡೆದು ಭರವಸೆಯನ್ನು ಈಡೇರಿಸಿರುವುದು ಸಂತಸದ ಸಂಗತಿ ಎಂದು ತಿಳಿಸಿದರು. ‎

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

Topics

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆಯು ಆಯೋಜಿಸಿರುವ “ಕಲಾ ಸಂಗಮ”(Kala Sangama)...

Related Articles