ತಂದೆ ಮಕ್ಕಳ ಬಿಜೆಪಿ ಪಕ್ಷಕ್ಕೆ ರಾಜೀನಾಮೆ: ಅಲ್ಪ ಸಂಖ್ಯಾತರು, ಒಬಿಸಿಗಳಿಗೆ ಕಮಲ ಪಕ್ಷದಲ್ಲಿ ನೆಲೆ ಇಲ್ಲ – ನೆ.ಲ. ನರೇಂದ್ರಬಾಬು

*ಸೆ.13 ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ*ಬೆಂಗಳೂರು: ಬಿಜೆಪಿ(BJP) ತಂದೆ ಮಕ್ಕಳ ಪಕ್ಷವಾಗಿದ್ದು, ಇಲ್ಲಿ ಅಲ್ಪ ಸಂಖ್ಯಾತರು, ಒಬಿಸಿಗಳಿಗೆ ನೆಲ ಇಲ್ಲದ ಕಾರಣ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸೆ.13 ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌(CM D K Shiva Kumar), ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಗೆ ಸೇರ್ಪಡೆಯಾಗುವುದಾಗಿ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು(N.L.Narendra Baabu) ಘೋಷಿಸಿದ್ದಾರೆ.

ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ನೆ.ಲ.ನರೇಂದ್ರ ಬಾಬು ಬಿಜೆಪಿ ಪಕ್ಷದ ಹಿಂದುಳಿದ ವರ್ಗ ರಾಜ್ಯಾಧ್ಯಕ್ಷ ಸ್ಥಾನ ನಿರ್ವಹಿಸಿದ್ದರು. ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಪ್ರಕಟಿಸಿದರು.
ಮೌರ್ಯ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ ಸದಸ್ಯನಾಗಿ ಮೂರು ಬಾರಿ ಮತ್ತು ಎರಡು ಬಾರಿ ಶಾಸಕನಾಗಿ ಕಳೆದ 40 ವರ್ಷಗಳಿಂದ ಸಾರ್ವಜನಿಕರ ಬೆಂಬಲದಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಳೆದ 10ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ನನ್ನನ್ನು ಸಮರ್ಪಿಸಿಕೊಂಡೆ. ಅದರೆ ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಕಾರ್ಯಕರ್ತರನ್ನು ನನ್ನಿಂದ ದೂರಮಾಡಿದರು ಮತ್ತು ನನ್ನ ವಿರುದ್ದ ಪಿತೂರಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಿಲ್ಲ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಸುರೇಶ್ ಕುಮಾರ್, ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಗೋಪಾಲಯ್ಯ ಪರ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ನನ್ನನ್ನು ನಿರ್ಲಿಸಿದ್ಧಾರೆ ಎಂದು ಆರೋಪಿಸಿದರು.

ಬಿಜೆಪಿ ತಂದೆ ಮಕ್ಕಳ ಪಕ್ಷವಾಗಿದೆ. ಗೋಪಾಲಯ್ಯ ಸೇರಿದಂತೆ 17 ಮಂದಿ ಶಾಸಕರು ಬಿಜೆಪಿ ಸೇರಿದಾಗ ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಉಪ ಚುನಾವಣೆಯಲ್ಲಿ ನೀವು ಸಹಕಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹಾಗೂ ಆರ್.ಎಸ್.ಎಸ್‌ ಮುಖಂಡ ಬಿ.ಎಲ್.‌ ಸಂತೋಷ್‌ ತಮ್ಮನ್ನು ಮನವೊಲಿಸಿದರು. ಪಕ್ಷಕ್ಕಾಗಿ ತ್ಯಾಗ ಮಾಡಿದ ತಮಗೆ ನಂತರ ಜವಾಬ್ದಾರಿ ನೀಡುವ ವಿಚಾರದಲ್ಲಿ ಬಿಜೆಪಿ ನಾಯಕರು ಜಾಣ ಕುರುಡು, ಜಾಣ ಮೌನ ವಹಿಸಿದ್ದಾರೆ. ಸರ್ಕಾರ ಬಂದ ಮೇಲೆ ನಮ್ಮ ಕಡೆ ನೋಡಲಿಲ್ಲ. ಕೆಲಸ ಮಾಡುವವರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆಯಿಲ್ಲ. ಹಿಂಬಾಲಕರಿಗೆ ಮಾತ್ರ ಅವಕಾಶ ಎಂದು ಕಿಡಿಕಾರಿದರು.ಕೋವೀಡ್‌ ಸಮಯ ಸೇರಿ ಒಟ್ಟು ನಾಲ್ಕು ಬಾರಿ ಬಿಜೆಪಿ ಸಂಘಟಿಸಲು ರಾಜ್ಯಪ್ರವಾಸ ಮಾಡಿದೆ. ನನ್ನನ್ನು ಪಕ್ಷ ಚನ್ನಾಗಿ ಬಳಸಿಕೊಂಡಿತು. ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನಲ್ಲಿ ನಾನು ಮತ್ತು ನನ್ನ ಕಾರ್ಯಕರ್ತರ ಶ್ರಮವಿದೆ. ನಿಗಮ, ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ಅವಕಾಶ ಕೊಡಿ ಎಂಬ ಮನವಿಗೆ ಕಿವಿಗೊಡಲಿಲ್ಲ. ಕಾಂಗ್ರೆಸ್ ಪಕ್ಷ ನನಗೆ ಹೆಚ್ಚಿನ ಅವಕಾಶ ನೀಡಿತ್ತು. ಆದರೂ ಬಿಜೆಪಿ ಸೇರಿದೆ. ಇದೀಗ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಉತ್ತಮ ಸರ್ಕಾರವಿದ್ದು, ಬಿ.ಕೆ.ಹರಿಪ್ರಸಾದ್ ಸಾರಥ್ಯದಲ್ಲಿ ಪಕ್ಷ ಸಂಘಟನೆ ರಾಜ್ಯಾದ್ಯಂತ ಬಿರುಸಿನಿಂದ ಸಾಗುತ್ತಿದೆ. ಆದರೆ ಬಿಜೆಪಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತೀರ್ಮಾನವೇ ಅಂತಿಮವಾಗಿದೆ. ನಿಷ್ಟಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ರಾಜ್ಯದ ಸಮಸ್ಯೆಗಳಿಗೆ ಬಿಜೆಪಿ ಸಂಸದರು ಸ್ಪಂದಿಸುವುದಿಲ್ಲ. ಹೀಗಾಗಿ ನನ್ನ ಮತ್ತು ಜೊತೆಯಲ್ಲಿ ಇರುವ ಸ್ನೇಹಿತರು, ಕಾರ್ಯಕರ್ತರ ಜೊತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.

15 ವಾರಗಳ ಜೂ ಕ್ಲಬ್ ಆಯೋಜನೆ

Hot this week

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ: ಆರ್. ಅಶೋಕ್ ವ್ಯಂಗ್ಯ

ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ ಡಿಕೆಶಿ, ಯೂ ಟರ್ನ್ ಸರ್ಕಾರ ಬೆಂಗಳೂರು: ಆಧುನಿಕ...

ಪರವಾನಗಿ ಇಲ್ಲದ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 01 ರೊಳಗೆ ಸರ್ಕಾರಕ್ಕೆ ಒಪ್ಪಿಸಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಜನತೆ ಪರವಾನಗಿ ಇಲ್ಲದೆ ತಮ್ಮಲ್ಲಿ ಅಕ್ರಮವಾಗಿಟ್ಟುಕೊಂಡಿರುವ ಬಂದೂಕು ಶಸ್ತ್ರಾಸ್ತ್ರಗಳನ್ನು(Firearms...

ಯಕ್ಷಗಾನ ಪರಂಪರೆಯ ಸಂರಕ್ಷಣೆಗೆ ಡಿಜಿಟಲ್‌ ಆರ್ಕೈವ್ಸ್‌ ಸ್ಥಾಪಿಸಿ: ಬಿಳಿಮಲೆ ಒತ್ತಾಯ

ಕರಾವಳಿ (Karavali) ಕರ್ನಾಟಕದ ಸಾಂಸ್ಕೃತಿಕ (Cultural) ಅಸ್ಮಿತೆಯ ಪತ್ರೀಕವಾಗಿರುವ ಯಕ್ಷಗಾನ (Yakshagana)...

Topics

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ: ಆರ್. ಅಶೋಕ್ ವ್ಯಂಗ್ಯ

ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ ಡಿಕೆಶಿ, ಯೂ ಟರ್ನ್ ಸರ್ಕಾರ ಬೆಂಗಳೂರು: ಆಧುನಿಕ...

ಪರವಾನಗಿ ಇಲ್ಲದ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 01 ರೊಳಗೆ ಸರ್ಕಾರಕ್ಕೆ ಒಪ್ಪಿಸಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಜನತೆ ಪರವಾನಗಿ ಇಲ್ಲದೆ ತಮ್ಮಲ್ಲಿ ಅಕ್ರಮವಾಗಿಟ್ಟುಕೊಂಡಿರುವ ಬಂದೂಕು ಶಸ್ತ್ರಾಸ್ತ್ರಗಳನ್ನು(Firearms...

ಯಕ್ಷಗಾನ ಪರಂಪರೆಯ ಸಂರಕ್ಷಣೆಗೆ ಡಿಜಿಟಲ್‌ ಆರ್ಕೈವ್ಸ್‌ ಸ್ಥಾಪಿಸಿ: ಬಿಳಿಮಲೆ ಒತ್ತಾಯ

ಕರಾವಳಿ (Karavali) ಕರ್ನಾಟಕದ ಸಾಂಸ್ಕೃತಿಕ (Cultural) ಅಸ್ಮಿತೆಯ ಪತ್ರೀಕವಾಗಿರುವ ಯಕ್ಷಗಾನ (Yakshagana)...

ಹಿರಿಯ ನಾಗರಿಕರು, ವಿಕಲಚೇತನರು, ಅನಿವಾಸಿ ಮತದಾರರ ನೋಟೀಸ್ ವಿಲೇವಾರಿಗೆ ಅವಕಾಶ: ಚುನಾವಣಾ ಆಯೋಗ

ಬೆಂಗಳೂರು: ಹಿರಿಯ ನಾಗರಿಕರು, ವಿಕಲಚೇತನರು (PWD), ಅನಾರೋಗ್ಯ ಪೀಡಿತರು ಹಾಗೂ ಅನಿವಾಸಿ...

ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’

ಬೆಂಗಳೂರು: ಕರ್ನಾಟಕ ಸರ್ಕಾರದ(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ...

15 ವಾರಗಳ ಜೂ ಕ್ಲಬ್ ಆಯೋಜನೆ

ಬೆಂಗಳೂರು: ಬನ್ನೇರುಘಟ್ಟ(Bannerghatta) ಜೈವಿಕ ಉದ್ಯಾನವನದಲ್ಲಿ ಪ್ರಕೃತಿ, ವನ್ಯಜೀವಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು...

Related Articles