ಬೆಂಗಳೂರು: ಕರ್ನಾಟಕ ಸರ್ಕಾರದ(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ(Bankvet Hall) 2026 ನೇ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ.
ಈ ಮಹತ್ವದ ಕಾರ್ಯಕ್ರಮವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದು ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳಾದ ಶ್ರೀ ಸಲೀಂ ಅಹ್ಮದ್ ಮತ್ತು ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಶ್ರೀ ಜಿ.ಎಸ್. ಪಾಟೀಲ್ ಅವರ ಘನ ಉಪಸ್ಥಿತಿಯಲ್ಲಿ ಮಾನ್ಯ ಆಹಾರ ಹಾಗೂ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ.ಹೆಚ್.ಮುನಿಯಪ್ಪ ಅವರು ಉಪಸ್ಥಿತರಿರುವರು.
ಈ ಕಾರ್ಯಕ್ರಮದಲ್ಲಿ ಸಚಿವ ಸಂಪುಟದ ಎಲ್ಲಾ, ಮಾನ್ಯ ಸಚಿವರು, ಮಾನ್ಯ ಶಾಸಕರು, ರಾಜ್ಯದ ಎಲ್ಲಾ ಮಾನ್ಯ ಸಂಸದರು, ವಿಧಾನಪರಿಷತ್ ಸದಸ್ಯರು, ಹಾಗೂ ಎಲ್ಲಾ ಆಯೋಗ, ನಿಗಮ, ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರು, ವಿಧಾನಸಭೆಯ ಮತ್ತು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಮೋಹನ್ ರಾಜ್ ಕೆ.ಪಿ., ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಪಿ. ಹರಿಶೇಖರನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ. ರಾಕೇಶ್ ಕುಮಾರ್ ಅವರು ಉಪಸ್ಥಿತರಿರುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
