ಪರವಾನಗಿ ಇಲ್ಲದ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 01 ರೊಳಗೆ ಸರ್ಕಾರಕ್ಕೆ ಒಪ್ಪಿಸಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಜನತೆ ಪರವಾನಗಿ ಇಲ್ಲದೆ ತಮ್ಮಲ್ಲಿ ಅಕ್ರಮವಾಗಿಟ್ಟುಕೊಂಡಿರುವ ಬಂದೂಕು ಶಸ್ತ್ರಾಸ್ತ್ರಗಳನ್ನು(Firearms and weapons) ನವೆಂಬರ್ 01 ರೊಳಗೆ ಸರ್ಕಾರಕ್ಕೆ ಒಪ್ಪಿಸಲು ಅವಕಾಶ ನೀಡಿದೆ. ನವೆಂಬರ್ 01ರವರೆಗೆ ಬಂದೂಕುಗಳನ್ನು ಒಪ್ಪಿಸದಿದ್ದರೆ ಮನೆಮನೆ ಶೋಧ ಮಾಡಿ ವಶಪಡಿಸಿಕೊಂಡು ಕಠಿಣ ಕಾನೂನು(Strict Law) ಕ್ರಮ ಕೈಗೊಳ್ಳಲಾಗುವುದು. ತಾವಾಗಿಯೇ ಒಪ್ಪಿಸಿದರೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(CM D K Shivakumar) ಅವರು ತಿಳಿಸಿದರು.

ಇಂದು ಅರಣ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ 2026 ಕಾರ್ಯಕ್ರಮದಲ್ಲಿ ಭಾಗವಹಿಸಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸಿ  ಮಾತನಾಡಿದ ಅವರು, ಈ ಹಿಂದೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ ರಾಮಮೂರ್ತಿ ಅವರು ಅನೇಕರು ಅಕ್ರಮ ನಾಡ ಬಂದೂಕುಗಳನ್ನು ಹೊಂದಿರುವ ಬಗ್ಗೆ  ನನಗೆ ತಿಳಿಸಿದ್ದರು. ಆಗ ನಾನು ನನ್ನ ಕ್ಷೇತ್ರದಲ್ಲಿ 300 ಕ್ಕೂ ಹೆಚ್ಚು ಬಂದೂಕುಗಳನ್ನು ಜನರಿಂದ ಸರ್ಕಾರಕ್ಕೆ ಒಪ್ಪಿಸಿದ್ದೆ ಎಂದರು.

ರಾಜ್ಯದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಮಾಡಿದ ತ್ಯಾಗ ಮತ್ತು ಬಲಿದಾನವನ್ನು ನಾವೆಂದಿಗೂ ಮರೆಯುವುದಿಲ್ಲ. ಇಂದು ಮಾನವ ವನ್ಯಜೀವಿ ಸಂಘರ್ಷ ತೀವ್ರವಾಗಿದ್ದು, ಮನುಷ್ಯನ ಉಳಿವಿನೊಂದಿಗೆ ವನ್ಯಜೀವಿ ರಕ್ಷಣೆಯು ನಮ್ಮೆಲ್ಲರ ಕರ್ತವ್ಯವಾಗಿದೆ. ಇಂತಹ ಕರ್ತವ್ಯ ಸಾಧನೆಯ ಹಾದಿಯಲ್ಲಿ ಅನೇಕ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯ ಸಿಬ್ಬಂಧಿಗಳ ತ್ಯಾಗ ಮತ್ತು ಭದ್ರತೆಯಿಂದ ಕರ್ತವ್ಯ ನಿರ್ವಹಿಸಿ ಈ ಸಂಪತ್ತನ್ನು ರಕ್ಷಿಸಲು ಸದಾ ಸಿದ್ದರಿದ್ದು, ಅದಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ.

ನಮ್ಮ ರಾಜ್ಯದಲ್ಲಿ ಅರಣ್ಯ ಸಂಪತ್ತಿನ ರಕ್ಷಣೆ ಮಾಡುವಾಗ ಕಳ್ಳಕಾಕರ, ವನ್ಯಪ್ರಾಣಿಗಳ ಹಾಗೂ ಇತರೆ ದುಷ್ಟ ಶಕ್ತಿಗಳ ದಾಳಿಗೆ ಸಿಲುಕಿ ಈವರೆಗೆ 65 ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಇದರಲ್ಲಿ ಅಕ್ರಮ ಬಂದೂಕುಗಳಿಂದಲೂ ಸಹ ಮರಣ ಹೊಂದಿರುವುದು ನಿಮಗೆ ತಿಳಿದಿದೆ ಎಂದರು.

“ತೇಗದ ಸಿರಿ” ಯೋಜನೆ ಯಶಸ್ಸಿಗೆ ಎಲ್ಲಾ ಅರಣ್ಯ ಅಧಿಕಾರಿಗಳು ಶ್ರಮಿಸಬೇಕು. ಇದರಿಂದ ರೈತರಿಗೂ  ಲಾಭವಾಗುತ್ತದೆ.  ಅರಣ್ಯ ಇಲಾಖೆಯ ಆದಾಯವನ್ನು ಹೆಚ್ಚಿಸುವ ಕಡೆ ಗಮನ ನೀಡಬೇಕು.  ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅರಣ್ಯ ಅಂಚಿನ ಜನರೊಂದಿಗೆ ಸ್ನೇಹಿತರಂತೆ ಇರಬೇಕು. ಅರಣ್ಯ ಒತ್ತುವರಿ ಪ್ರಕರಣಗಳನ್ನು ಕಾನೂನು ಪ್ರಕಾರ ಬಗೆಹರಿಸೋಣ. ಅವರ ಮೇಲೆ ಒತ್ತಡ ಹೇರಬೇಡಿ ಎಂದರು.

ಅರಣ್ಯ ಸಚಿವರು ಸಿಬ್ಬಂದಿಯ ಭತ್ಯೆಯ ವಿಚಾರವಾಗಿ ಮನವಿ ಮಾಡಿದ್ದು, ಭತ್ಯೆಯ ವಿಚಾರವಾಗಿ ಆರ್ಥಿಕ ಇಲಾಖೆಯ ಬಳಿ ಚರ್ಚೆ ನಡೆಸಿ ಪೊಲೀಸ್ ಇಲಾಖೆಯನ್ನೊಳಗೊಂಡಂತೆ ಅತಿ ಶೀಘ್ರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ಅರಣ್ಯ ಮತ್ತು ವನ್ಯಜೀವಿಗಳು ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಸಮರ್ಪಣೆ ಮಾಡಿದ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತ್ಯಾಗ ಮತ್ತು ಬಲಿದಾನ ಸ್ಮರಣೆಗಾಗಿ ಪ್ರತೀ ವರ್ಷ ಸೆಪ್ಟೆಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದರು.

ನಮ್ಮ ರಾಜ್ಯವು ಸಮೃದ್ಧ ಅರಣ್ಯ ಹಾಗೂ ವನ್ಯಜೀವಿ ಸಂಪತ್ತು ಹೊಂದಿರುವ ರಾಜ್ಯವಾಗಿದ್ದು, ಕರ್ನಾಟಕ ಅರಣ್ಯ ಇಲಾಖೆಯು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ತನ್ನದೇ ಆದ ಸುದೀರ್ಘ ಅಗಾಧ ಇತಿಹಾಸವನ್ನು ಹೊಂದಿದೆ. ನಮ್ಮ ರಾಜ್ಯದಲ್ಲಿ ಪ್ರಮುಖ ವನ್ಯಪ್ರಾಣಿಗಳಾದ ಆನೆ, ಹುಲಿ ಹಾಗೂ ಚಿರತೆಗಳ ಸಂಖ್ಯೆ ಹೆಚ್ಚಳವಾಗಿದ್ದು, ಆನೆಗಳ ಸಂಖ್ಯೆಯಲ್ಲಿ ನಮ್ಮ ರಾಜ್ಯವು ಮೊದಲನೇ ಸ್ಥಾನದಲ್ಲಿದ್ದು, ಹುಲಿಗಳ ಸಂಖ್ಯೆಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಒಟ್ಟು 05 ರಾಷ್ಟ್ರೀಯ ಉದ್ಯಾನವನಗಳು, 38 ವನ್ಯಜೀವಿ ಅಭಯಾರಣ್ಯಗಳು, 19 ಸಂರಕ್ಷಿತ ಪ್ರದೇಶಗಳು, 01 ಸಮುದಾಯ ಅರಣ್ಯ ಪ್ರದೇಶ ಇರುತ್ತದೆ.  ಇದರಲ್ಲಿ 05 ಹುಲಿ ಸಂರಕ್ಷಿತ ಪ್ರದೇಶ ಮತ್ತು 02 ಆನೆ ಸಂರಕ್ಷಿತ ಪ್ರದೇಶ ಒಳಗೊಂಡಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಫರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು) ಡಾ.ಮೀನಾಕ್ಷಿ ನೇಗಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಕೆಎಸ್‌ಆರ್‌ಟಿಸಿ ಡಿಜಿಟಲ್ ಕ್ರಾಂತಿ : ‘ಒಂದು ಕರ್ನಾಟಕ ಮೊಬಿಲಿಟಿ ಆಪ್’ ಲೋಕಾರ್ಪಣೆ ಇನ್ಮುಂದೆ ವಾಟ್ಸಾಪ್‌ನಲ್ಲೇ ಬಸ್ ಟಿಕೆಟ್ ಬುಕ್ಕಿಂಗ್!

Hot this week

ಜಾರಕಿಹೋಳಿ ಮೇಲಿನ ಇಡಿ ದಾಳಿ ಖಂಡನೀಯ : ಕೆಹೆಚ್. ಮುನಿಯಪ್ಪ

ಬೆಂಗಳೂರು: ಸತೀಶ್ ಜಾರಕಿಹೋಳಿ(Satish Jaarakiholi) ಅವರ ಮೇಲಿನ ಇಡಿ ದಾಳಿ ಅತ್ಯಂತ...

ಹಗರಣಗಳ ಸರಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಒಂದು ಸಿನಿಮಾ ನೂರು ದಿನ ಪೂರೈಸಿದರೆ ಬಾಕ್ಸ್ ಆಫೀಸ್ ಕಲೆಕ್ಷನ್(Box...

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ: ಆರ್. ಅಶೋಕ್ ವ್ಯಂಗ್ಯ

ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ ಡಿಕೆಶಿ, ಯೂ ಟರ್ನ್ ಸರ್ಕಾರ ಬೆಂಗಳೂರು: ಆಧುನಿಕ...

ಯಕ್ಷಗಾನ ಪರಂಪರೆಯ ಸಂರಕ್ಷಣೆಗೆ ಡಿಜಿಟಲ್‌ ಆರ್ಕೈವ್ಸ್‌ ಸ್ಥಾಪಿಸಿ: ಬಿಳಿಮಲೆ ಒತ್ತಾಯ

ಕರಾವಳಿ (Karavali) ಕರ್ನಾಟಕದ ಸಾಂಸ್ಕೃತಿಕ (Cultural) ಅಸ್ಮಿತೆಯ ಪತ್ರೀಕವಾಗಿರುವ ಯಕ್ಷಗಾನ (Yakshagana)...

Topics

ಜಾರಕಿಹೋಳಿ ಮೇಲಿನ ಇಡಿ ದಾಳಿ ಖಂಡನೀಯ : ಕೆಹೆಚ್. ಮುನಿಯಪ್ಪ

ಬೆಂಗಳೂರು: ಸತೀಶ್ ಜಾರಕಿಹೋಳಿ(Satish Jaarakiholi) ಅವರ ಮೇಲಿನ ಇಡಿ ದಾಳಿ ಅತ್ಯಂತ...

ಹಗರಣಗಳ ಸರಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಒಂದು ಸಿನಿಮಾ ನೂರು ದಿನ ಪೂರೈಸಿದರೆ ಬಾಕ್ಸ್ ಆಫೀಸ್ ಕಲೆಕ್ಷನ್(Box...

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ: ಆರ್. ಅಶೋಕ್ ವ್ಯಂಗ್ಯ

ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ ಡಿಕೆಶಿ, ಯೂ ಟರ್ನ್ ಸರ್ಕಾರ ಬೆಂಗಳೂರು: ಆಧುನಿಕ...

ಯಕ್ಷಗಾನ ಪರಂಪರೆಯ ಸಂರಕ್ಷಣೆಗೆ ಡಿಜಿಟಲ್‌ ಆರ್ಕೈವ್ಸ್‌ ಸ್ಥಾಪಿಸಿ: ಬಿಳಿಮಲೆ ಒತ್ತಾಯ

ಕರಾವಳಿ (Karavali) ಕರ್ನಾಟಕದ ಸಾಂಸ್ಕೃತಿಕ (Cultural) ಅಸ್ಮಿತೆಯ ಪತ್ರೀಕವಾಗಿರುವ ಯಕ್ಷಗಾನ (Yakshagana)...

ಹಿರಿಯ ನಾಗರಿಕರು, ವಿಕಲಚೇತನರು, ಅನಿವಾಸಿ ಮತದಾರರ ನೋಟೀಸ್ ವಿಲೇವಾರಿಗೆ ಅವಕಾಶ: ಚುನಾವಣಾ ಆಯೋಗ

ಬೆಂಗಳೂರು: ಹಿರಿಯ ನಾಗರಿಕರು, ವಿಕಲಚೇತನರು (PWD), ಅನಾರೋಗ್ಯ ಪೀಡಿತರು ಹಾಗೂ ಅನಿವಾಸಿ...

ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’

ಬೆಂಗಳೂರು: ಕರ್ನಾಟಕ ಸರ್ಕಾರದ(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ...

Related Articles