ಶ್ರೀ ಕೃಷ್ಣದೇವರಾಯ ಶಿಕ್ಷಣ ದತ್ತಿ ಸಂಸ್ಥೆಯ ಸರ್. ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಆಯೋಜಿಸಿದ್ದ 2026 ರ ಬ್ಯಾಚ್ ನ “ಆರಂಭ – 2026” ಗೆ ಚಾಲನೆ ನೀಡಿ ಮಾತನಾಡಿದ ಅವರು, ಎರಡು ದಶಕಗಳಲ್ಲಿ ಕಂಪೆನಿಗಳ ವಲಯದಲ್ಲಿ ಮಹತ್ವದ ಬದಲಾವಣೆಯಾಗಿವೆ. ಬಹುದೊಡ್ಡ ಕಂಪೆನಿಗಳು ದೇಶದಲ್ಲಿ ತಲೆ ಎತ್ತಿವೆ. ಕೃತಕ ಬುದ್ದಿಮತ್ತೆ ತಮ್ಮ ದೈನಂದಿನ ಜೀವನ, ವೃತ್ತಿ, ಶೈಕ್ಷಣಿಕ ವ್ಯವಸ್ಥೆಯ ಮೇಲೆ ಗಣನೀಯ ಪರಿವರ್ತನೆ ತರುತ್ತಿವೆ. ದೇಶದ ಯುವ ಟೆಕ್ಕಿಗಳು ಎಐ ಯುಗದಲ್ಲಿ ಮೈಕ್ರೋಸಾಫ್ಟ್, ಗೂಗಲ್ ನಂತಹ ದೈತ್ಯ ತಂತ್ರಜ್ಞಾನ ಕಂಪೆನಿಗಳನ್ನು ಸ್ಥಾಪಿಸುವ ವಿಶ್ವಾಸ ತಮ್ಮದಾಗಿದೆ. ಕಠಿಣ ಪರಿಶ್ರಮ, ಶಿಸ್ತು, ಪ್ರಾಮಾಣಿಕತೆಯ ಮೂಲಕ ಉನ್ನತ ಸ್ಥಾನಕ್ಕೇರಬೇಕು. ತಾಂತ್ರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತಿದ್ದು, ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಏನಾಗುತ್ತಿದೆ ಎಂಬ ಅರಿವು ವಿದ್ಯಾರ್ಥಿಗಳಿಗೆ ಅತ್ಯಂತ ಮುಖ್ಯ ಎಂದರು.

ಈ ಕಾರ್ಯಕ್ರಮದಲ್ಲಿ 1,100 ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಭಾಗವಹಿಸಿದ್ದರು.ಶ್ರೀ ಕೃಷ್ಣದೇವರಾಯ ಎಜುಕೇಷನಲ್ ಟ್ರಸ್ಟ್ ನ ಕಾರ್ಯದರ್ಶಿ ಸಂಜಯ್ ಕೆ. ಆರ್, ಪ್ರಾಂಶುಪಾಲರಾದ ಡಾ.ಎಂ.ಎನ್. ತಿಪ್ಪೇಸ್ವಾಮಿ, ಉಪ ಪ್ರಾಂಶುಪಾಲರಾದ ಡಾ. ಸುರೇಶ್ ಎಚ್.ಎಲ್, ಡಾ. ಭಾರತಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

