ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ – ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅಕ್ಟೋಬರ್ 13 ರವರೆಗೆ ಅವಧಿ ವಿಸ್ತರಣೆ  

ಬೆಂಗಳೂರು: ಕರ್ನಾಟಕ ರಾಜ್ಯ(Karnataka State) ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯುಜಿಸಿ ಆದೇಶದ ಮೇರೆಗೆ  2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಯುಜಿಸಿ (UGC) ಅನುಮೋದಿತ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿ ದಿನಾಂಕವನ್ನು ಅಕ್ಟೋಬರ್ 13, 2026 ರವರೆಗೆ ವಿಸ್ತರಿಸಿದೆ.
ಸ್ನಾತಕ (UG) ಕೋರ್ಸ್‌ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲೂ., ಬಿ.ಎಸ್ಸಿ, ಬಿ.ಲಿಬ್.ಐ.ಎಸ್ಸಿ ಮತ್ತು ಸ್ನಾತಕೋತ್ತರ (PG) ಕೋರ್ಸ್‌ಗಳಾದ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಸ್ಸಿ, ಎಂ.ಲಿಬ್.ಐ.ಎಸ್ಸಿ ಹಾಗೂ ಇತರ ಕೋರ್ಸ್‌ಗಳಾದ  ಪಿಜಿ ಡಿಪ್ಲೊಮಾ, ಡಿಪ್ಲೊಮಾ ಮತ್ತು ವಿವಿಧ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ಬಯಸುವ ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿದೆ.
ಕೋರ್ಸ್‌ಗಳ ಕುರಿತಾದ ಸಂಪೂರ್ಣ ವಿವರಗಳನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ (Prospectus) ನೀಡಲಾಗಿದೆ.
ಹೆಚ್ಚಿನ ವಿವರಗಳಿಗೆ, ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕರಾಮುವಿ), ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ,
ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು – 560026 ಅಥವಾ ಕಛೇರಿ ದೂರವಾಣಿ ಸಂಖ್ಯೆ: 080-26603664  ಅಥವಾ ಮೊಬೈಲ್ ಸಂಖ್ಯೆಗಳು: 98805-26439 / 90195-26439 ನ್ನು ಸಂಪರ್ಕಿಸಬಹುದು ಎಂದು  ಬೆಂಗಳೂರು ಪ್ರಾದೇಶಿಕ ಕೇಂದ್ರ-01ರ ನಿರ್ದೇಶಕರಾದ ಡಾ. ರೋಹಿತ್ ಹೆಚ್.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles