ಮಾರತ್ತಹಳ್ಳಿ ಪೊಲೀಸರ ತ್ವರಿತ ಕಾರ್ಯಾಚರಣೆ: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ರಕ್ಷಣೆ.

ದಿನಾಂಕ:13/09/2026 ರಂದು ಬೆಳಗ್ಗೆ 00:08 ಗಂಟೆಗೆ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಿಜಿಯೊಂದರಲ್ಲಿ ವಾಸವಿದ್ದ ಓರ್ವ ಯುವತಿಯು ತೀವ್ರ ಮನನೊಂದು ಮಾತ್ರೆಗಳನ್ನು ಸೇವಿಸಿದ್ದು, ಬಳಿಕ ಸ್ವತಃ ನಮ್ಮ-೧೧೨ ತುರ್ತು ಸಹಾಯವಾಣಿಗೆ ಕರೆ ಮಾಡಿ ಪೊಲೀಸರ ಸಹಾಯ ಕೋರಿರುತ್ತಾರೆ.
ಕೂಡಲೇ ಕಾರ್ಯಪ್ರವೃತ್ತರಾದ ನಮ್ಮ-112 ಸಿಬ್ಬಂದಿಯವರು ಮಾರತ್ತಹಳ್ಳಿ ಪೊಲೀಸ್ ಠಾಣೆಯ ಹೊಯ್ಸಳ-228ರಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ, ರಮೇಶ್ ಹಾಗೂ ಹೆಚ್‌ಸಿ, ಕುಮಾರ್.ಎಸ್.ಇಟ್ಟಗಿ ರವರಿಗೆ ಮಾಹಿತಿಯನ್ನು ರವಾನಿಸಿದ್ದು, ಕೇವಲ 08 ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯ ಸ್ಥಿತಿಯನ್ನು ಪರಿಶೀಲಿಸಿ, ಯಾವುದೇ ವಿಳಂಬವಿಲ್ಲದೆ ತಕ್ಷಣ ವೈದ್ಯಕೀಯ ನೆರವು ಒದಗಿಸಲು ಸ್ನೇಹಿತೆಯೊಂದಿಗೆ ಅವರನ್ನು ಹೊಯ್ಸಳ ವಾಹನದಲ್ಲಿಯೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆಯ ನಂತರ ಯುವತಿಯ ಆರೋಗ್ಯ ಸ್ಥಿತಿ ಸ್ಥಿರಗೊಂಡಿದ್ದು, ಅವರನ್ನು ಸುರಕ್ಷಿತವಾಗಿ ಪಿಜಿಗೆ ಕರೆತಂದು, ಮುಂದಿನ ಆರೈಕೆ ಮತ್ತು ಮೇಲ್ವಿಚಾರಣೆಗಾಗಿ ಪಿಜಿಯ ಕೇರ್‌ಟೇಕರ್‌ಗೆ ಒಪ್ಪಿಸಲಾಗಿದೆ.
ಈ ಘಟನೆಯು ಸಂಕಷ್ಟದ ಸಂದರ್ಭಗಳಲ್ಲಿ ನಮ್ಮ-112 ತುರ್ತು ಸಹಾಯವಾಣಿಯನ್ನು ತಕ್ಷಣ ಸಂಪರ್ಕಿಸುವ ಮಹತ್ವವನ್ನು ತೋರಿಸುತ್ತದೆ. ಹೊಯ್ಸಳ ಸಿಬ್ಬಂದಿಯವರ ತ್ವರಿತ ಸ್ಪಂದನೆ, ಸಕಾಲಿಕ ವೈದ್ಯಕೀಯ ನೆರವು ಹಾಗೂ ಸೂಕ್ತ ಆರೈಕೆಯಿಂದ ಯುವತಿಯ ಜೀವವನ್ನು ರಕ್ಷಿಸಲು ಸಹಕಾರಿಯಾಗಿದೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles