ಎರಡು ಕಡೆ ರಾಜಧನ ಸಂಗ್ರಹ ವಿರೋಧಿಸಿ ರಾಜ್ಯಾದ್ಯಂತ ಕಲ್ಲು ಕ್ವಾರಿ, ಕ್ರಷರ್ ಹಾಗೂ ಎಂ.ಸ್ಯಾಂಡ್ ಬಂದ್

 ಬೆಂಗಳೂರು: ಕಲ್ಲು ಗಣಿಗಾರಿಕೆಗೆ(Stone Quarrying) ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ರಾಜಧನ ಸಂಗ್ರಹಿಸುತ್ತಿರುವ ಕ್ರಮವನ್ನು ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು(Demand) ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ(Karnataka) ರಾಜ್ಯ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಒಕ್ಕೂಟ ಸೆಪ್ಟೆಂಬರ್‌ 18ರಿಂದ ರಾಜ್ಯಾದ್ಯಂತ ಕಲ್ಲು ಕ್ವಾರಿ, ಜಲ್ಲಿ ಕ್ರಷರ್ ಹಾಗೂ ಎಂ.ಸ್ಯಾಂಡ್ ಘಟಕಗಳನ್ನು ಬಂದ್ ಮಾಡಿ ಉಗ್ರ ಹೋರಾಟ ನಡೆಸಲು ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಡಿ. ಸಿದ್ಧರಾಜು(D.Siddaraju), ರಾಜ್ಯದಾದ್ಯಂತ ಕಲ್ಲು ಕ್ವಾರಿಗಳು, ಜಲ್ಲಿ ಕ್ರಷರ್‌ಗಳು ಹಾಗೂ ಎಂ.ಸ್ಯಾಂಡ್ ಘಟಕಗಳನ್ನು ಸ್ಥಗಿತಗೊಳಿಸುವ ಮೂಲಕ ಹೋರಾಟವನ್ನು ತೀವ್ರಗೊಳಿಸುತ್ತೇವೆ.
ನಮ್ಮ ಬೇಡಿಕೆ ಈಡೇರುವ ತನಕ ಹೋರಾಟ ನಿಲ್ಲದು. ರಾಜಧನ ಸಂಗ್ರಹ ಕುರಿತು ಸರ್ಕಾರ ಆದೇಶ ಹೊರಡಿಸಿ, ಅದನ್ನು ರಾಜ್ಯಪತ್ರದಲ್ಲಿ ಪ್ರಕಟಿಸುವವರೆಗೆ ಹೋರಾಟವನ್ನು ಹಿಂಪಡೆಯುವುದಿಲ್ಲ. ಎರಡು ಕಡೆ ರಾಜಧನ ವಸೂಲಿ ಮಾಡುವ ಕ್ರಮವನ್ನು ಕೂಡಲೇ ಕೈಬಿಡಬೇಕು. ಎಲ್ಲಾ ಜಿಲ್ಲಾ ಘಟಕಗಳು ಬಂದ್‌ ಗೆ ಬೆಂಬಲ ಸೂಚಿಸಿವೆ. ಕರ್ನಾಟಕ ಪಟ್ಟಾ ಲ್ಯಾಂಡ್‌ ಕ್ವಾರಿ ಅಂಡ್‌ ಜಲ್ಲಿ ಸ್ಟೋನ್‌ ಕ್ರಷರ್‌ ವೋನರ್ಸ್‌ ಅಸೋಷಿಯೇಷನ್‌ ಸಹ ಬಂದ್‌ ಗೆ ಬೆಂಬಲ ನೀಡಿದೆ ಎಂದು ಹೇಳಿದರು. “ನಿರ್ಮಾಣ ಕಾಮಗಾರಿಗಳಿಗೆ ಅಗತ್ಯವಾಗಿರುವ ಜಲ್ಲಿ ಮತ್ತು ಎಂ.ಸ್ಯಾಂಡ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗುವುದು. ಹೊರ ರಾಜ್ಯಗಳಿಂದ ಕಲ್ಲುಗಣಿ ಸಂಪನ್ಮೂಲ ರಾಜ್ಯಕ್ಕೆ ಬರದಂತೆ ಚೆಕ್‌ ಪೋಸ್ಟ್‌ ಗಳಲ್ಲಿ ತಡೆಯಲು ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ರಾಜಧನ ಪಾವತಿಯಾಗಿದ್ದರೂ ಮತ್ತೆ ಗಣಿಗುತ್ತಿಗೆದಾರರಿಂದ ರಾಜಧನ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಕಲ್ಲು ಗಣಿಗಾರಿಕೆ ವಲಯದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುವ ಕ್ರಮಕ್ಕೆ ನಮ್ಮ ವಿರೋಧವಿದೆ,” ಎಂದರು. ಕಾಮಗಾರಿ ನಿರ್ವಹಿಸುವ ಇಲಾಖೆಗಳಲ್ಲಿಯೂ ರಾಜಧನವನ್ನು ಪಾವತಿಸಿಕೊಳ್ಳಲಾಗುತ್ತಿದೆ. ಈವರೆಗೆ ಕಲ್ಲು ಗಣಿಗಾರಿಕೆ ವಲಯದಿಂದ ಸರ್ಕಾರಕ್ಕೆ ಸಂದಾಯವಾಗಿರುವ ಒಟ್ಟು ರಾಜಧನದ ಮೊತ್ತದ ಕುರಿತು ಶ್ವೇತಪತ್ರ ಹೊರಡಿಸಬೇಕು. ಸರ್ಕಾರದ ಧೋರಣೆಯಿಂದ ಕ್ರಷರ್‌ ಮಾಲೀಕರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದ್ದು, ಇದಕ್ಕೆ ಸರ್ಕಾರವೇ ಕಾರಣ. ಕೆ.ಎಂ.ಎಂ.ಸಿ.ಆರ್.-1994ರ ನಿಯಮಗಳಿಗೆ ಮಾಡಿರುವ ತಿದ್ದುಪಡಿಗಳು ಅಸಮರ್ಪಕವಾಗಿದ್ದು, ನಿಯಮಗಳನ್ನು ಸಮಗ್ರವಾಗಿ ಪರಿಷ್ಕರಿಸುವ ಅಗತ್ಯವಿದೆ. ಯಾವ ಪ್ರಮಾಣದಲ್ಲಿ ಕಲ್ಲು ಗಣಿ ಸಂಪತ್ತು ತೆಗೆಯಲಾಗಿದೆ ಎಂಬುದನ್ನು ನಿರ್ಧರಿಸಲು ದೂರಸಂವೇದಿ ತಂತ್ರಜ್ಞಾನದಡಿ ನಡೆಸುತ್ತಿರುವ ಸಮೀಕ್ಷೆಯ ಕ್ರಮವೂ ಅವೈಜ್ಞಾನಿಕವಾಗಿದೆ ಎಂದು ಅಭಿಪ್ರಾಯಪಟ್ಟರು.
ತಲಾತಲಾಂತರಗಳಿಂದ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿರುವ ಸಣ್ಣ ಹಾಗೂ ಸ್ಥಳೀಯ ಉದ್ಯಮಿಗಳಿಗೆ ತೊಂದರೆಯಾಗುವ ರೀತಿಯಲ್ಲಿ ನೀತಿಗಳು ರೂಪುಗೊಳ್ಳುತ್ತಿವೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿನ ಆಡಳಿತಾತ್ಮಕ ಸಮಸ್ಯೆಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ನಿರ್ಧಾರಗಳಿಂದ ಕಲ್ಲು ಗಣಿಗಾರಿಕೆ ವಲಯ ಸಂಕಷ್ಟಕ್ಕೆ ಸಿಲುಕಿದೆ. ಏಕರೂಪ ರಾಜಧನ ಸಂಗ್ರಹ ಸೇರಿದಂತೆ ಒಕ್ಕೂಟದ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಸರ್ಕಾರದ ವಿರುದ್ಧ ಕಾನೂನು ಹೋರಾಟವನ್ನೂ ನಡೆಸಲಾಗುವುದು ಎಂದು ಡಿ. ಸಿದ್ಧರಾಜು ಎಚ್ಚರಿಸಿದರು. ಸಂಘದ ಉಪಾಧ್ಯಕ್ಷರಾದ ವಾಗೀಶ್, ಅಬ್ದುಲ್ ಮಜಿದ್, ಮನೋಜ್ ಶೆಟ್ಟರ್, ಪಂಚಮಿ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಸಿ.ಎಸ್. ಭಾಸ್ಕರ್, ಉಪ ಕಾರ್ಯದರ್ಶಿ ಡಿ.ಆರ್. ಮಹೇಶ್, ಸಂಘಟನಾ ಕಾರ್ಯದರ್ಶಿ ಕೆ.ವಿ. ಚೌಧರಿ, ಕೋಶಾಧಿಕಾರಿ ಉಮಾಶಂಕರಯ್ಯ , ವಿ ಎಸ್ ಪಾಟೀಲ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles