ಕೆಎಸ್‌ಒಯು ವಿವಿಧ ಪದವಿ, ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ(Karnataka State Open University) ಬೆಂಗಳೂರು ಸುಂಕದಕಟ್ಟೆಯ(Sunkadakatte) ಪ್ರಾದೇಶಿಕ ಕೇಂದ್ರ-06ರ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ (ಜುಲೈ ಆವೃತ್ತಿ) ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ (PG) ಕೋರ್ಸ್‌ಗಳ ಪ್ರವೇಶಾತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2026 ನೇ ಅಕ್ಟೋಬರ್ 13 ಕೊನೆಯ ದಿನವಾಗಿದೆ.
 
ಪದವಿ ಕೋರ್ಸ್‌ಗಳಾದ  ಬಿ.ಎ, ಬಿ.ಕಾಂ, ಬಿ.ಎಸ್‌ಡಬ್ಲ್ಯೂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ (ಜನರಲ್ ಮತ್ತು ಐಟಿ) ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಸಿ.ಜೆ, ಎಂ.ಎಸ್‌ಡಬ್ಲ್ಯೂ, ಎಂ.ಸಿ.ಎ, ಎಂ.ಬಿ.ಎ.  ಪ್ರವೇಶಾತಿ ಲಭ್ಯವಿದೆ.
 
ಆಸಕ್ತ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ನೀಡಲಾಗಿರುವ ಪ್ರವೇಶ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
 
ಶುಲ್ಕ ರಿಯಾಯಿತಿ ಮತ್ತು ಸೌಲಭ್ಯಗಳು:
ಬೋಧನಾ ಶುಲ್ಕದಲ್ಲಿ ಶೇ. 10ರಷ್ಟು ರಿಯಾಯಿತಿ: ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಸೈನಿಕರು, ಮಾಜಿ ಸೈನಿಕರು, ಆಟೋ/ಕ್ಯಾಬ್ ಚಾಲಕರ ಮಕ್ಕಳಿಗೆ ಹಾಗೂ ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಈ ರಿಯಾಯಿತಿ ದೊರೆಯಲಿದೆ.
 
ಪೂರ್ಣ ಶುಲ್ಕ ವಿನಾಯಿತಿ: ಕೋವಿಡ್‌ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ, ತೃತೀಯ ಲಿಂಗದ ವಿದ್ಯಾರ್ಥಿಗಳಿಗೆ ಹಾಗೂ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶುಲ್ಕ ವಿನಾಯಿತಿ ಇರಲಿದೆ.
 
ವಿದ್ಯಾರ್ಥಿವೇತನ: ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿ ಎಸ್‌ಎಸ್‌ಪಿ (SSP) ಪೋರ್ಟಲ್ ಮೂಲಕ ವಿದ್ಯಾರ್ಥಿವೇತನ ಪಡೆದುಕೊಳ್ಳಬಹುದು.
 
ಹೆಚ್ಚಿನ ಮಾಹಿತಿಗಾಗಿ, ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-06, ನಂ. 4 ಮತ್ತು 5, 1ನೇ ಮಹಡಿ, ಶ್ರೀ ಲಕ್ಷ್ಮಿ ಕಾಲೇಜ್ ಆಫ್ ಸೈನ್ಸ್ & ಮ್ಯಾನೇಜ್‌ಮೆಂಟ್ ಆವರಣ,
ಶ್ರೀಗಂಧಕಾವಲ್, ಮಾಗಡಿ ಮುಖ್ಯ ರಸ್ತೆ, ಸುಂಕದಕಟ್ಟೆ, ಬೆಂಗಳೂರು – 560091 ಅಥವಾ‌ ದೂರವಾಣಿ ಸಂಖ್ಯೆ 9632332265, 9741197921, 9380554929 ಅಥವಾ
ಇ-ಮೇಲ್ ವಿಳಾಸ rdbengaluru06.ksou@gmail.com ನ್ನು‌ ಸಂಪರ್ಕಿಸಬಹುದು ಎಂದು  ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಶಶಿಕಲಾ.ಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles