ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಕಲಾ ಸಂಗಮ’ ಕಾರ್ಯಕ್ರಮದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಆಯೋಜಿಸಿದ್ದ “ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026″(Kala Sangama Kannada Book Fair – 2026) ಅನ್ನು ಅನಿವಾರ್ಯ ಆಡಳಿತಾತ್ಮಕ ಕಾರಣಗಳಿಂದಾಗಿ ಮುಂದೂಡಲಾಗಿದೆ.
ಈ ಪುಸ್ತಕ ಮೇಳವು ದಿನಾಂಕ: 25.09.2026 ರಿಂದ 27.09.2026 ರವರೆಗೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಡೆಯಬೇಕಿತ್ತು. ಆದರೆ, ಇಲಾಖೆಯ ಸೂಚನೆಯ ಮೇರೆಗೆ ಈ ಮೇಳವನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
