ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ(Scheduled Tribes) ಸಮುದಾಯದವರ ಅಭಿವೃದ್ಧಿಗಾಗಿ(Development) ಜಾರಿಗೆ ತರಲಾಗಿರುವ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಸಮುದಾಯದ ಸುರಕ್ಷತೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು, ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಸಮ್ಮುಖದಲ್ಲಿ 2026 ನೇ ಸೆಪ್ಟೆಂಬರ್ 24 ರಂದು ಪ್ರಗತಿ ಪರಿಶೀಲನೆ ಸಭೆ ನಡೆಸಲಿದೆ.
ನಂತರ ಅಂದೇ ಮಧ್ಯಾಹ್ನ 1.00 ಗಂಟೆಗೆ ಬೆಂಗಳೂರಿನ ಪ್ಯಾಲೇಸ್ ರಸ್ತೆಯಲ್ಲಿರುವ ‘ರಾಡಿಸನ್ ಬ್ಲೂ ಹೋಟೆಲ್’ನ ಚಾನ್ಸರಿ -1 (Radisson Blu Hotel) ‘Chancery-1’ ಸಭಾಂಗಣದಲ್ಲಿ ಮಾನ್ಯ ಅಧ್ಯಕ್ಷರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಕನಗವಲ್ಲಿ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
