ಸ್ಪರ್ಧಾರ್ಥಿಗಳು ಅಧಿಕಾರಿಯಾಗುವ ಮೊದಲು ಕುವೆಂಪು ಸಾಹಿತ್ಯವನ್ನು ಕಡ್ಡಾಯವಾಗಿ ಓದಬೇಕು: ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ 

ಬೆಂಗಳೂರು: ಸ್ಪರ್ಧಾರ್ಥಿಗಳು ಸರ್ಕಾರಿ ಕೆಲಸಕ್ಕೆ ಸೇರಿ ಅಧಿಕಾರಿ ಆಗುವ ಮೊದಲು ರಾಷ್ಟ್ರಕವಿ ಕುವೆಂಪು(Kuvempu) ಅವರ ಸಾಹಿತ್ಯವನ್ನು ಕಡ್ಡಾಯವಾಗಿ ಓದಬೇಕು ಎಂದು ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್(Ravi D.Channannanavar) ಅವರು ಹೇಳಿದರು.  
 
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕೆಪಿಎಸ್ಸಿ (KPSC) ಮತ್ತು ಕೆಇಎ (KEA) ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದ‌ ಅವರು  ಕುವೆಂಪು ಅವರ ಪ್ರಸಿದ್ಧ ಕೃತಿಗಳಾದ ‘ಬೆರಳ್‍ಗೆ ಕೊರಳ್, ‘ಸ್ಮಶಾನ ಕುರುಕ್ಷೇತ್ರ’ ಮತ್ತು ‘ಶೂದ್ರ ತಪಸ್ವಿ’ ನಾಟಕಗಳನ್ನು ಉಲ್ಲೇಖಿಸಿದರು.  ಕೇವಲ ಕಾನೂನುಗಳನ್ನು ಓದಿಕೊಂಡು ಅಧಿಕಾರ ನಡೆಸುವವನು ಜನಸ್ನೇಹಿ ಅಧಿಕಾರಿಯಾಗಲು ಸಾಧ್ಯವಿಲ್ಲ. ಸಮಾಜದ ನಾಡಿಮಿಡಿತ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಅರಿವು ಹೊಂದಲು ಕುವೆಂಪು ಸಾಹಿತ್ಯವೇ ದಿಕ್ಕೂಚಿ ಎಂದರು.  
 
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿಗೆ ಕಠಿಣ ಪರಿಶ್ರಮ, ಧನಾತ್ಮಕ ಚಿಂತನೆ, ಕಟ್ಟುನಿಟ್ಟಾದ ಸಮಯಪಾಲನೆ ಮತ್ತು ಕಳೆದ ಹತ್ತು ವರ್ಷಗಳ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಆಧರಿಸಿ ವ್ಯವಸ್ಥಿತ ಸಿದ್ಧತೆ ನಡೆಸುವುದು ಅಗತ್ಯ ಎಂದು ಸಲಹೆ ನೀಡಿದರು.  
 
ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರು ಮಾತನಾಡಿ, ಕೆಎಸ್ಒಯು ಉಚಿತ ತರಬೇತಿ ನೀಡುತ್ತಿರುವುದನ್ನು ಶ್ಲಾಘಿಸಿದರು. ಆಡಳಿತಾತ್ಮಕ ಹುದ್ದೆಗೆ ಬರುವ ಮುನ್ನ ಸೃಜನಶೀಲತೆ ಬೆಳೆಸಿಕೊಳ್ಳಬೇಕು ಹಾಗೂ ಶಾಸಕಾಂಗ ತರುವ ಯೋಜನೆಗಳನ್ನು ಕಾರ್ಯಾಂಗದ ಅಧಿಕಾರಿಗಳೇ ಜಾರಿಗೆ ತರುವುದರಿಂದ ಸಮಾಜದಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚಿದೆ ಎಂದು ಶುಭಹಾರೈಸಿದರು.  
 
ಅಧ್ಯಯನ ಪುಸ್ತಕ ಬಿಡುಗಡೆ ಮಾಡಿದ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ಅವರು ತಮ್ಮ ಸ್ಪರ್ಧಾತ್ಮಕ ಪರೀಕ್ಷೆಯ ದಿನಗಳಲ್ಲಿ ‘ಜ್ಞಾನಬುತ್ತಿ’ ಸಂಸ್ಥೆ ನೀಡಿದ ಮಾರ್ಗದರ್ಶನವನ್ನು ಸ್ಮರಿಸಿದರು. ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಇಂತಹ ಉಚಿತ ತರಬೇತಿ ಸಂಸ್ಥೆಗಳು ವರದಾನವಾಗಿವೆ ಎಂದರು.  
 
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಎ.ಪಿ. ಜ್ಞಾನಪ್ರಕಾಶ್ ಅವರು, ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೆ, ಟಿಪ್ಪಣಿಗಳನ್ನು ಸಿದ್ಧಪಡಿಸಿಕೊಳ್ಳಬೇಕು ಮತ್ತು ಸಂವಹನ, ತಂತ್ರಜ್ಞಾನ ಹಾಗೂ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. 
 
ಕಾರ್ಯಕ್ರಮದಲ್ಲಿ ಮುಕ್ತ ವಿವಿ ವ್ಯವಸ್ಥಾಪನ ಮಂಡಳಿ ಸದಸ್ಯ ಮಂಜು, ಕುಲಸಚಿವ ಪ್ರೊ. ಎಸ್.ಕೆ. ನವೀನ್ ಕುಮಾರ್, ಶೈಕ್ಷಣಿಕ ಡೀನ್ ರಾಮನಾಥಂ ನಾಯ್ಡು, ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಮನೋವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮಂಜುನಾಥ್, ಗಣೇಶ್ ಕೆ.ಜಿ. ಕೊಪ್ಪಲ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.  
 
Hot this week

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಉತ್ಸವ’ ಕನ್ನಡಕ್ಕೆ ಮಾಡುವ ದ್ರೋಹ

‘ವಿಶ್ವ ಉರ್ದು ದಿನ’(World Urdu Day) ವೆಂದು (ಕವಿ ಮತ್ತು ತತ್ವಜ್ಞಾನಿ ಅಲ್ಲಮ...

ಕರಡು ಮತದಾರರ ಪಟ್ಟಿಯಲ್ಲಿ ಕಾಣೆಯಾದ ಹೆಸರುಗಳು: ಚುನಾವಣಾ ಆಯೋಗದಿಂದ ವಿಶೇಷ ಪರಿಶೀಲನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಮತದಾರರ ಪಟ್ಟಿಯಿಂದ...

‘ಒಂದು ದೇಶ, ಒಂದು ಚುನಾವಣೆ’: ಸುಪ್ರೀಂ ಕೋರ್ಟ್‌ನೊಂದಿಗೆ ನಿಗದಿಯಾಗಿದ್ದ ಸಭೆ ರದ್ದು

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ...

ಪಶುವೈದ್ಯರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ

ಪಶುವೈದ್ಯರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಮುಂದುವರಿದಂತೆ,...

Topics

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು...

Related Articles