II PUC ಪರೀಕ್ಷೆ, ಅಂಕಪಟ್ಟಿ ಶುಲ್ಕ ಶೇ.50ರಷ್ಟು ಹೆಚ್ಚಳ!

ಕರ್ನಾಟಕದಲ್ಲಿ II PUC ಪರೀಕ್ಷೆ, ಅಂಕಪಟ್ಟಿ ಶುಲ್ಕ (Marks Card Fees) ಶೇ.50ರಷ್ಟು ಹೆಚ್ಚಳ!

ಕರ್ನಾಟಕದಲ್ಲಿ 2026–27ನೇ ಶೈಕ್ಷಣಿಕ ಸಾಲಿನಿಂದ II PUC ಪರೀಕ್ಷೆ, ಅಂಕಪಟ್ಟಿ ಹಾಗೂ ಇತರ ಸಂಬಂಧಿತ ಶುಲ್ಕಗಳನ್ನು ಶೇ.50ರಷ್ಟು ಹೆಚ್ಚಿಸಲಾಗಿದೆ. ಸುಮಾರು ಎಂಟು ವರ್ಷಗಳ ಬಳಿಕ ಶುಲ್ಕ ಪರಿಷ್ಕರಣೆ ಮಾಡಲಾಗಿದೆ.

ಹೊಸ ಪರಿಷ್ಕರಣೆಯಂತೆ, ಪರೀಕ್ಷಾ ಪ್ರವೇಶ ಶುಲ್ಕ 400ರಿಂದ 600ಕ್ಕೆ, ವಲಸೆ ಪ್ರಮಾಣಪತ್ರದ ಶುಲ್ಕ 480ರಿಂದ 720ಕ್ಕೆ ಏರಿಕೆಯಾಗಿದೆ. ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಒಂದು ವಿಷಯದ ಶುಲ್ಕ 140ರಿಂದ 210ಕ್ಕೆ, ಎರಡು ವಿಷಯಗಳಿಗೆ 270ರಿಂದ 405ಕ್ಕೆ ಹಾಗೂ ಮೂರು ವಿಷಯಗಳಿಗೆ 400ರಿಂದ 600ಕ್ಕೆ ಹೆಚ್ಚಿಸಲಾಗಿದೆ. ಪ್ರಾಯೋಗಿಕ ಪರೀಕ್ಷೆಯ ಶುಲ್ಕವೂ ಪ್ರತಿ ವಿಷಯಕ್ಕೆ 110ರಿಂದ 165ಕ್ಕೆ ಏರಿಕೆಯಾಗಿದೆ.

ಇದೇ ವೇಳೆ, ವಿದೇಶಿ ವಿಶ್ವವಿದ್ಯಾಲಯಗಳು ಹಾಗೂ DGCAಗೆ II PUC ಅಂಕಪಟ್ಟಿ ಪರಿಶೀಲನೆಗಾಗಿ ಮೊದಲ ಬಾರಿಗೆ 2,000 ಶುಲ್ಕ ನಿಗದಿಪಡಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಈ ಶುಲ್ಕಗಳು ಹಲವು ವರ್ಷಗಳಿಂದ ಪರಿಷ್ಕರಣೆಯಾಗಿರಲಿಲ್ಲ. ಕಾಗದ ಮತ್ತು ಮುದ್ರಣ ವೆಚ್ಚ ಹೆಚ್ಚಾದ ಹಿನ್ನೆಲೆಯಲ್ಲಿ ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಹೊಸ ಶುಲ್ಕಗಳು ಪ್ರಸ್ತುತ 2026–27ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರಲಿವೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles