ಬರಗಾಲ ಪರಿಸ್ಥಿತಿಯಲ್ಲಿ ರೈತರಿಗೆ ಅನ್ಯಾಯ ಆಗಬಾರದು : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಇಂದಿನ ಬರಗಾಲ ಪರಿಸ್ಥಿತಿಯಲ್ಲಿ(Drought Situation) ರೈತರ ವಿಚಾರದಲ್ಲಿ ಅನ್ಯಾಯ ಆಗಬಾರದು ಎಂದು ವಿಧನಪರಿಷತ್‍ನ ವಿರೋಧಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ(Chalavaadi Narayana Swamy) ತಿಳಿಸಿದರು.
ಅವರು ಇಂದು ವಿಧಾನಪರಿಷತ್‍ನ ವಿಶೇಷ ಅಧಿವೇಶನದಲ್ಲಿ ರೈತರ ಸಮಸ್ಯೆ ಮತ್ತು ಸಂಬಂಧಿತ ವಿಷಯಗಳ ಬಗ್ಗೆ ಚರ್ಚೆ ಕುರಿತು ಸದನಸಲ್ಲಿ ಮಾತನಾಡಿದ ಅವರು, ಎಲ್ಲಾ ಕಡೆ ರೈತರ ಬೆಳೆ ನಾಶವಾಗಿದೆ.  ಗಾದೆ ಮಾತಿನಂತೆ ಕೈಗೆ ಬಂದಿದ್ದು, ಬಾಯಿಗೆ ಬರಲಿಲ್ಲ ಅಂತಹ ಪರಿಸ್ಥಿತಿ ಒದಗಿಬಂದಿದೆ.  ರೈತರ ಪರವಾಗಿ ಪಕ್ಷಾತೀತವಾಗಿ, ಯಾವುದೇ ರಾಜಕಾರಣ ಮಾಡದೆ ಪರಿಹಾರ ನಿಡಬೇಕು. ಇಂತಹ ಸಂದರ್ಭದಲ್ಲಿ ಸರ್ಕಾರ ಆಸಕ್ತಿ ವಹಿಸಿ ರೈತರಿಗೆ ಪರಿಹಾರ ಕಂಡು ಹಿಡಿಯುವ ಬಗ್ಗೆ ಚರ್ಚೆ ಮಾಡೋಣ ಎಂದು ವಿಶೇಷ ಅಧಿವೇಶನ ಕರೆಯಲಾಗಿದೆ ಎಂದರು.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಪ್ರಸ್ತಾಪ ಮಾಡುವಾಗ 1976ರ ನಂತರ ಇಂತಹ ತೀವ್ರ ಬರಗಾಲ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.  ಅದು ಸತ್ಯ.  ಎಲ್ ನಿನೊ ಮುನ್ಸೂಚನೆ ಬಂದಿತ್ತು, ಈ ಬಗ್ಗೆ ಹವಾಮಾನ ಇಲಾಖೆ 4-5 ತಿಂಗಳ ಹಿಂದೆ ಗಮನಕ್ಕೆ ತಂದಿದ್ದರು ಸಹ ಸರ್ಕಾರ ಯಾಕೆ ಮೌನವಾಗಿತ್ತು.  ಸರ್ಕಾರ ಈ ವಿಷಯ ಗಮನಕ್ಕೆ ಬಂದ ತಕ್ಷಣ ಕಾರ್ಯೋನ್ಮುಖವಾಗ ಬೇಕಿತ್ತು ಎಂದರು.

ಎಲ್ಲಾ ಕಡೆ ಮೇವಿಗೆ ಬರ ಇದೆ. ಎಲ್ಲೂ ಬೆಳೆ  ಇಲ್ಲ. ಮೇವು ಸಿಗುತ್ತಿಲ್ಲ. ನೀರಿನ ಮೂಲಗಳು ಬತ್ತಿ ಹೋಗುತ್ತಿದೆ. ಕಾವೇರಿ ಬತ್ತಿ ಹೋದರೆ ಬೆಂಗಳೂರು ಬತ್ತಿ ಹೋಗುತ್ತದೆ. ಎಚ್ಚರವಾಗಿರುವ ಸಂದರ್ಭದಲ್ಲಿ ಮೌನವಾಗಿದ್ದರೆ ಹೇಗೆ? ಎಂದರು.

ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಪ್ರತಿ ಜಿಲ್ಲೆಗೆ 5 ಕೋಟಿ ರೂ. ಹಾಗೂ ಶಾಕರುಗಳಿಗೆ 1 ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಗೆ ಈ ಅನುದಾನವನ್ನು ಉಪಯೋಗಿಸಿರುವ ಕುರಿತು ಮಾನಿಟರಿಂಗ್ ಮಾಡಬೇಕು ಎಂದರು.

ಮಳೆ ಸಂಪೂರ್ಣ ಹೋದರೆ ಬೋರವೆಲ್‍ಗಳಲ್ಲಿ ನೀರು ಸಿಗುವುದಿಲ್ಲ. ಪ್ರಸ್ತುತ ರಾಜ್ಯದಲ್ಲಿ ಎಷ್ಟು ಬೋರ್‍ವೆಲ್ ಕೊರೆಯಲಾಗಿದೆ ಎಂಬ ಮಾಹಿತಿ ನೀಡಬೇಕು. ಇಡೀ ರಾಜ್ಯದಲ್ಲಿ ಕೊಳವೆ ಬಾವಿ ಕೊರೆಯುವುದು ಹೆಚ್ಚಾಗಿದೆ. ಇದರಿಂದ  ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಜಲಮೂಲ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಬುದ್ದಿವಂತಿಕೆಯಿಂದ ಸೃಷ್ಟಿ ಮಾಡಬೇಕು ಎಂದು ಸದನದಲ್ಲಿ ತಿಳಿಸಿದರು

ಡಾ: ಕಸ್ತೂರಿ ರಂಗನ್ ವರದಿ ಪರಿಸರದ ಬಗ್ಗೆ ಬರೆದ ಮರಣ ಶಾಸನ – ಶಾಸಕ ಟಿ.ಡಿ. ರಾಜೇಗೌಡ

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles