ಮೈಸೂರು ದಸರಾ-2026 ‘ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳಕ್ಕೆ – ಅರ್ಜಿ ಆಹ್ವಾನ

ಬೆಂಗಳೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವ(Mysore Dasara Festival) -2026ರ ಅಂಗವಾಗಿ ‘ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಆಯೋಜಿಸಲಾಗುತ್ತಿದ್ದು, ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರಕಾಶಕರು ಹಾಗೂ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಹಳೆ ಡಿ.ಸಿ. ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಅಕ್ಟೋಬರ್ 11ರಿಂದ ಅಕ್ಟೋಬರ್ 20ರವರೆಗೆ ಪುಸ್ತಕ ಮೇಳ ನಡೆಯಲಿದೆ.

ಮಳಿಗೆಯೊಂದಕ್ಕೆ ರೂ. 1,000/- ಭದ್ರತಾ ಠೇವಣಿ ಡಿ.ಡಿ.ಯನ್ನು ‘ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು’ ಇವರ ಹೆಸರಿನಲ್ಲಿ ಪಡೆಯಬೇಕು. ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಕಚೇರಿ, ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಪ್ರಾಧಿಕಾರದ ಅಧಿಕೃತ ವೆಬ್‍ಸೈಟ್ https://kpp.karnataka.gov.in ಮೂಲಕ ಉಚಿತವಾಗಿ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2026ರ ಅಕ್ಟೋಬರ್ 05, ಸಂಜೆ 5.00 ಗಂಟೆಯೊಳಗೆ ನೊಂದಾಯಿತ ಅಂಚೆ ಅಥವಾ ನೇರವಾಗಿ (ಮುದ್ದಾಂ) ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-22484516 ಅನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles