ಮಾಜಿ ದೇವದಾಸಿ ಮಹಿಳೆಯರು ಮತ್ತು ಅವರ 3 ತಲೆಮಾರಿನ ಮಕ್ಕಳ ಸಮಗ್ರ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಕ್ರಮ

ಬೆಂಗಳೂರು: ಕರ್ನಾಟಕದಲ್ಲಿ ದೇವದಾಸಿ ಪದ್ಧತಿಯನ್ನು(The Devadasi System) ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮತ್ತು ಮಾಜಿ ದೇವದಾಸಿ ಮಹಿಳೆಯರಿಗೆ ಹಾಗೂ ಅವರ ಮೂರು ತಲೆಮಾರಿನ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರವು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಕೈಗೊಂಡ ಮರುಸಮೀಕ್ಷೆಯ ಪ್ರಕಾರ, ರಾಜ್ಯದಲ್ಲಿ 23,395 ಜನ ಮಾಜಿ ದೇವದಾಸಿ ಮಹಿಳೆಯರು ಹಾಗೂ ಒಟ್ಟು 90,092 ಮೂರು ತಲೆಮಾರುಗಳ ಮಕ್ಕಳು ಇರುವುದು ಗುರುತಿಸಲಾಗಿದೆ.

ಸ್ವಯಂ ಉದ್ಯೋಗ ಪ್ರೋತ್ಸಾಹಧನ ಹೆಚ್ಚಳ:
 ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೀಡುತ್ತಿದ್ದ ಸ್ವಯಂ ಉದ್ಯೋಗ ಪ್ರೋತ್ಸಾಹಧನವನ್ನು 2026-27ನೇ ಸಾಲಿನಲ್ಲಿ ರೂ. 30,000/- ರಿಂದ ರೂ. 45,000/-ಗಳಿಗೆ ಹೆಚ್ಚಿಸಲಾಗಿದೆ.

ವಿಶೇಷ ಅನುದಾನ: ಮಾಜಿ ದೇವದಾಸಿ ಮಹಿಳೆಯರು ಮತ್ತು ಅವರ ಮಕ್ಕಳ ಅಭಿವೃದ್ಧಿಗಾಗಿ 2026-27ನೇ ಸಾಲಿನ ಆಯವ್ಯಯದಲ್ಲಿ ರೂ. 5.00 ಕೋಟಿ ಅನುದಾನ ಘೋಷಿಸಲಾಗಿದ್ದು, ಉನ್ನತ ಶಿಕ್ಷಣ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ನೆರವು ನೀಡಲು ಕ್ರಿಯಾಯೋಜನೆ ರೂಪಿಸಲಾಗಿದೆ.

ಕಠಿಣ ಕಾನೂನು ಕ್ರಮ: ಮಹಿಳೆಯರನ್ನು ದೇವದಾಸಿ ಪದ್ಧತಿಗೆ ಸಮರ್ಪಿಸುವುದು ಗಂಭೀರ ಅಪರಾಧವಾಗಿದ್ದು, ಇದಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ರೂ. 10,000 ದಂಡ ವಿಧಿಸಲು ಅವಕಾಶವಿದೆ. ಯಾರಾದರೂ ದೇವದಾಸಿ ಪದ್ಧತಿಗೆ ಪ್ರೇರೇಪಿಸಿದರೆ ಅಥವಾ ಸಮರ್ಪಿಸಿದರೆ, ಅಂತಹ ಮಾಹಿತಿಯನ್ನು ಯಾವುದೇ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಅಥವಾ ಸಮರ್ಪಣಾ ನಿಷೇಧ ಅಧಿಕಾರಿಗಳಿಗೆ ನೀಡಬಹುದು. ಮಾಹಿತಿ ನೀಡಿದವರ ವಿವರಗಳನ್ನು ಸಂಪೂರ್ಣವಾಗಿ ಗೌಪ್ಯವಾಗಿಡಲಾಗುವುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 19 ರ ರಾಷ್ಟ್ರೀಯ ಲೋಕ್ ಅದಾಲತ್ 44,28,455 ಪ್ರಕರಣಗಳ ಇತ್ಯರ್ಥ ಮತ್ತು ಪರಿಹಾರ ಮೊತ್ತ: ರೂ. 2,384 ಕೋಟಿ ಸಂಗ್ರಹ

Hot this week

ಪೌರಾಣಿಕ ಹಿನ್ನೆಲೆಯ ಅಪೂರ್ವ ತಾಣ! ಒಡಿಶಾದ ಗಂಧಮಾರ್ದನ ಪರ್ವತ ಶ್ರೇಣಿ – ಔಷಧೀಯ ಸಸ್ಯಸಂಪತ್ತು

ಒಡಿಶಾ (Odisha) ರಾಜ್ಯದ ಬರ್ಗಢ್ ಮತ್ತು ಬಲಾಂಗೀರ್ (Balangeer) ಜಿಲ್ಲೆಗಳ ನಡುವೆ...

ಕರ್ನಾಟಕದ ಸರ್ಕಾರಿ ಸೇವೆಗಳಿಗೆ ಬಹುಭಾಷಾ ಮತ್ತು ಧ್ವನಿ ಆಧಾರಿತ ಪ್ರವೇಶದ ಯೋಜನೆ

ಕರ್ನಾಟಕ ಸರ್ಕಾರವು ಸಾರ್ವಜನಿಕ ಸೇವೆಗಳನ್ನು ಜನರಿಗೆ ಅವರ ಆಯ್ಕೆಯ ಭಾಷೆಯಲ್ಲಿ ಸುಲಭವಾಗಿ...

ಕೆನಡಾದ ಲೇಖಕಿ ಆನ್ ಕಾರ್ಸನ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಕೆನಡಾದ ಕವಯಿತ್ರಿ, ಪ್ರಬಂಧಕಾರ್ತಿ ಮತ್ತು ಅನುವಾದಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ...

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ ಕರ್ನಾಟಕದಲ್ಲಿ ಬರ...

ಆಂಧ್ರಪ್ರದೇಶದಲ್ಲಿ ತೀವ್ರ ಬರ: 21 ಜಿಲ್ಲೆಗಳ 388 ಮಂಡಲಗಳು ಬಾಧಿತ

ಆಂಧ್ರಪ್ರದೇಶ ಸರ್ಕಾರವು 21 ಜಿಲ್ಲೆಗಳ 388 ಮಂಡಲಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ...

Topics

ಹಿರಿಯ ನಟ ನಾನಾ ಪಾಟೇಕರ್ ನಿಧನ: ಚಿತ್ರರಂಗದಲ್ಲಿ ಶೋಕ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ಸಾಂಸ್ಕೃತಿಕ ಐಕಾನ್...

ಜಿಎಸ್‌ಟಿ ಅಧಿಕಾರಿಗಳ ಬಂಧನಾಧಿಕಾರ ರದ್ದು; ಪ್ರಾಸಿಕ್ಯೂಷನ್ ಮಿತಿ ₹1 ಕೋಟಿಯಿಂದ ₹5 ಕೋಟಿಗೆ ಏರಿಕೆ!

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ...

ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA.. ಆಯಣ: ದಕ್ಷಿಣಾಯನ AYANA:...

Related Articles