ಬೆಂಗಳೂರಿನಲ್ಲಿ ಸೆ.28ರಂದು ‘ವಿಶ್ವ ರೇಬೀಸ್ ದಿನಾಚರಣೆ’: ಒಂದು ದಿನದ ಜಾಗೃತಿ ಕಾರ್ಯಾಗಾರ ಆಯೋಜನೆ

ಬೆಂಗಳೂರು: “ವಿಶ್ವ ರೇಬೀಸ್ ದಿನಾಚರಣೆಯ”(‘World Rabies Day’) ಅಂಗವಾಗಿ ರೇಬೀಸ್ ರೋಗ ನಿಯಂತ್ರಣ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ 2026ನೇ ಸೆಪ್ಟೆಂಬರ್  28 ರಂದು ಬೆಳಿಗ್ಗೆ 11.00 ಗಂಟೆಗೆ  ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಆವರಣದಲ್ಲಿರುವ ‘ಎ.ವಿ. ರಾಮಾರಾವ್ ಸಭಾಂಗಣ’ದಲ್ಲಿ (A.V. Ramarao Auditorium)  ಒಂದು ದಿನದ ವಿಶೇಷ ಅರಿವು ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶುವೈದ್ಯಕೀಯ ಕಾಲೇಜು (KVAFSU), ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಬೆಂಗಳೂರು, ಬೆಂಗಳೂರು ಸೈನ್ಸ್ ಟೆಕ್ನಾಲಜಿ ಕ್ಲಸ್ಟರ್ (BSTC), ಕೊಡಗು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (KIMS) ಮಡಿಕೇರಿ, ಕೆಂಪೇಗೌಡ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (KIMS) ಬೆಂಗಳೂರು, ಇಂಡಿಯನ್ ಇಮ್ಯುನೊಲಾಜಿಕಲ್ಸ್ ಲಿಮಿಟೆಡ್ (IIL) ಹೈದರಾಬಾದ್, ಕಾಮನ್‌ವೆಲ್ತ್ ವೆಟರಿನರಿ ಅಸೋಸಿಯೇಷನ್ ಹಾಗೂ WVS-ಮಿಷನ್ ರೇಬೀಸ್ ಕೇರ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಗಾರದ ಉದ್ಘಾಟನೆಯ ನಂತರ ದಿನವಿಡೀ ವಿವಿಧ ವಿಷಯ ತಜ್ಞರು ರೇಬೀಸ್ ರೋಗ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಕ್ರಮಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.
ರೇಬೀಸ್ ರೋಗದ ಗಂಭೀರತೆ ಮತ್ತು ಅದನ್ನು ತಡೆಗಟ್ಟುವ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ಮಾಧ್ಯಮ ಪ್ರತಿನಿಧಿಗಳು ಈ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  ವರದಿ ಮಾಡುವಂತೆ ಪಶುಪಾಲನಾ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles