ಮುಖ್ಯಮಂತ್ರಿಗಳಿಗೆ ಆಡಳಿತದ ಮೇಲೆ ಹಿಡಿತ ಸಿಗುತ್ತಿಲ್ಲ : ವಿಜಯೇಂದ್ರ

ಮೇಲ್ಮನೆಯ 4 ಕ್ಷೇತ್ರದಲ್ಲಿ ಒಗ್ಗೂಡಿ ಚುನಾವಣೆ ಎದುರಿಸಲು ನಿರ್ಧಾರ: ವಿಜಯೇಂದ್ರ (BY Vijayendra)

ಬೆಂಗಳೂರು: ಶಿಕ್ಷಕರ ಕ್ಷೇತ್ರ (Teacher’s Constituency) ಹಾಗೂ ಎರಡು ಪದವೀಧರ ಕ್ಷೇತ್ರದ (Graduate’s Constituency) ವಿಧಾನ ಪರಿಷತ್ತಿನ (Vidhana Parishat Elections) ಚುನಾವಣೆ ನಡೆಯಲಿದ್ದು, ಎಲ್ಲ 4 ಕ್ಷೇತ್ರಗಳಲ್ಲಿ ಬಿಜೆಪಿ (BJP) ಮತ್ತು ಜೆಡಿಎಸ್ (JDS) ಪಕ್ಷಗಳು ಒಟ್ಟಾಗಿ, ಒಂದುಗೂಡಿ ಚುನಾವಣೆ ಎದುರಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ನಗರದಲ್ಲಿ ಇಂದು ಬಿಜೆಪಿ- ಜೆಡಿಎಸ್ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನ ಚುನಾವಣೆ ಎದುರಿಸುವ ಸಂಬಂಧ ಭಾರತೀಯ ಜನತಾ ಪಾರ್ಟಿ ಹಾಗೂ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರ ವಿಶೇಷ ಸಭೆ ಕರೆದಿದ್ದೆವು. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಜೀ, ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಎಲ್ಲ ಮುಖಂಡರು, ಜಿಲ್ಲಾ ಅಧ್ಯಕ್ಷರು ಪ್ರಮುಖರು ಭಾಗವಹಿಸಿದ್ದಾಗಿ ವಿವರಿಸಿದರು.

ನಾಲ್ಕು ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಹಾಗೂ ಜೆಡಿಎಸ್ ಪಕ್ಷ ಒಟ್ಟಾಗಿ- ಒಂದಾಗಿ ಚುನಾವಣೆ ಎದುರಿಸಬೇಕು. ನಾಲ್ಕು ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಆ ನಿಟ್ಟಿನಲ್ಲಿ ಒಟ್ಟಾಗಿ ಹೋರಾಟ ಮಾಡಬೇಕು ಅಂತ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು. ಕ್ಷೇತ್ರವಾರು ಯಾರ್ಯಾರು ಜವಾಬ್ದಾರಿ ಹೊಂದಿರಬೇಕು ಎಂಬುದರ ಘೋಷಣೆಯನ್ನು ಮಾಡಿದ್ದೇವೆ ಎಂದರು.

ಸಿಎಂ ಬಗ್ಗೆ ವಿಶ್ವಾಸ ಕಳಕೊಂಡ ಕಾಂಗ್ರೆಸ್ ಶಾಸಕರು

ರಾಜ್ಯದ ಆಡಳಿತ ಪಕ್ಷದಲ್ಲಿ ಕಾಂಗ್ರೆಸ್ ಶಾಸಕರೇ ಮುಖ್ಯಮಂತ್ರಿಗಳ ಬಗ್ಗೆ ವಿಶ್ವಾಸ ಕಳಕೊಳ್ಳುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿಗಳ ಬಗ್ಗೆ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ಆಡಳಿತದ ಮೇಲೆ ಹಿಡಿತ ಸಿಗುತ್ತಿಲ್ಲ ಎಂದು ಟೀಕಿಸಿದರು.

ಘೋಷಣೆಗೆ ಸೀಮಿತವಾದ ಸರ್ಕಾರ..

ಹಣಕಾಸು ಇಲಾಖೆಯು ಬರೆದ ಪತ್ರದ ಮೂಲಕ ಇದೆಲ್ಲ ಜಗಜ್ಜಾಹೀರಾಗಿದೆ. ಖಜಾನೆಯಲ್ಲಿ ಹಣ ಇಲ್ಲ. ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಒಂದಾಗಿ ಹೋರಾಟಗಳನ್ನು ಮಾಡುವುದು; ಯಾವ ರೀತಿ ಮುಂದೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯದಲ್ಲಿ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ತರುವ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles