ಅರ್ಚಕರು ಮತ್ತು ದೇವಾಲಯ ನೌಕರರ ಮಕ್ಕಳಿಗೆ ಶಿಕ್ಷಣ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು (archakas) ಮತ್ತು ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ (Education) 2026-27ನೇ ಸಾಲಿನ ಪ್ರೋತ್ಸಾಹ ಧನ ನೀಡಲು ಮುಜರಾಯಿ ಇಲಾಖೆ ಪ್ರಕಟಣೆ ಹೊರಡಿಸಿದೆ.

ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಸೆ. 3 ರಂದು ಹೊರಡಿಸಿರುವ ಆದೇಶದಂತೆ [ಸಂಖ್ಯೆ: E: 181664: HRICE-ADM0ADM1/832/2023] ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾರಿಗೆ ಎಷ್ಟು ಪ್ರೋತ್ಸಾಹ ಧನ?
ಶೈಕ್ಷಣಿಕ ಹಂತ | ಮೊತ್ತ
1. ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ) | ರೂ. 5,000/-
2. ಬಿ.ಟಿ.ಬಿ / ಜೆ.ಒ.ಸಿ / ಡಿಪ್ಲೊಮಾ | ರೂ. 5,000/-
3. ಪದವಿ ಶಿಕ್ಷಣ | ರೂ. 7,000/-
4. ಸ್ನಾತಕೋತ್ತರ ಪದವಿ ಶಿಕ್ಷಣ | ರೂ. 15,000/-
5. ಇತರೆ ವೈದ್ಯಕೀಯ ಕೋರ್ಸ್ (ಆಯುರ್ವೇದ, ಹೋಮಿಯೋಪತಿ, ಯುನಾನಿ) | ರೂ. 25,000/-
6. ವೈದ್ಯಕೀಯ / ದಂತ ವೈದ್ಯಕೀಯ ಶಿಕ್ಷಣ | ರೂ. 50,000/-
7. ತಾಂತ್ರಿಕ ಶಿಕ್ಷಣ (ಇಂಜಿನಿಯರಿಂಗ್) | ರೂ. 25,000/-
8. ವಿದೇಶ ವ್ಯಾಸಂಗ (ಒಂದು ಬಾರಿಗೆ ಮಾತ್ರ) | ರೂ. 1,00,000/-

ಅರ್ಜಿ ಸಲ್ಲಿಕೆ ಹೇಗೆ, ಕೊನೆ ದಿನಾಂಕ ಯಾವಾಗ?

ಅರ್ಜಿ ಸಲ್ಲಿಸಲು ಅಕ್ಟೋಬರ್ 30, 2026 ಕೊನೆಯ ದಿನವಾಗಿದೆ.

https://itms.kar.nic.in/resources/docs/hrcescroll_doc/55/document_1.pdf

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿ (ಮುಜರಾಯಿ ಶಾಖೆ) / ತಾಲ್ಲೂಕು ತಹಶೀಲ್ದಾರ್ ಕಚೇರಿಯಲ್ಲಿ ಮತ್ತು ಇಲಾಖೆಯ ಅಧಿಕೃತ ಜಾಲತಾಣ https://itms.kar.nic.in/hrcehome/index.php ನಲ್ಲಿ ಪಡೆದು, ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯಲ್ಲಿ ಸಲ್ಲಿಸಬೇಕು ಎಂದು ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles