ಬೆಂಗಳೂರು – ಭಾಗಮಂಡಲ ನಡುವೆ ನೂತನ ರಾಜಹಂಸ ಬಸ್: ಅ.1 ರಿಂದ  ಕಾರ್ಯಾಚರಣೆ  

ಬೆಂಗಳೂರು: ಪ್ರಯಾಣಿಕರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬೆಂಗಳೂರು ಕೇಂದ್ರೀಯ ವಿಭಾಗವು ಬೆಂಗಳೂರು ಶಾಂತಿನಗರ ಬಸ್ ನಿಲ್ದಾಣದಿಂದ(Shantinagar Bus Station)  ಭಾಗಮಂಡಲಕ್ಕೆ ಹೊಸ ರಾಜಹಂಸ ಬಸ್(Rajahamsa Bus) ಸೇವೆಯನ್ನು ಆರಂಭಿಸುತ್ತಿದೆ. ಈ ನೂತನ ಸೇವೆಯು ಮುಂಬರುವ ಅಕ್ಟೋಬರ್ 01, 2026 ರಿಂದ ಅಧಿಕೃತವಾಗಿ ಕಾರ್ಯಾಚರಣೆಗೆ ಬರಲಿದೆ.
ಈ ಸಾರಿಗೆಯು ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಟು ಮೈಸೂರು, ಹುಣಸೂರು, ಕುಶಾಲನಗರ, ಮಡಿಕೇರಿ ಮತ್ತು ಕಾರಗುಂದ ಮಾರ್ಗವಾಗಿ ಭಾಗಮಂಡಲವನ್ನು ತಲುಪಲಿದೆ.
ಬೆಂಗಳೂರಿನಿಂದ ಭಾಗಮಂಡಲಕ್ಕೆ: ಬೆಂಗಳೂರು ಶಾಂತಿನಗರ ಬಸ್ ನಿಲ್ದಾಣದಿಂದ ರಾತ್ರಿ 10:30 ಗಂಟೆಗೆ ಬಸ್ ಹೊರಟು  ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ರಾತ್ರಿ 11:16 ಗಂಟೆಗೆ ಸಾಗಲಿದೆ. ಮರುದಿನ ಬೆಳಗಿನ ಜಾವ 05:15 ಗಂಟೆಗೆ ಮಡಿಕೇರಿಗೆ ಆಗಮಿಸಿ, ಭಾಗಮಂಡಲಕ್ಕೆ ಬೆಳಿಗ್ಗೆ 06:15 ಗಂಟೆಗೆ ತಲುಪಲಿದೆ.
ಭಾಗಮಂಡಲದಿಂದ ಬೆಂಗಳೂರಿಗೆ:  ಭಾಗಮಂಡಲದಿಂದ ರಾತ್ರಿ 08:30 ಗಂಟೆಗೆ ಹೊರಟು, ರಾತ್ರಿ 10:00 ಗಂಟೆಗೆ ಮಡಿಕೇರಿಗೆ ಆಗಮಿಸಿ, ಮರುದಿನ ಬೆಳಗಿನ ಜಾವ 04:00 ಗಂಟೆಗೆ ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣಕ್ಕೆ ತಲುಪುವುದು. ಅಲ್ಲಿಂದ ಬೆಂಗಳೂರು ಶಾಂತಿನಗರ ಬಸ್ ನಿಲ್ದಾಣವನ್ನು ಬೆಳಗಿನ ಜಾವ 04:30 ಗಂಟೆಗೆ ತಲುಪಲಿದೆ.
ಪ್ರಯಾಣ ದರ ವಿವರ:  ಬೆಂಗಳೂರು, ಶಾಂತಿನಗರದಿಂದ  ಮಡಿಕೇರಿಗೆ ವಯಸ್ಕರಿಗೆ ರೂ. 545/-  ಮತ್ತು ಮಕ್ಕಳಿಗೆ ರೂ. 296/-  ಹಾಗೂ ಬೆಂಗಳೂರು ಶಾಂತಿನಗರದಿಂದ ಭಾಗಮಂಡಲಕ್ಕೆ ವಯಸ್ಕರಿಗೆ, ರೂ. 608/- ಮತ್ತು ಮಕ್ಕಳಿಗೆ ರೂ. 328/-  ದರ ನಿಗದಿಪಡಿಸಿದೆ.
ಸಾರ್ವಜನಿಕ ಪ್ರಯಾಣಿಕರು ಈ ಹೊಸ ಸಾರಿಗೆ ಸೇವೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೆಎಸ್‌ಆರ್‌ಟಿಸಿ ಬೆಂಗಳೂರು ಕೇಂದ್ರೀಯ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles