ಸರ್ಕಾರಿ ಹಾಗೂ ಸಾರ್ವಜನಿಕ ವಲಯದ ಕಾರ್ಯಕ್ಷಮತೆ ಹೆಚ್ಚಿಸಲು ರಾಷ್ಟ್ರೀಯ ಉತ್ಪಾದಕತಾ ಪರಿಷತ್ ಶ್ರಮ

ಬೆಂಗಳೂರು: ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಡಿಪಿಐಐಟಿ (DPIIT) ವಿಭಾಗದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಉತ್ಪಾದಕತಾ ಪರಿಷತ್ (NPC), ದೇಶಾದ್ಯಂತ ವಿವಿಧ ಸರ್ಕಾರಿ, ಸಾರ್ವಜನಿಕ ಹಾಗೂ ಖಾಸಗಿ ವಲಯದ ಸಂಸ್ಥೆಗಳಲ್ಲಿ ಉತ್ಪಾದಕತೆ, ಕಾರ್ಯಕ್ಷಮತೆ ಮತ್ತು ನಾಯಕತ್ವ ಸಾಮರ್ಥ್ಯವನ್ನು ವೃದ್ಧಿಸಲು ವ್ಯಾಪಕ ಸಲಹಾ ಹಾಗೂ ತರಬೇತಿ(Training) ಸೇವೆಗಳನ್ನು ಒದಗಿಸುತ್ತಿದೆ.
1958 ರಲ್ಲಿ ಸ್ಥಾಪನೆಯಾದ ಈ ಪ್ರತಿಷ್ಠಿತ ಸಂಸ್ಥೆಯು ಕರಕುಶಲತೆ, ಕೈಗಾರಿಕಾ ಎಂಜಿನಿಯರಿಂಗ್, ಸಂಸ್ಥೆಗಳ ಪುನರ್ರಚನೆ, ಸಿಬ್ಬಂದಿ ಮೌಲ್ಯಮಾಪನ, ಶಕ್ತಿ ಹಾಗೂ ನೀರಿನ ಆಡಿಟ್ ಮುಂತಾದ ಪ್ರಮುಖ ಕ್ಷೇತ್ರಗಳಲ್ಲಿ ಪ್ರಮುಖ ಸಲಹೆಗಳನ್ನು ನೀಡುತ್ತಾ ಬಂದಿದೆ. ಕರ್ನಾಟಕ ಸರ್ಕಾರದ ಪ್ರಮುಖ ಸಂಸ್ಥೆಗಳಾದ ಬೆಸ್ಕಾಂ (BESCOM), ಕಾವಿಕಾ (KAVIKA), ಮೈಸೂರು ಪೇಂಟ್ಸ್ ಅಂಡ್ ವಾರ್ನಿಶ್ ಲಿಮಿಟೆಡ್, ಹಟ್ಟಿ ಚಿನ್ನದ ಗಣಿ ಸಂಸ್ಥೆ, ಸಾರ್ವಜನಿಕ ಉದ್ಯಮಗಳ ಇಲಾಖೆ ಹಾಗೂ ಎಂಎಸ್‌ಐಎಲ್ (MSIL) ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳು ಎನ್‌ಪಿಸಿಯ ನುರಿತ ಸೇವೆಯನ್ನು ಪಡೆದುಕೊಂಡಿವೆ.
ಇತ್ತೀಚೆಗೆ ಹಟ್ಟಿ ಚಿನ್ನದ ಗಣಿ ಸಂಸ್ಥೆಯಲ್ಲಿ ಮಾನವಶಕ್ತಿ ಮೌಲ್ಯಮಾಪನ ಅಧ್ಯಯನ, ಕೇಂದ್ರ ಉಗ್ರಾಣ ನಿಗಮ, ದೆಹಲಿ ಅಭಿವೃದ್ಧಿ ಪ್ರಾಧಿಕಾರ (DDA) ಹಾಗೂ ರಕ್ಷಣಾ ಸಚಿವಾಲಯದ ಪ್ರಮುಖ ವಿಭಾಗಗಳ ಪುನರ್ರಚನಾ ಅಧ್ಯಯನಗಳನ್ನು ಎನ್‌ಪಿಸಿ ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಸಂಸ್ಥೆಗಳ ನಾಯಕತ್ವವನ್ನು ಬಲಪಡಿಸಲು ಹಾಗೂ ಆಧುನಿಕ ಸವಾಲುಗಳನ್ನು ಎದುರಿಸಲು ಎನ್‌ಪಿಸಿಯ ಬೆಂಗಳೂರು ಪ್ರಾದೇಶಿಕ ನಿರ್ದೇಶನಾಲಯವು ಗೋವಾದಲ್ಲಿ ಉನ್ನತ ಅಧಿಕಾರಿಗಳಿಗಾಗಿ ಎರಡು ವಿಶೇಷ ವಸತಿ ಸಹಿತ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಕೃತಕ ಬುದ್ಧಿಮತ್ತೆ (AI) ಯುಗದಲ್ಲಿ ಸಂದಿಗ್ಧ ಆಲೋಚನೆ ಹಾಗೂ ನಿರ್ಧಾರ ಕೈಗೊಳ್ಳುವಿಕೆ:
ಈ ಕಾರ್ಯಕ್ರಮವು 2026 ನೇ  ನವೆಂಬರ್ 23 ರಿಂದ 27  ರವರೆಗೆ ಗೋವಾದಲ್ಲಿ ನಡೆಯಲಿದ್ದು, ಎಐ ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿರುವ ಈ ದಿನಗಳಲ್ಲಿ, ನಾಯಕರು ಕೃತಕ ಬುದ್ಧಿಮತ್ತೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದರ ಜೊತೆಗೆ, ದತ್ತಾಂಶಗಳ ಆಧಾರಿತ ಸರಿಯಾದ ನಾಯಕತ್ವ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಗತ್ಯವಾದ ತರಬೇತಿಯನ್ನು ಇದರಲ್ಲಿ ನೀಡಲಾಗುತ್ತದೆ. ಈ ತರಬೇತಿಗೆ ನೋಂದಾಯಿಸಲು 2026 ನೇ  ನವೆಂಬರ್ 13  ಕೊನೆಯ ದಿನಾಂಕವಾಗಿದೆ.
ದಿ ಕರ್ಮಯೋಗಿ ಲೀಡರ್: ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಮೃದು ಕೌಶಲ್ಯಗಳು:
ಈ ತರಬೇತಿ ಕಾರ್ಯಕ್ರಮವು 2027 ನೇ ಜನವರಿ 18  ರಿಂದ 22 ರವರೆಗೆ ಗೋವಾದಲ್ಲಿ ನಡೆಯಲಿದ್ದು,  ಭಾರತೀಯ ಸಾಂಪ್ರದಾಯಿಕ ‘ಕರ್ಮಯೋಗ’ ಸಿದ್ಧಾಂತ ಹಾಗೂ ಆಧುನಿಕ ಭಾವನಾತ್ಮಕ ಬುದ್ಧಿವಂತಿಕೆಯನ್ನು ಮೇಳೈಸಿ, ಮಾನಸಿಕ ಒತ್ತಡ ನಿರ್ವಹಣೆ, ಪರಿಣಾಮಕಾರಿ ಸಂವಹನ, ನಾಯಕತ್ವ ಗುಣ ಮತ್ತು ವೃತ್ತಿ-ವೈಯಕ್ತಿಕ ಜೀವನದ ಸಮತೋಲನವನ್ನು ಸಾಧಿಸುವ ಬಗ್ಗೆ ಹಿರಿಯ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತದೆ. ಈ ತರಬೇತಿಗೆ ನೋಂದಾಯಿಸಲು 2027 ನೇ  ಜನವರಿ 08 ಕೊನೆಯ ದಿನಾಂಕವಾಗಿದೆ.
ಈ ಎರಡೂ ತರಬೇತಿ ಕಾರ್ಯಕ್ರಮಗಳು ಸರ್ಕಾರಿ ಇಲಾಖೆಗಳ ಹಿರಿಯ ಅಧಿಕಾರಿಗಳು, ಸಾರ್ವಜನಿಕ ವಲಯದ ಉದ್ಯಮಗಳ (PSU) ನಾಯಕರು, ನಿರ್ದೇಶಕರು ಹಾಗೂ ಕಾರ್ಪೊರೇಟ್ ವಲಯದ ಉನ್ನತ ಕಾರ್ಯನಿರ್ವಾಹಕರಿಗೆ ಅತ್ಯಂತ ಉಪಯುಕ್ತವಾಗಿವೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ಎನ್‌ಪಿಸಿಯಿಂದ ಅಧಿಕೃತ ಪ್ರಮಾಣಪತ್ರವನ್ನು ನೀಡಲಾಗುತ್ತದೆ.
ಭಾಗವಹಿಸುವಿಕೆ ಮತ್ತು  ಶುಲ್ಕ:
ವಸತಿ ಸಹಿತ ಭಾಗವಹಿಸುವಿಕೆಗೆ ಪ್ರತಿ ಅಭ್ಯರ್ಥಿಗೆ ರೂ 75,0000/- + ಶೇ. 18  ಜಿಎಸ್‌ಟಿ ಹಾಗೂ ವಸತಿ ರಹಿತ ಭಾಗವಹಿಸುವಿಕೆಗೆ ರೂ 60,000/- + ಶೇ. 18  ಜಿಎಸ್‌ಟಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ತರಬೇತಿಯ ವೆಚ್ಚವನ್ನು ಸಂಪೂರ್ಣವಾಗಿ ಕೇಂದ್ರ ಅಥವಾ ರಾಜ್ಯ ಸರ್ಕಾರಗಳೇ ಭರಿಸುವ ಸಂದರ್ಭದಲ್ಲಿ ಜಿಎಸ್‌ಟಿಯಿಂದ ವಿನಾಯಿತಿ ಇರಲಿದೆ.
ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ರಾಷ್ಟ್ರೀಯ ಉತ್ಪಾದಕತಾ ಪರಿಷತ್‌ನ ಪ್ರಾದೇಶಿಕ ಕಚೇರಿಯನ್ನು ಅಥವಾ bangalore@npcindia.gov.in ಇಮೇಲ್ ಮೂಲಕ ಸಂಪರ್ಕಿಸಬಹುದು ಎಂದು‌ ರಾಷ್ಟ್ರೀಯ ಉತ್ಪಾದಕತಾ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles