ವಾರದಲ್ಲೇ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ವಿತರಣೆಗೆ ವಾರ್ತಾ ಇಲಾಖೆ ಸಿದ್ಧತೆ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ(Rural Journalists) ಉಚಿತ ಬಸ್ ಪಾಸ್(Free Bus Pass) ವಿತರಿಸುವ ಪ್ರಕ್ರಿಯೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮುಂದಾಗಿದ್ದು, ಅನುಮೋದನೆಗೊಂಡಿರುವ ಪಾಸ್‌ಗಳನ್ನು ಈ ವಾರದಲ್ಲೇ ಜಿಲ್ಲಾ ಮಟ್ಟದಲ್ಲಿ ವಿತರಿಸಲು ಸಿದ್ಧತೆ ನಡೆಸಿದೆ.

ಈ ಕುರಿತು ವಾರ್ತಾ ಇಲಾಖೆ ಆಯುಕ್ತರಾದ ಎಂ.ಎನ್. ಅನುಚೇತ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಅನುಮೋದನೆಗೊಂಡಿರುವ ಗ್ರಾಮೀಣ ಪತ್ರಕರ್ತರ ಬಸ್ ಪಾಸ್‌ಗಳು ಬಂದಿದ್ದು, ಈ ವಾರದಲ್ಲೇ ಜಿಲ್ಲಾಮಟ್ಟದಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಯುಕ್ತರು ಖಚಿತಪಡಿಸಿದರು. ಈ ಬಗ್ಗೆ ಕೂಡಲೇ ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲಾಗಿದ್ದ ಸುಮಾರು 400 ಅರ್ಜಿಗಳಿಗೆ ಆಗಸ್ಟ್ 7ರಂದು ವಾರ್ತಾ ಇಲಾಖೆ ಅನುಮೋದನೆ ನೀಡಿತ್ತು. ಆಯುಕ್ತ ಎಂ.ಎನ್. ಅನುಚೇತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿತ್ತು.

ಗ್ರಾಮೀಣ ಪತ್ರಕರ್ತರ ಬಹುದಿನಗಳ ಬೇಡಿಕೆಯಾಗಿದ್ದ ಬಸ್ ಪಾಸ್ ಯೋಜನೆ ಜಾರಿಗೆ ಕೆಯುಡಬ್ಲ್ಯೂಜೆ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದ್ದು, ಇದೀಗ ಅನುಮೋದನೆಗೊಂಡಿರುವ ಪಾಸ್‌ಗಳ ವಿತರಣೆಗೆ ಇಲಾಖೆ ಮುಂದಾಗಿರುವುದನ್ನು ಕೆಯುಡಬ್ಲ್ಯೂಜೆ ಸ್ವಾಗತಿಸಿದೆ.

ದಾಖಲೆಗಳ ಪರಿಶೀಲನೆ ನಡೆಸಿ ಬಸ್ ಪಾಸ್‌ಗಳಿಗೆ ಅನುಮೋದನೆ ನೀಡಿರುವ ವಾರ್ತಾ ಇಲಾಖೆಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ. ಇನ್ನೂ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾನುಸಾರ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸಂಘ ಮನವಿ ಮಾಡಿದೆ.

ಭೇಟಿ ಸಂದರ್ಭದಲ್ಲಿ ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದಗಳನ್ನು ತಿಳಿಸಿದೆ.

ಅಮೆರಿಕಾ–ಇರಾನ್ ಬಿಕ್ಕಟ್ಟು: ಷೇರು ಮಾರುಕಟ್ಟೆ ಕುಸಿತ, ಕಚ್ಚಾ ತೈಲ ಬೆಲೆ ಏರಿಕೆ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles