ಗಾಂಧಿಭವನದ ದತ್ತಿನಿಧಿ ಪ್ರಶಸ್ತಿಗೆ ಕೃತಿಗಳ ಆಯ್ಕೆ

ಕರ್ನಾಟಕದ ಗಾಂಧಿ ಸ್ಮಾರಕ ನಿಧಿ ಸಂಸ್ಥೆಯು ಕೊಡಮಾಡುವ 2026ರ ಸಾಲಿನ ಶ್ರೀಮತಿ ಜಯಲಕ್ಷ್ಮಿ ಡಾ.ಹೊ.ಶ್ರೀನಿವಾಸಯ್ಯ ಸ್ಮಾರಕ ದತ್ತಿ ನಿಧಿ ಪ್ರಶಸ್ತಿಗೆ ಮಂಜುನಾಥ್‌ ಚಾಂದ್‌(Manjunath Chand) ಅವರು ಬರೆದಿರುವ ʼಮಹಾತ್ಮನ ಮಗಳುʼ ಮತ್ತು ರಮೇಶ್‌ ಬಿಳಿಕೆರೆ ಅವರು ಬರೆದಿರುವ ಮರೆಯಲಾಗದ ಮಾಣಿಕ್ಯ ಟಿ.ಎಸ್.ಸುಬ್ಬಣ್ಣ (Mareyalagada Manikya T.S.Subramanya) ಕೃತಿಗಳು ಆಯ್ಕೆಯಾಗಿವೆ.

ಜೊತೆಗೆ ಈ ಸಾಲಿನ ಉತ್ತಮ ಎನ್‌ಎಸ್‌ಎಸ್‌ ಪ್ರಶಸ್ತಿಯನ್ನು ಪ್ರೊ.ಜಿ.ಬಿ.ಶಿವರಾಜು ಅವರಿಗೆ ನೀಡಿ ಗೌರವಿಸಲಾಗುತ್ತಿದೆ. ರಾಜ್ಯಮಟ್ಟದ ಉತ್ತಮ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಪುರಸ್ಕಾರಕ್ಕೆ ಮೈಸೂರಿನ ಎನ್‌ಎಸ್‌ಎಸ್‌ ಅಧಿಕಾರಿ ಡಾ.ರಾಘವೇಂದ್ರ ಆರ್‌ ಮತ್ತು ಬೆಳಗಾವಿಯ ಎನ್‌ಎಸ್‌ಎಸ್‌ ಅಧಿಕಾರಿ ಡಾ.ಸುರೇಖಾ ಅಶೋಕ ಬೆಳಗಲಿ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜ್ಯಮಟ್ಟದ ಉತ್ತಮ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಪುರಸ್ಕಾರಕ್ಕೆ ತುಮಕೂರಿನ ಜಿ.ಎ.ಸಿದ್ದೇಶ್‌, ಮಸ್ಕಿಯ ನಾಗರಾಜ್‌, ಬೆಳ್ಳೂರಿನ ಕುಮಾರಿ ಚೈತ್ರಾ ಸಿ, ರಾಯಚೂರಿನ ಕು.ಜೆ.ಎಸ್.‌ ಸುಷ್ಮಾ ಅವರು ಆಯ್ಕೆಯಾಗಿರುತ್ತಾರೆ.

ಗಾಂಧಿ ಜಯಂತಿ ಮತ್ತು ವಿಶ್ವ ಅಹಿಂಸಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ಅರವಿಂದ ಚೊಕ್ಕಾಡಿ ಅವರು ರಚಿಸಿರುವ ʼಆಸುಪಾಸಿನಲ್ಲಿ ಗಾಂಧಿʼ, ಕೆ.ಎಸ್.ನರಸಿಂಹ ಸ್ವಾಮಿ ಅವರು ಅನುವಾದಿಸಿದ ʼನನ್ನ ಕನಸಿನ ಭಾರತʼ ಮತ್ತು ʼಮೋಹನ ಮಾಲೆʼ, ಮತ್ತು ಡಾ.ಮಹಾಬಲೇಶ್ವರ ರಾವ್‌ ಅವರು ಅನುವಾದಿಸಿರುವ ಬಿಬಿಸಿ ಬಾನುಲಿ ಪ್ರಸಾರದ ಕನ್ನಡ ಅನುವಾದಿತ ಕೃತಿ ʼಗಾಂಧೀ ಸಂಕಥನ ಬಹುಮುಖ ನೋಟʼ ಕೃತಿಗಳನ್ನು ಕೂಡ ಮಾನ್ಯ ಮುಖ್ಯಮಂತ್ರಿಗಳು ಬಿಡುಗಡೆ ಮಾಡಲಿದ್ದಾರೆ.

ನಾಗರೀಕ ಸಮಾಜವನ್ನು ಬೆಚ್ಚಿ ಬೀಳಿಸಿದ ನಕಲಿ ಔಷಧ ಹಾಗು ಲೂಟಿಕೋರ ಮಾಫಿಯಾ ದಂಧೆ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles