ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಆದ್ಯತೆ: ರೂ. 4,000 ಕೋಟಿ ಬೆಂಬಲದ ಹೊಸ ಜವಳಿ ಮತ್ತು ಉಡುಪು ನೀತಿ 4.0 ಅಧಿಕೃತ ಜಾರಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(CM.D.K.Shivakumar) ಅವರ ವಿಶೇಷ ಆಸಕ್ತಿಯೊಂದಿಗೆ ರೂಪಿಸಲಾದ ಕರ್ನಾಟಕದ ನೂತನ ಜವಳಿ ಮತ್ತು ಉಡುಪು ನೀತಿ(New Textile and Garment Policy)
(4.0) 2026–31ಕ್ಕೆ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಜವಳಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ನೀತಿಯ ಅನುಷ್ಠಾನಕ್ಕಾಗಿ ರೂ.4,000 ಕೋಟಿ ಮೊತ್ತದ ಹಣಕಾಸು ಬೆಂಬಲಕ್ಕೆ ಅನುಮೋದನೆ ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ರೂ.20,000 ಕೋಟಿ ಹೂಡಿಕೆ ಆಕರ್ಷಿಸುವುದು ಹಾಗೂ 5 ಲಕ್ಷ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ.
ಮುಖ್ಯಮಂತ್ರಿಗಳ ಆದ್ಯತೆಯಂತೆ ಬೆಂಗಳೂರಿನಾಚೆಗೂ ಜವಳಿ ಮತ್ತು ಉಡುಪು ಕೈಗಾರಿಕೆಗಳನ್ನು ವಿಸ್ತರಿಸಿ, ಪ್ರಾದೇಶಿಕ ಸಮತೋಲನದೊಂದಿಗೆ ಕೈಗಾರಿಕಾ ಬೆಳವಣಿಗೆ ಸಾಧಿಸಲು ರಾಜ್ಯದ 34 ತಾಲೂಕುಗಳನ್ನು ವಿಶೇಷ ಆದ್ಯತೆಯ ತಾಲೂಕುಗಳಾಗಿ (Focused Talukas) ಗುರುತಿಸಲಾಗಿದೆ. ಈ ತಾಲೂಕುಗಳಲ್ಲಿ ಸ್ಥಾಪನೆಯಾಗುವ ಅರ್ಹ ಹೊಸ ಜವಳಿ ಮತ್ತು ಉಡುಪು ಘಟಕಗಳಿಗೆ ನೀತಿಯಡಿ ಸಾಮಾನ್ಯ ಸೌಲಭ್ಯಗಳ ಜೊತೆಗೆ ಹೆಚ್ಚುವರಿ ಪ್ರೋತ್ಸಾಹಧನ ಹಾಗೂ ರಿಯಾಯಿತಿಗಳು ಲಭ್ಯವಾಗಲಿವೆ.
ಮೊದಲ ಬಾರಿಗೆ ರೇಷ್ಮೆ ನೂಲು ಉತ್ಪಾದನೆಗೂ ನೀತಿಯ ಬೆಂಬಲ
ನೂತನ ನೀತಿಯ ಮತ್ತೊಂದು ಪ್ರಮುಖ ವಿಶೇಷತೆಯೆಂದರೆ, ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ನೂಲು ಉತ್ಪಾದನೆಗೆ ಸಂಬಂಧಿಸಿದ ರೇಷ್ಮೆ ರೀಲಿಂಗ್ (Silk Reeling) ಮತ್ತು ಸ್ಪಿನ್ನಿಂಗ್ (Silk Spinning) ಚಟುವಟಿಕೆಗಳನ್ನು ಜವಳಿ ನೀತಿಯ ವ್ಯಾಪ್ತಿಗೆ ತರಲಾಗಿದೆ. ಇದರಿಂದ ರಾಜ್ಯದ ರೇಷ್ಮೆ ಉತ್ಪಾದನಾ ಸರಪಳಿಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸಂಬಂಧಿತ ಉದ್ಯಮಗಳ ಅಭಿವೃದ್ಧಿಗೆ ಹೊಸ ಅವಕಾಶ ಕಲ್ಪಿಸಲಾಗಿದೆ.
 
ಕಲಬುರಗಿ PM-MITRA ಪಾರ್ಕ್‌ಗೆ ವಿಶೇಷ ಪ್ರೋತ್ಸಾಹ
ಕಲ್ಯಾಣ ಕರ್ನಾಟಕದಲ್ಲಿ ಕೈಗಾರಿಕಾ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕಲಬುರಗಿಯ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್ಟೈಲ್ ರೀಜನ್ ಆ್ಯಂಡ್ ಅಪ್ಯಾರಲ್ (PM-MITRA) ಪಾರ್ಕ್‌ನಲ್ಲಿ ಸ್ಥಾಪನೆಯಾಗುವ ಅರ್ಹ ಘಟಕಗಳಿಗೆ ವಿಶೇಷ ಪ್ರೋತ್ಸಾಹಧನ ಮತ್ತು ರಿಯಾಯಿತಿಗಳನ್ನು ನೀತಿಯಲ್ಲಿ ಕಲ್ಪಿಸಲಾಗಿದೆ.
ಜವಳಿ ಉತ್ಪಾದನೆ, ತಾಂತ್ರಿಕ ಜವಳಿ, ಕೈಮಗ್ಗ, ರೇಷ್ಮೆ, ಕೌಶಲ್ಯಾಭಿವೃದ್ಧಿ, ರಫ್ತು ಹಾಗೂ ಸುಸ್ಥಿರ ಉತ್ಪಾದನೆಗೆ ಆದ್ಯತೆ ನೀಡುವ ಮೂಲಕ ಕರ್ನಾಟಕವನ್ನು ಜಾಗತಿಕ ಮಟ್ಟದ ಜವಳಿ ಮತ್ತು ಉಡುಪು ಉತ್ಪಾದನಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವುದು ಹೊಸ ನೀತಿಯ ಉದ್ದೇಶವಾಗಿದೆ.
 
ಅಧಿಕೃತ ಸರ್ಕಾರಿ ಆದೇಶ ಬಿಡುಗಡೆ
ನೂತನ Textile & Apparel Policy (4.0) 2026–31ಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶವನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ *ರೋಹಿಣಿ ಸಿಂಧೂರಿ, ಐಎಎಸ್* ಅವರು ಸೆಪ್ಟೆಂಬರ್ 30ರಂದು ಅಧಿಕೃತವಾಗಿ ಹೊರಡಿಸಿದ್ದಾರೆ.
ಹೊಸ ನೀತಿ ಮತ್ತು ಅದರ ಪ್ರೋತ್ಸಾಹಧನ ಹಾಗೂ ರಿಯಾಯಿತಿ ಪ್ಯಾಕೇಜ್ ಸೆಪ್ಟೆಂಬರ್ 30, 2026ರಿಂದ ಜಾರಿಗೆ ಬರಲಿದ್ದು, ಐದು ವರ್ಷಗಳ ಅವಧಿಗೆ ಅಥವಾ ಮುಂದಿನ ಹೊಸ ಜವಳಿ ನೀತಿ ಘೋಷಣೆಯಾಗುವವರೆಗೆ ಅನ್ವಯವಾಗಲಿದೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles