2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವಲ್ಲಿ ಯುವಜನರ ಪಾತ್ರ ಮಹತ್ವದ್ದು

ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್(Shri Thawarchand Gehlot) ಅವರು ಗುರುವಾರ ಲೋಕಭವನದಲ್ಲಿ ‘ಯುವ ಸಂಗಮ ಹಂತ-7’(Yuva Sangam Phase – 7) ಕಾರ್ಯಕ್ರಮದಡಿ ಕರ್ನಾಟಕಕ್ಕೆ ಭೇಟಿ ನೀಡಿರುವ ಮಧ್ಯಪ್ರದೇಶದ ವಿದ್ಯಾರ್ಥಿಗಳೊಂದಿಗೆ ಗುರುವಾರ ಸಂವಾದ ನಡೆಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, “ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರು ತಮ್ಮನ್ನು ತಾವು ಸಜ್ಜುಗೊಳಿಸಿಕೊಂಡು, ಹೊಸ ಉಪಕ್ರಮಗಳನ್ನು ಕೈಗೊಂಡು, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಹಾಗೂ ‘ವಿಶ್ವಗುರು’ವನ್ನಾಗಿ ರೂಪಿಸುವ ರಾಷ್ಟ್ರೀಯ ಸಂಕಲ್ಪಕ್ಕೆ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು.

“ಭಾರತವು ಈಗ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, ಮೂರನೇ ಸ್ಥಾನಕ್ಕೇರಲು ಪ್ರಯತ್ನಗಳು ನಡೆಯುತ್ತಿವೆ. ಈ ರಾಷ್ಟ್ರೀಯ ಗುರಿಯನ್ನು ಸಾಧಿಸುವಲ್ಲಿ ಯುವಜನರ ಸಮರ್ಪಣೆ, ಪ್ರತಿಭೆ, ಜ್ಞಾನ ಮತ್ತು ಸಕ್ರಿಯ ಭಾಗವಹಿಸುವಿಕೆ ಪ್ರಮುಖ ಪಾತ್ರ ವಹಿಸಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) ಶಿಕ್ಷಣ ವ್ಯವಸ್ಥೆಯಲ್ಲಿ ಪರಿವರ್ತನೆ ತರುವ ಉದ್ದೇಶ ಹೊಂದಿದ್ದು, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಹಲವು ಅವಕಾಶಗಳನ್ನು ಒದಗಿಸುತ್ತದೆ. ಯುವಕರು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ಅರ್ಥಮಾಡಿಕೊಂಡು, ಅದರಡಿ ದೊರೆಯುವ ಅವಕಾಶಗಳನ್ನು ಬಳಸಿಕೊಂಡು ಜ್ಞಾನ, ಕೌಶಲ್ಯ ಮತ್ತು ನವೀನ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು” ಎಂದು ರಾಜ್ಯಪಾಲರು ತಿಳಿಸಿದರು.

“ಕರ್ನಾಟಕವನ್ನು ಹಿಂದೆ “ಮೈಸೂರು ರಾಜ್ಯ” ಎಂದು ಕರೆಯಲಾಗುತ್ತಿತ್ತು. 1 ನವೆಂಬರ್ 1973ರಂದು “ಮೈಸೂರು ರಾಜ್ಯ” ಎಂಬ ಹೆಸರನ್ನು ಬದಲಿಸಿ, “ಕರ್ನಾಟಕ” ಎಂದು ಮರುನಾಮಕರಣ ಮಾಡಲಾಯಿತು.  ಬೆಂಗಳೂರು ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕೇಂದ್ರವಾಗಿದ್ದು, ಉತ್ತಮ ಹವಾಮಾನಕ್ಕೂ ಹೆಸರುವಾಸಿಯಾಗಿದೆ. ಕರ್ನಾಟಕವು ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ವೈವಿಧ್ಯಮಯ ಸಾಮಾಜಿಕ ಹಿನ್ನೆಲೆಯನ್ನು ಹೊಂದಿದ್ದು, ರಾಜ್ಯಕ್ಕೆ ಭೇಟಿ ನೀಡುವ ವಿದ್ಯಾರ್ಥಿಗಳಿಗೆ ಭಾರತದ ವೈವಿಧ್ಯತೆಯನ್ನು ಅರಿಯಲು ಉತ್ತಮ ಅವಕಾಶ ಒದಗಿಸುತ್ತದೆ” ಎಂದು ಮಾಹಿತಿ ನೀಡಿದರು.

“‘ಯುವ ಸಂಗಮ’ದಂತಹ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವಿನಿಮಯ ಕಾರ್ಯಕ್ರಮಗಳು ಪರಸ್ಪರ ತಿಳುವಳಿಕೆ, ಸಾಂಸ್ಕೃತಿಕ ವಿನಿಮಯ ಮತ್ತು ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸುವ ಮೂಲಕ ‘ಏಕ್ ಭಾರತ್, ಶ್ರೇಷ್ಠ ಭಾರತ್’ ಪರಿಕಲ್ಪನೆಯನ್ನು ಬಲಪಡಿಸುತ್ತವೆ. ಕರ್ನಾಟಕದ ಪ್ರವಾಸದ ಸಂದರ್ಭದಲ್ಲಿ ಇಲ್ಲಿನ ಶೈಕ್ಷಣಿಕ, ತಾಂತ್ರಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ವೈಶಿಷ್ಟ್ಯಗಳನ್ನು ಅರಿತುಕೊಂಡು, ತಮ್ಮ ಅನುಭವಗಳನ್ನು ಸ್ವರಾಜ್ಯದಲ್ಲಿ ಹಂಚಿಕೊಳ್ಳಿ” ಎಂದು ರಾಜ್ಯಪಾಲರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸೆಂಟ್ರಲ್ ವಿಶ್ವವಿದ್ಯಾಲಯದ ಕರ್ನಾಟಕದ ‘ಯುವ ಸಂಗಮ ಹಂತ-7’ರ ನೋಡಲ್ ಅಧಿಕಾರಿ ಶ್ರೀ ಶಿವ ಹಾಗೂ ಮಧ್ಯಪ್ರದೇಶದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

“ಅನ್ನ ಸೇವಾ” ಮೊಬೈಲ್ ಆ್ಯಪ್‍ಗೆ ಪ್ರಾಯೋಗಿಕವಾಗಿ ಚಾಲನೆ ನೀಡಿದ ಸಚಿವ ರಿಜ್ವಾನ್ ಅರ್ಷದ್

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles