ಬೆಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ (KCCDC) ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2026 ನೇ ಅಕ್ಟೋಬರ್ 31 ರ ವರೆಗೆ ಅವಧಿ ವಿಸ್ತರಿಸಲಾಗಿದೆ(Extension).
ಆಸಕ್ತ ಹಾಗೂ ಅರ್ಹ ಫಲಾನುಭವಿಗಳು ಅಧಿಕೃತ ವೆಬ್ಸೈಟ್: www.kccdclonline.karnataka. gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್: www.kccdclonline.karnataka. gov.in ಅಥವಾ ಇ ಮೇಲ್: kccdc.ho@gmail.com ಅಥವಾ ಸಹಾಯವಾಣಿ (Helpline No): 63607 53075 ನ್ನು ಸಂಪರ್ಕಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ, ಬೆಂಗಳೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

