ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಕೇಂದ್ರ ಬರ ಅಧ್ಯಯನ ತಂಡದೊಂದಿಗೆ  ಸಮಾಲೋಚನೆ – ಎನ್.ಡಿ.ಆರ್.ಎಫ್  ಮಾನದಂಡಗಳನ್ವಯ ಪರಿಹಾರಕ್ಕೆ ಮನವಿ
ಬರದಿಂದಾಗಿ ರಾಜ್ಯದಲ್ಲಿ 46,324.50 ಕೋಟಿ ರೂ. ನಷ್ಟ ಅಂದಾಜು- ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ದೊರಕಿಸಿ : ರೈತರು ಕಂಗಾಲಾದರೆ ಎಲ್ಲವೂ ಸ್ಥಗಿತಗೊಂಡಂತೆ 
ಇಂದಿನಿಂದ ಕೇಂದ್ರ ಬರ ಅಧ್ಯಯನ ತಂಡದಿಂದ ರಾಜ್ಯ ಪ್ರವಾಸ‌ : ವಸ್ತುನಿಷ್ಠ ವರದಿ ಸಲ್ಲಿಕೆ: ಕೇಂದ್ರ ತಂಡ ಮುಖ್ಯಸ್ಥರ ಭರವಸೆ
ಬೆಂಗಳೂರು: ಕರ್ನಾಟಕ ರಾಜ್ಯವು ತೀವ್ರ ಬರ ಪರಿಸ್ಥಿತಿಯನ್ನು(Drought Situation) ಎದುರಿಸುತ್ತಿದ್ದು, ರೈತರು, ಜನಸಾಮಾನ್ಯ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಎನ್.ಡಿ.ಆರ್.ಎಫ್ (NDRF) ಮಾನದಂಡಗಳನ್ವಯ ರಾಜ್ಯಕ್ಕೆ ರೂ.7,142.64 ಕೋಟಿ ಬರ ಪರಿಹಾರ ನೀಡಿ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್(CM D.K.Shivakumar) ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದರು.
ಬರ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್ಸಚಿವಾಲಯ ತಂಡದೊಂದಿಗೆ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಲೋಚನೆ ನಡೆಸಿದರು.
ಕರ್ನಾಟಕ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಒಟ್ಟು 46,324.50 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕ ಸರ್ಕಾರ ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ, 3,701 ಕೋಟಿ ರೂ. ಬರ ಪರಿಹಾರಕ್ಕೆ ಮನವಿ ಮಾಡಿತ್ತು. ಈಗ ಪರಿಷ್ಕೃತ ಪಟ್ಟಿಯಲ್ಲಿ 3,437.34 ಕೋಟಿ ರೂ. ಹೆಚ್ಚುವರಿಯಾಗಿ ಸೇರಿಸಿ ಒಟ್ಟು 7,142.64 ಕೋಟಿ ರೂ. ಪರಿಹಾರಕ್ಕೆ ಮನವಿ ಮಾಡಲಾಗಿದೆ.
ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ದೊರಕಿಸಿ
“ರಾಜ್ಯದಲ್ಲಿ 240 ತಾಲ್ಲೂಕುಗಳ ಪೈಕಿ 217 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಯಾವುದೇ ಒತ್ತಡಗಳಿಗೆ ಜಗ್ಗದೆ, ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅತ್ಯಂತ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಿ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಲಾಗಿದೆ” ಎಂದು ತಿಳಿಸಿದರು.
ರೈತರು ಕಂಗಾಲಾದರೆ ಎಲ್ಲವೂ ಸ್ಥಗಿತಗೊಂಡಂತೆ:
ರೈತರು ಕಂಗಾಲಾದರೆ ಎಲ್ಲವೂ ಸ್ಥಗಿತವಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರವು ರಾಜ್ಯದ ರೈತರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದರು.
ಆಘಾತಕಾರಿ ಪರಿಸ್ಥಿತಿ : 
“ನನ್ನ ಹಾಗೂ ಉಪಮುಖ್ಯಮಂತ್ರಿ ಡಾ. ಪರಮೇಶ್ವರ ಅವರ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಜನರು ಇಷ್ಟು ತೊಂದರೆಗೊಳಗಾಗಿರುವುದನ್ನು ನೋಡಿಲ್ಲ. ಇದು ಅತ್ಯಂತ ಆಘಾತಕಾರಿ ಪರಿಸ್ಥಿತಿ. ಜನಪ್ರತಿನಿಧಿಗಳು ಹಾಗೂ ರೈತರ ಸಮಸ್ಯೆಗಳನ್ನು ಅರಿಯಲು ವಿಶೇಷ ಅಧಿವೇಶನ ಕರೆಯಲಾಗಿತ್ತು. 150 ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಮಾತನಾಡಿದರು” ಎಂದು ವಿವರಿಸಿದರು.
“ರಾಜ್ಯದ ಕೃಷ್ಣಾ ಜಲಾನಯನ ಪ್ರದೇಶ ಹೊರತು ಪಡಿಸಿ ಎಲ್ಲ ಜಲಾಶಯಗಳಲ್ಲಿ ನೀರಿನ ಹರಿವು ಕಡಿಮೆ ಇದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲಿಯೂ ಮಳೆಯ ತೀವ್ರ ಕೊರತೆಯಾಗಿದೆ. ಅದಾಗ್ಯೂ ಕಾವೇರಿ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿಡಬ್ಲ್ಯುಸಿ ಆದೇಶ ನೀಡುತ್ತಿದೆ. ನಗರ ಪ್ರದೇಶಗಳಲ್ಲಿಯೂ ನೀರಿನ ಸಮಸ್ಯೆ ಎದುರಾಗಿದೆ. ರೈತರಿಗೆ ರಾಜ್ಯ ಸರ್ಕಾರದ ಹಂತದಲ್ಲಿ 2500 ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ. ಆದರೆ ಕೇಂದ್ರದಿಂದ ಹೆಚ್ಚಿನ ಸಹಕಾರವನ್ನು ನಿರೀಕ್ಷಿಸುತ್ತಿದ್ದೇವೆ” ಎಂದರು.
ಮುನ್ನೆಚ್ಚರಿಕೆಯ ಕ್ರಮ : 
“ರಾಜ್ಯ ಸರ್ಕಾರದ ಎಲ್ಲ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳೂ ತಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ, ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಾನ್ಯ ಪ್ರಧಾನಮಂತ್ರಿಯವರು ಬರ ಪರಿಸ್ಥಿತಿಯ ಕುರಿತು ರಾಜ್ಯಕ್ಕೆ ಭೇಟಿ ನೀಡಿದಾಗ ಮುನ್ನೆಚ್ಚರಿಕೆ ನೀಡಿದ್ದರು. ಅದರಂತೆ ನಾನೂ ಸಚಿವ ಸಂಪುಟ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆನು. ರೈತರಿಗೂ ಬಿತ್ತನೆ ಕುರಿತು ಮಾರ್ಗದರ್ಶನ ನೀಡಲಾಗಿತ್ತು” ಎಂದು ವಿವರಿಸಿದರು.
“ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕಬ್ಬು ಬೆಳೆಗಾರರು ಹೆಚ್ಚಿನ ಬೆಲೆಗೆ ಒತ್ತಾಯಿಸುತ್ತಿದ್ದಾರೆ. ಅಂತೆಯೇ ಹಾಲು ಉತ್ಪಾದಕರೂ ಕನಿಷ್ಠ 10 ರೂ. ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಈ ಸವಾಲಿನ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಕೆಲಸ ಮಾಡೋಣ” ಎಂದು ಕರೆ ನೀಡಿದರು.
ವಸ್ತುನಿಷ್ಠ ವರದಿ ಸಲ್ಲಿಕೆ: ಕೇಂದ್ರ ತಂಡ ಮುಖ್ಯಸ್ಥರ ಭರವಸೆ : 
ಮುಖ್ಯಮಂತ್ರಿಗಳ ಮನವಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಬರ ಪರಿಸ್ಥಿತಿ ಅಧ್ಯಯನ ತಂಡದ ಮುಖ್ಯಸ್ಥ ಅಜಿತ್ ಕುಮಾರ್ ಸಾಹು ಅವರು ಮಾತನಾಡಿ, “ತಾವು ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಮಾಡಿ ವಸ್ತುಸ್ಥಿತಿ ಅರಿಯುವುದರೊಂದಿಗೆ ದತ್ತಾಂಶಗಳನ್ನೂ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ಪಡೆದುಕೊಂಡು ವಸ್ತುನಿಷ್ಠ ವರದಿ ಸಲ್ಲಿಸುವುದಾಗಿ” ತಿಳಿಸಿದರು.
ಈ ಸಭೆಯಲ್ಲಿ  ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಉಮಾ ಮಹಾದೇವನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ಡೈವ್‌ಆಗರ್ ಕಡಲತೀರದಲ್ಲಿ 8 ವಿದ್ಯಾರ್ಥಿಗಳು ಮುಳುಗಿ ಸಾವು; ಪುಣೆಯ ಕೋಚಿಂಗ್ ಅಕಾಡೆಮಿ ಸೀಲ್

ಪುಣೆ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಡೈವ್‌ಆಗರ್ ಕಡಲತೀರದಲ್ಲಿ(Daivagar Beach) ಪ್ರವಾಸಕ್ಕೆ ತೆರಳಿದ್ದ...

ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಅಬ್ಬರ: ₹95 ಕೋಟಿ ಗಡಿ ದಾಟಿದ ಅಜಯ್ ದೇವಗನ್ ಚಿತ್ರ

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್(Actor Ajay Devagan) ಅಭಿನಯದ ಬಹುನಿರೀಕ್ಷಿತ...

ದೆಹಲಿ ಹೋಟೆಲ್‌ನಲ್ಲಿ ನೆಸ್ಲೆ ಇಂಡಿಯಾದ ಡೈರಿ ವೈಟನರ್ ಮಾರಾಟಕ್ಕೆ FSSAI ನಿಷೇಧ

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ,...

ಖಾರಿಫ್ ಬರ ಪರಿಸ್ಥಿತಿ ಅಧ್ಯಯನ: ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಖಾರಿಫ್(Kaarif) ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು...

ಶಾಸಕರ ಭವನದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ತಪೋವನ ಅಭಿವೃದ್ಧಿಗೆ ನಿರ್ಧಾರ

ಬೆಂಗಳೂರು: ವಿಧಾನಸೌಧದ(Vidhanasoudha) ಬಳಿ ಶಾಸಕರ ಭವನದ ಮುಂಭಾಗದಲ್ಲಿ ವಾಲ್ಮೀಕಿ ಪ್ರತಿಮೆ(Valmeeki Statue) ಇರುವ...

Topics

ಡೈವ್‌ಆಗರ್ ಕಡಲತೀರದಲ್ಲಿ 8 ವಿದ್ಯಾರ್ಥಿಗಳು ಮುಳುಗಿ ಸಾವು; ಪುಣೆಯ ಕೋಚಿಂಗ್ ಅಕಾಡೆಮಿ ಸೀಲ್

ಪುಣೆ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಡೈವ್‌ಆಗರ್ ಕಡಲತೀರದಲ್ಲಿ(Daivagar Beach) ಪ್ರವಾಸಕ್ಕೆ ತೆರಳಿದ್ದ...

ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಅಬ್ಬರ: ₹95 ಕೋಟಿ ಗಡಿ ದಾಟಿದ ಅಜಯ್ ದೇವಗನ್ ಚಿತ್ರ

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್(Actor Ajay Devagan) ಅಭಿನಯದ ಬಹುನಿರೀಕ್ಷಿತ...

ದೆಹಲಿ ಹೋಟೆಲ್‌ನಲ್ಲಿ ನೆಸ್ಲೆ ಇಂಡಿಯಾದ ಡೈರಿ ವೈಟನರ್ ಮಾರಾಟಕ್ಕೆ FSSAI ನಿಷೇಧ

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ,...

ಖಾರಿಫ್ ಬರ ಪರಿಸ್ಥಿತಿ ಅಧ್ಯಯನ: ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಖಾರಿಫ್(Kaarif) ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು...

ಶಾಸಕರ ಭವನದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ತಪೋವನ ಅಭಿವೃದ್ಧಿಗೆ ನಿರ್ಧಾರ

ಬೆಂಗಳೂರು: ವಿಧಾನಸೌಧದ(Vidhanasoudha) ಬಳಿ ಶಾಸಕರ ಭವನದ ಮುಂಭಾಗದಲ್ಲಿ ವಾಲ್ಮೀಕಿ ಪ್ರತಿಮೆ(Valmeeki Statue) ಇರುವ...

ನಯಾರಾ ಎನರ್ಜಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಸ್ಥಳೀಯ ಆರ್ಥಿಕತೆಗೆ ಆತಂಕ

ನಯಾರಾ ಎನರ್ಜಿ(Nayara Energy) ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ₹5 ಹಾಗೂ...

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು:  ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ (KCCDC) ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ...

Related Articles